ಹಿಂದಿ ಹೇರಿಕೆ: ಬ್ರಿಟೀಷರಿಗೂ ಬಿಜೆಪಿಗೂ ವ್ಯತ್ಯಾಸವಿಲ್ಲ- ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು, ಏ. 9: ಕೇಂದ್ರ ಸರ್ಕಾರದಿಂದ ಹಿಂದಿ ಹೇರಿಕೆ ಮಾಡುತ್ತಿರುವುದು ನೋಡಿದರೆ ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ ಎನ್ನುವುದಕ್ಕೆ ಇದೇ ಜೀವಂತ ಸಾಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ.

ಬ್ರಿಟಿಷರು ಪ್ರತಿ ಸಂಸ್ಥಾನವನ್ನು ಆಕ್ರಮಿಸಿಕೊಳ್ಳುವ ಮುನ್ನ ಒಡೆದು ಆಳುವ ನೀತಿ ಅನುಸರಿಸುತ್ತಿದ್ದರು. ಈಗ ಬಿಜೆಪಿ ಅದೇ ನೀತಿ ಮುಂದುವರೆಸಿದೆ ಎಂದು ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ.

ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಕಳೆದ 75 ವರ್ಷಗಳಿಂದ ಒಂದೇ ತಾಯಿಯ ಮಕ್ಕಳಂತೆ ಇರುವ ರಾಜ್ಯಗಳ ನಡುವೆ ಕೇಂದ್ರ ಗೃಹ ಸಚಿವ @AmitShah ಅವರು ಹುಳಿ ಹಿಂಡಿ, ಹಿಂದಿ ಹೇರಿಕೆ ಬಗ್ಗೆ ಹೇಳಿಕೆ ನೀಡುತ್ತಿರುವುದು ಆಘಾತಕಾರಿ.

HD Kumaraswamy Slams BJP govt over Hindi Language Imposition

ಪ್ರತಿಯೊಂದಕ್ಕೂ ಹಿಂದುತ್ವದ ಜಪ ಮಾಡಿ ಭಾವನಾತ್ಮಕ ವಿಷಯಗಳನ್ನು ಮುನ್ನೆಲೆಗೆ ತಂದು ಸಮಾಜ ಮತ್ತು ಜನರನ್ನು ಒಡೆಯುತ್ತಿರುವ ಬಿಜೆಪಿ, ಈಗ ಭಾಷೆಯನ್ನೂ ಟೂಲ್ ಕಿಟ್ ಮಾಡಿಕೊಂಡು ವಿಭಜನೆಗೆ ಹೊರಟಿರುವುದು ದೇಶಕ್ಕೆ ಗಂಡಾಂತರಕಾರಿ.

HD Kumaraswamy Slams BJP govt over Hindi Language Imposition

ಅಮಿತ್ ಶಾ ಅವರಿಗೆ ಇಂಗ್ಲಿಷ್ ಬರಲ್ವಾ? ಅವರಿಗೆ ಪ್ರಾದೇಶಿಕ ಭಾಷೆಗಳ ಮೇಲೆ ಯಾಕೆ ಈ ಪರಿ ದ್ವೇಷ? ನಮ್ಮ ಭಾಷೆ ನಮಗೆ ಮುಖ್ಯ. ಮಾತೃಭಾಷೆಗೇ ಅಗ್ರಸ್ಥಾನ. ಕರ್ನಾಟಕದಲ್ಲಿ ಕನ್ನಡವೇ ಮೊದಲು. ಹಿಂದಿ ನಮ್ಮ ಭಾಷೆಯಲ್ಲ. ಹಿಂದಿ ಹೇರಿಕೆ ವಿರುದ್ದ ಅಭಿಯಾನಕ್ಕೆ ನನ್ನ ಪೂರ್ಣ ಬೆಂಬಲ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Recommended Video

      Rahul Tewatia ಹಾಗು ಪಂಜಾಬ್ ತಂಡದ ವಿಚಿತ್ರ ಸಂಬಂಧ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+