• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಚ್ಚೇದಿನ್ ಈಗ ದುಸ್ವಪ್ನವಾಗಿ ಕಾಡುತ್ತಿದೆ; ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜೂನ್ 10; ಕೋವಿಡ್ ಸಂಕಷ್ಟದ ಕಾಲದಲ್ಲಿ ಕರ್ನಾಟಕ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸುವ ಜನರು ಇದರಿಂದಾಗಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ.

   ಇಂತಹ ಅಚ್ಛೆದಿನ್ ಬರದೇ ಇದ್ದಿದ್ರು ಚೆನ್ನಾಗಿರ್ತಾ ಇತ್ತು | Oneindia Kannada

   ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರಣಿ ಟ್ವೀಟ್‌ಗಳ ಮೂಲಕ ಸರ್ಕಾರದ ತೀರ್ಮಾನವನ್ನು ಖಂಡಿಸಿದ್ದಾರೆ. "ಜನರಿಗೆ ಬಿಜೆಪಿ ತೋರಿದ ಅಚ್ಚೇದಿನದ ಕನಸು ಇದೇನಾ? ಅದು ಕನಸಾಗಿ ಉಳಿದಿದ್ದರೆ ಚನ್ನಾಗಿರುತ್ತಿತ್ತು. ಈಗ ದುಸ್ವಪ್ನವಾಗಿ ಕಾಡುತ್ತಿದೆ" ಎಂದು ಟೀಕಿಸಿದ್ದಾರೆ.

   Breaking news! ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ Breaking news! ಕರ್ನಾಟಕದಲ್ಲಿ ವಿದ್ಯುತ್ ದರ ಏರಿಕೆ

   "ಹಲವು ದೇಶಗಳಲ್ಲಿ, ಅಷ್ಟೇ ಏಕೆ... ಪಕ್ಕದ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ವಿದ್ಯುತ್‌ ಬಿಲ್‌ ತಡೆಯಲಾಗಿದೆ. ಅಥವಾ ಕಡಿಮೆ ಮಾಡಲಾಗಿದೆ" ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದು, ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಅಗತ್ಯವಿರುವ ರಾಜ್ಯಗಳಿಗೆ ಹೆಚ್ಚುವರಿ ವಿದ್ಯುತ್ ಮಾರಾಟಕ್ಕೆ ರಾಜ್ಯ ಸರ್ಕಾರ ನಿರ್ಧಾರ ಅಗತ್ಯವಿರುವ ರಾಜ್ಯಗಳಿಗೆ ಹೆಚ್ಚುವರಿ ವಿದ್ಯುತ್ ಮಾರಾಟಕ್ಕೆ ರಾಜ್ಯ ಸರ್ಕಾರ ನಿರ್ಧಾರ

   ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ ಎಸ್ಕಾಂಗಳು ಗ್ರಾಹಕರಿಗೆ ಪೂರೈಕೆ ಮಾಡುವ ಪ್ರತಿ ಯೂನಿಟ್ ವಿದ್ಯುತ್ ದರವನ್ನು 30 ಪೈಸೆಯಷ್ಟು ಏರಿಕೆ ಮಾಡುವುದಕ್ಕೆ ಅನುಮತಿ ನೀಡಿದೆ. ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ದರ ಜಾರಿಗೆ ಬರಲಿದೆ.

   ಕುಕ್ಕೆ ಸುಬ್ರಹ್ಮಣ್ಯಕ್ಕೆ ಇನ್ಮುಂದೆ ನಿರಂತರ ವಿದ್ಯುತ್ ಪೂರೈಕೆಕುಕ್ಕೆ ಸುಬ್ರಹ್ಮಣ್ಯಕ್ಕೆ ಇನ್ಮುಂದೆ ನಿರಂತರ ವಿದ್ಯುತ್ ಪೂರೈಕೆ

   ಬಾಕಿ ವಸೂಲಿಗೆ ನಿಂತಿದೆ

   ಬಾಕಿ ವಸೂಲಿಗೆ ನಿಂತಿದೆ

   "ಸರ್ಕಾರ ವಿದ್ಯುತ್‌ ದರ ಏರಿಸಿದೆ. ಯೂನಿಟ್‌ ವಿದ್ಯುತ್‌ ಮೇಲೆ 30 ಪೈಸೆ ಏರಿಸಲಾಗಿದೆ. ಏ. 1ರಿಂದ ದರ ಪೂರ್ವಾನ್ವಯವೂ ಆಗಲಿದೆ. ಹಿಂಬಾಕಿಯನ್ನು ಅಕ್ಟೋಬರ್‌-ನವೆಂಬರ್‌ನಲ್ಲಿ ವಸೂಲಿ‌ ಮಾಡಲಾಗುತ್ತದೆ. ಕೊರೊನಾ ಕಾಲದಲ್ಲಿ ಹಲವು ರಾಜ್ಯಗಳು ವಿದ್ಯುತ್‌ ಬಿಲ್‌ ರದ್ದು ಮಾಡಿರುವಾಗ ರಾಜ್ಯ ಸರ್ಕಾರ ದರ ಏರಿಕೆ ಜೊತೆ ಬಾಕಿ ವಸೂಲಿಗೂ ನಿಂತಿದೆ" ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

   3 ತಿಂಗಳು ರದ್ದು ಮಾಡಬೇಕಿತ್ತು

   3 ತಿಂಗಳು ರದ್ದು ಮಾಡಬೇಕಿತ್ತು

   "ಕೋವಿಡ್‌ ಮತ್ತು ಲಾಕ್‌ಡೌನ್‌ಗಳಲ್ಲಿ ಜನ ಕಷ್ಟಪಟ್ಟು ಜೀವ ಉಳಿಸಿಕೊಂಡಿದ್ದಾರೆ. ತ್ರಾಸದ ಜೀವನ ನಡೆಸಿದ್ದಾರೆ. ಇನ್ನಷ್ಟೇ ದುಡಿದು ಜೀವನ ನಡೆಸಬೇಕಾದ ಜನರ ಮೇಲೆ ಸರ್ಕಾರಕ್ಕೆ ಏಕೆ ದ್ವೇಷ? ಲಾಕ್‌ಡೌನ್‌ ಘೋಷಿಸಿದ್ದ ಸರ್ಕಾರ ವಾಸ್ತವದಲ್ಲಿ ವಿದ್ಯುತ್‌, ನೀರಿನ ಬಿಲ್‌ಅನ್ನು 3 ತಿಂಗಳು ರದ್ದು ಮಾಡಬೇಕಿತ್ತು. ಆದರೀಗ ವಸೂಲಿ ಮಾಡಲಾಗುತ್ತಿದೆ" ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

   ದೌರ್ಜನ್ಯದ ಕ್ರಮಕ್ಕೆ ಮುಂದಾಗಿದೆ

   ದೌರ್ಜನ್ಯದ ಕ್ರಮಕ್ಕೆ ಮುಂದಾಗಿದೆ

   "ಹಲವು ದೇಶಗಳಲ್ಲಿ, ಅಷ್ಟೇ ಏಕೆ... ಪಕ್ಕದ ಕೇರಳ, ತಮಿಳುನಾಡು ರಾಜ್ಯಗಳಲ್ಲಿ ವಿದ್ಯುತ್‌ ಬಿಲ್‌ ತಡೆಯಲಾಗಿದೆ. ಅಥವಾ ಕಡಿಮೆ ಮಾಡಲಾಗಿದೆ. ಕೋವಿಡ್‌ ಪ್ಯಾಕೇಜ್‌ನಲ್ಲಿ ಇದನ್ನು ಘೋಷಿಸಲಾಗಿದೆ. ಪ್ಯಾಕೇಜ್‌ನಲ್ಲಿ ಸಮಾನ್ಯ ಜನರನ್ನು ವಂಚಿಸಿದ ರಾಜ್ಯದ ಬಿಜೆಪಿ ಸರ್ಕಾರ ಈಗ ದರ ಏರಿಕೆ, ಬಾಕಿ ವಸೂಲಿ ಮೂಲಕ ದೌರ್ಜನ್ಯದ ಕ್ರಮಕ್ಕೆ ಮುಂದಾಗಿದೆ" ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

   ಈಗ ದುಸ್ವಪ್ನವಾಗಿ ಕಾಡುತ್ತಿದೆ

   "ಬಸ್‌ ಟಿಕೆಟ್‌ ದರ ಏರಿಸುವ ಮುನ್ಸೂಚನೆಯನ್ನೂ ನೀಡಿದೆ. ಜನರಿಗೆ ಬಿಜೆಪಿ ತೋರಿದ ಅಚ್ಚೇದಿನದ ಕನಸು ಇದೇನಾ? ಅದು ಕನಸಾಗಿ ಉಳಿದಿದ್ದರೆ ಚನ್ನಾಗಿರುತ್ತಿತ್ತು. ಈಗ ದುಸ್ವಪ್ನವಾಗಿ ಕಾಡುತ್ತಿದೆ" ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

   ವಿದ್ಯುತ್ ದರ ಏರಿಕೆ ಅನಗತ್ಯ

   "ನಷ್ಟ ಸರಿದೂಗಿಸಲು, ಸಂಪನ್ಮೂಲ ಸಂಗ್ರಹಿಸಲು ದರ ಏರಿಕೆ ಅನಿವಾರ್ಯ,‘ ಎಂಬ ಸಿದ್ಧ ಉತ್ತರವನ್ನು ಸರ್ಕಾರ ಹೇಳಬಾರದು. ಕರ್ನಾಟಕದ ಆರ್ಥಿಕ ಪರಿಸ್ಥಿತಿ, ಸಂಪನ್ಮೂಲ ಉತ್ತಮವಾಗಿಯೇ ಇದೆ. ಎರಡು ಬಾರಿ ಸಿಎಂ ಆದ ನನಗೆ ಅದರ ಸ್ಪಷ್ಟ ಅರಿವಿದೆ. ತಿಂದು ತೇಗುವುದನ್ನು ನಿಲ್ಲಿಸಿದರೆ ದರ ಏರಿಕೆಯೇ ಬೇಕಿಲ್ಲ. ಈಗಿನ ವಿದ್ಯುತ್‌ ದರ ಏರಿಕೆಯೂ ಅನಗತ್ಯ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

   English summary
   Former chief minister H. D. Kumaraswamy slammed the government for power tariff. Government announced an average hike in electricity tariff by 30 paise per unit.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X