ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆಯಾಗಿದೆ: ವಿದ್ಯುತ್ ದರ ಏರಿಕೆ ಬಗ್ಗೆ HDK

|
Google Oneindia Kannada News

ಬೆಂಗಳೂರು, ಏ.4: ರಾಜ್ಯದಲ್ಲಿ ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಪೆಟ್ರೋಲ್, ಡಿಸೇಲ್, ಗ್ಯಾಸ್, ಅಡುಗೆ ಎಣ್ಣೆ ಹೀಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನರ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿದೆ. ಹೀಗೆ ರಾಜ್ಯದಲ್ಲಿ ನಿತ್ಯ ಒಂದಿಲ್ಲಾ ಒಂದು ವಸ್ತುಗಳ ಬೆಲೆ ಏರಿಕೆಯ ವಿರುದ್ಧ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ ಅವರು ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದಾರೆ.

''ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜತೆ ಜತೆಗೇ, ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ. ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಸರಕಾರ, ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ" ಎಂದು ಟೀಕಿಸಿದ್ದಾರೆ.

"ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು. ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಇಲ್ಲದೆ ಬೀದಿಯಲ್ಲಿದ್ದಾರೆ. ರಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜನರನ್ನು ಬೆಲೆ ಏರಿಕೆ ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರಕಾರ ಶುರು ಮಾಡಿದೆ. ಲೋಡ್ ಶೆಡ್ಡಿಂಗ್ ತೆಗೆದು ಗುಣಮಟ್ಟದ ವಿದ್ಯುತ್ ಪೂರೈಕೆ ಸರಕಾರದ ಕರ್ತವ್ಯ" ಎಂದರು.

Electricity Prices Rise: HDK Spark Against the BJP

ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರಕಾರ, ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂದು ದೂರಿದ್ದಾರೆ.

Recommended Video

Basavaraj Bommai ನಿವಾಸಕ್ಕೆ ಭೇಟಿ ನೀಡಿದ Smriti Irani | Oneindia Kannada

English summary
Electricity prices have risen amid rising prices of essential commodities in the state. Former CM HD Kumaraswamy Garam against BJP
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X