HD Kumaraswamy: ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ??: ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ
ಬೆಂಗಳೂರು, ಜೂನ್ 13: ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ?? ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿರುವ ಬಗ್ಗೆ ಸರಕಾರದ ವಿರುದ್ಧ ಟೀಕಾಪ್ರಹಾರ ನಡೆಸಿರುವ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ್ದಾರೆ.
ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ. ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹತ್ತನೇನಂಬರಿನಹಂಗಿನ_ಸರಕಾರ ಎಂದು ಹ್ಯಾಷ್ ಟ್ಯಾಗ್ ಬಳಸಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಸರಕಾರದ ಅಧಿಕೃತ ಸಭೆಗಳನ್ನು ಹೈಕಮಾಂಡಿನ ನಿಲಯದ ಕಲಾವಿದರೇ ನಡೆಸುವ ಕರ್ಮ ಕರ್ನಾಟಕದ್ದು! ನಾನು ಟ್ಯಾಗ್ ಮಾಡಿರುವ ಫೋಟೋ ಆ ದೈನೇಸಿ ಸ್ಥಿತಿಗೆ ಸಾಕ್ಷಿ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಅವರಿಗೆ ಸರಕಾರದ ಸಭೆಗಳನ್ನು ನಡೆಸುವ ಜವಾಬ್ದಾರಿ, ಅವಕಾಶ ಕೊಟ್ಟವರು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿರುವುದು ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಸರಕಾರವೋ ಅಥವಾ ದಿಲ್ಲಿಯ ಜನಪಥ ರಸ್ತೆಯ 10ನೇ ನಂಬರಿನ ಹಂಗಿನ ಸರಕಾರವೋ? ಕನ್ನಡಿಗರು ಮತ ಹಾಕಿದ್ದು ಕೈ ಸರಕಾರಕ್ಕಾ?ಅಥವಾ ಕೈಗೊಂಬೆ ಸರಕಾರಕ್ಕಾ??
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 13, 2023
ಪಾಪ.. ಜನರ ವೋಟು ಹಂಗಿನ ಸರಕಾರದ ಪಾಲಾಗಿದೆ.ಸರಕಾರಕ್ಕೆ ತಿಂಗಳು ತುಂಬುವ ಮೊದಲೇ ಅದು ಸಾಬೀತಾಗಿದೆ.1/3#ಹತ್ತನೇ_ನಂಬರಿನ_ಹಂಗಿನ_ಸರಕಾರ pic.twitter.com/gUxStWCgrx
ಸಭೆಯಲ್ಲಿ ಹಿರಿಯ ಸಚಿವರಿದ್ದಾರೆ! ಹಿರಿಯ ಐಎಎಸ್ ಅಧಿಕಾರಿಗಳೂ ಹಾಜರಿದ್ದಾರೆ!! ಅಲ್ಲಿಗೆ ಇದು ಅಧಿಕೃತ ಸಭೆಯೇ ಆಯಿತು. ಆದರೆ, ಅಲ್ಲಿ ಸುರ್ಜೆವಾಲಾ ಸೆಂಟರ್ ಸೀಟಿನಲ್ಲಿದ್ದಾರೆ! ಸಚಿವರು ಸೈಡು ಕುರ್ಚಿಗಳ ಪಾಲಾಗಿದ್ದಾರೆ!! ಇದೇನು ವಿಚಿತ್ರ? ಮಾನ್ಯ ಮುಖ್ಯಮಂತ್ರಿಗಳೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.












Click it and Unblock the Notifications