HD Kumaraswamy: ‘ಹಿರಣ್ಯಾಕ್ಷನ ಪಾಪದ ಕೊಡ ತುಂಬುತ್ತಿದೆ’! ಬಿಡದಿ ಭೂಮಿ ವಿವಾದಕ್ಕೆ ಹೆಚ್‌ ಡಿ ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ಬಿಡದಿಯ ಬೈರಮಂಗಲದಲ್ಲಿ ಪ್ರತಿಭಟನೆ ನಡೆಸಲು ಮುಂದಾದ ರೈತರ ಮೇಲೆ ಅಮಾನುಷವಾಗಿ ದಬ್ಬಾಳಿಕೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು; 'ಹಿರಣ್ಯಾಕ್ಷ'ನ ಪಾಪದ ಕೊಡ ತುಂಬುತ್ತಿದೆ ಎಂದು ಗುಡುಗಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರು, ಕರ್ನಾಟಕದಲ್ಲಿ ನಾಗರಿಕ ಸರಕಾರವಿದೆಯೋ ಅಥವಾ ರಾಕ್ಷಸ ಸರಕಾರ ಇದೆಯೋ? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

HD Kumaraswamy Slams Bidadi Land Issue alleging that land is being caught in grip of real estate interests

HD Kumaraswamy: ಹತ್ತಿಕ್ಕಲೆತ್ನಿಸಿದ ದುಷ್ಪ್ರಯತ್ನ ಖಂಡನಾರ್ಹ

ತಮ್ಮ ಭೂಮಿ ಉಳಿಸಿಕೊಳ್ಳಲು ಬಿಡದಿಯ ರೈತರು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದರೆ, ಬಲಪ್ರಯೋಗದಿಂದ ಅವರನ್ನು ಹತ್ತಿಕ್ಕಲೆತ್ನಿಸಿದ ದುಷ್ಪ್ರಯತ್ನ ಖಂಡನಾರ್ಹ. ಬಿಡದಿಯ ಭೈರಮಂಗಲದಲ್ಲಿ ರೈತರ ಮೇಲೆ ಪೊಲೀಸರು ನಡೆಸಿರುವ ದಬ್ಬಾಳಿಕೆ 'ದೈವದ್ರೋಹ'ಕ್ಕೂ ಮೀರಿದ್ದು ಎಂದು ಸಚಿವರು ಕಿಡಿಕಾರಿದ್ದಾರೆ.

ಧರಣಿ ಕೂರಲು ಪೆಂಡಾಲ್ ಹಾಕಲೆತ್ನಿಸಿದಾಗ ಅದನ್ನು ಕಿತ್ತುಕೊಂಡು ಅನ್ನದಾತರನ್ನು ಉರಿಬಿಸಿಲಿನಲ್ಲೇ ಕೂರಿಸಿದ ಪೊಲೀಸರ ವರ್ತನೆ ಅಕ್ಷಮ್ಯ. ಇಂತಹ ಕೃತ್ಯಗಳನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಬಿಡದಿ ಭೂಮಿ 'ರಿಯಲ್ ಎಸ್ಟೇಟ್ ವ್ಯಾಪಾರಿ' ಕಪಿಮುಷ್ಟಿಗೆ ಸಿಲುಕಿದೆ. ನೆನಪಿರಲಿ, 'ಹಿರಣ್ಯಾಕ್ಷ'ನ ಪಾಪದ ಕೊಡ ತುಂಬುತ್ತಿದೆ ಇಂದು ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

HD Kumaraswamy: 24 ಮಹಿಳಾ ಸಿಬ್ಬಂದಿಗೆ ಗಾಯ, ಚಿಕಿತ್ಸೆ ನೀಡಲು ಸೂಚನೆ

ಮಂಡ್ಯ ಜಿಲ್ಲೆಯ ಹನಕೆರೆ ಸಮೀಪದ ಹೊನಗನಹಳ್ಳಿ ಬಳಿ ಸಂಭವಿಸಿದ ವಾಹನ ಅಪಘಾತದಲ್ಲಿ ಗಾರ್ಮೆಂಟ್ ಕಾರ್ಖಾನೆಯ 24 ಮಹಿಳಾ ಸಿಬ್ಬಂದಿ ಗಾಯಗೊಂಡಿರುವ ಘಟನೆಗೆ ತೀವ್ರ ಕಳವಳ ವ್ಯಕ್ತವಾಗಿದೆ. ಅದೃಷ್ಟವಶಾತ್ ಗಾಯಗೊಂಡಿರುವ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿರುವುದು ಸಮಾಧಾನ ತಂದಿದೆ ಎಂದು ಕೇಂದ್ರ ಸಚಿವರಾದ ಹೆಚ್‌ ಡಿ ಕುಮಾರಸ್ವಾಮಿ ಎಂದರು.

ಘಟನೆ ಕುರಿತು ಮಾಹಿತಿ ದೊರೆತ ಕೂಡಲೇ ಜಿಲ್ಲಾಧಿಕಾರಿಗಳು ಹಾಗೂ ವೈದ್ಯರೊಂದಿಗೆ ಮಾತನಾಡಿ ಗಾಯಾಳುಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆಯಲಾಗಿದೆ. ಗಾಯಗೊಂಡಿರುವ ಎಲ್ಲರಿಗೂ ಸಮರ್ಪಕ ಹಾಗೂ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸೂಚನೆ ನೀಡಲಾಗಿದೆ.

ಗಾಯಾಳುಗಳೆಲ್ಲರೂ ಆದಷ್ಟು ಬೇಗ ಚೇತರಿಸಿಕೊಂಡು ಗುಣಮುಖರಾಗಲಿ ಎಂದು ಹಾರೈಸಲಾಗಿದೆ. ಘಟನೆಯ ಬಗ್ಗೆ ಸಾರ್ವಜನಿಕರು ಹಾಗೂ ಕುಟುಂಬಸ್ಥರು ಗಾಬರಿಗೊಳ್ಳುವ ಅಗತ್ಯವಿಲ್ಲ ಎಂದು ಮನವಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+