ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೊಮ್ಮಾಯಿ- ಸಿದ್ದರಾಮಯ್ಯ- ಕುಮಾರಸ್ವಾಮಿ ನಡುವೆ 'ಕುರಿ - ಕಂಬಳಿ ಫೈಟ್' ಜೋರು!

|
Google Oneindia Kannada News

ಬೆಂಗಳೂರು, ಅ 25: ಉಪ ಚುನಾವಣೆಯ ಪ್ರಚಾರದ ವೇಳೆ ಮೂರೂ ಪಕ್ಷಗಳ ನಾಯಕರ ಮಾತಿನ ಬಾಣ ತೀಕ್ಷ್ಣಗೊಳ್ಳುತ್ತಿದೆ. ಅವರ ಬಂಡವಾಳ ಎಲ್ಲಾ ಗೊತ್ತಿದೆ, ಎಲ್ಲಾ ಬಿಚ್ಚಿಡುತ್ತೇನೆ ಎಂದು ಹೇಳುವ ನಾಯಕರುಗಳು, ಅದೇನು ಬಂಡವಾಳ ಎನ್ನುವುದನ್ನು ಬಹಿರಂಗ ಪಡಿಸದೇ ನುಣುಚಿಕೊಳ್ಳುತ್ತಿದ್ದಾರೆ.

ಇದರ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡುವೆ ಕುರಿ, ಕಂಬಳಿ ಜಗಳ ಜೋರಾಗಿ ನಡೆಯುತ್ತಿದೆ. ಬೊಮ್ಮಾಯಿ ಮತ್ತು ಸಿದ್ದರಾಮಯ್ಯ ನಡುವೆ ನಡೆಯುತ್ತಿದ್ದ ಫೈಟಿಗೆ ಕುಮಾರಸ್ವಾಮಿ ಈಗ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದಾರೆ.

ದೇವೇಗೌಡರನ್ನು ಒದ್ದುಕೊಂಡು ಕುಳಿತುಕೊಳ್ಳುತ್ತಿದ್ದ ಸಿದ್ದರಾಮಯ್ಯ; ಎಚ್‌ಡಿಕೆ ಆರೋಪದೇವೇಗೌಡರನ್ನು ಒದ್ದುಕೊಂಡು ಕುಳಿತುಕೊಳ್ಳುತ್ತಿದ್ದ ಸಿದ್ದರಾಮಯ್ಯ; ಎಚ್‌ಡಿಕೆ ಆರೋಪ

ಹಾನಗಲ್ ಕ್ಷೇತ್ರದ ಉಪ ಚುನಾವಣಾ ಪ್ರಚಾರದಲ್ಲಿ ಮಾತನಾಡುತ್ತಿದ್ದ ಸಿಎಂ ಬಸವರಾಜ ಬೊಮ್ಮಾಯಿ, "ಉಣ್ಣೆಯನ್ನು ನೇಯ್ದು ಕಂಬಳಿ ಮಾಡಲಾಗುತ್ತದೆ. ಇದರ ಹಿಂದೆ ಹಾಲುಮತದವರ ಗೌರವ ಮತ್ತು ಪರಿಶ್ರಮ ಅಡಗಿದೆ. ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಇರಬೇಕು" ಎಂದು ಸಿದ್ದರಾಮಯ್ಯನವರ ವಿರುದ್ದ ಪರೋಕ್ಷ ವಾಗ್ದಾಳಿ ನಡೆಸಿದ್ದರು.

ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ, "ಬಸವರಾಜ ಬೊಮ್ಮಾಯಿ ಭಾಷಣ ಹೊಡೆದಿದ್ದಾನೆ. ಸೀನಿಯರ್ ಮತ್ತು ಜ್ಯೂನಿಯರ್ ಬೊಮ್ಮಾಯಿ ಎಂದಾದರೂ ಕುರಿ ಕಾಯ್ದಿದ್ದಾರಾ? ನಾನು ಕುರಿ ಕಾದಿದ್ದೇನೆ"ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಮತ್ತು ಬೊಮ್ಮಾಯಿ ನಡುವಿನ ಈ ವಾಕ್ಸಮರದ ವಿಚಾರದಲ್ಲಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಕಾಂಗ್ರೆಸ್ ಸದಸ್ಯತ್ವಕ್ಕೆ ಹಲವು ಷರತ್ತುಗಳು: ಬಿಜೆಪಿಗೆ ಕಾಡಿದ ಪ್ರಶ್ನೆಗಳುಕಾಂಗ್ರೆಸ್ ಸದಸ್ಯತ್ವಕ್ಕೆ ಹಲವು ಷರತ್ತುಗಳು: ಬಿಜೆಪಿಗೆ ಕಾಡಿದ ಪ್ರಶ್ನೆಗಳು

 ಕಂಬಳಿಯನ್ನು ಯಾರು ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ - ಸಿಎಂ

ಕಂಬಳಿಯನ್ನು ಯಾರು ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ - ಸಿಎಂ

"ಕನಕದಾಸರ ಜನ್ಮಸ್ಥಳ ಬಾಡ ಹಾಗೂ ಅವರ ಕರ್ಮಭೂಮಿ ಕಾಗಿನೆಲೆಯನ್ನು ಬಿಜೆಪಿ ಅಧಿಕಾರದ ಅವಧಿಯಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಹಾಲುಮತ ಸಮಾಜ ಇಂದಿಗೂ ಅದೇ ಸ್ಥಿತಿಯಲ್ಲಿದೆ. ಸಣ್ಣ ಸಣ್ಣ ಕಸುಬುಗಳನ್ನು ಮಾಡುವವರು ಸಹ ಅದೇ ಸ್ಥಿತಿಯಲ್ಲಿದ್ದಾರೆ. ಅಲ್ಪಸಂಖ್ಯಾತರಿಗೆ ಈ ಹಿಂದಿನ ಸರ್ಕಾರಗಳು ಕೇವಲ ಚುನಾವಣೆಗೆ ಬಳಸಿಕೊಂಡರು ಅವರನ್ನು ಅಂಧಕಾರದಲ್ಲಿ ಇಟ್ಟಿದ್ದಾರೆ. ಉಣ್ಣೆ ಕಂಬಳಿಯನ್ನು ಯಾರು ಬೇಕಾದರೂ ಹಾಕಿಕೊಂಡರೆ ಯೋಗ್ಯತೆ ಬರುವುದಿಲ್ಲ"ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದರು.

 ಮುಖ್ಯಮಂತ್ರಿಗಳ ಹೇಳಿಕೆಗೆ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ

ಮುಖ್ಯಮಂತ್ರಿಗಳ ಹೇಳಿಕೆಗೆ ಸಿದ್ದರಾಮಯ್ಯ ನೀಡಿರುವ ಪ್ರತಿಕ್ರಿಯೆ

ಮುಖ್ಯಮಂತ್ರಿಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ, "ಕಂಬಳಿ ಹಾಕಿಕೊಳ್ಳಬೇಕಾದರೆ ಯೋಗ್ಯತೆ ಬೇಕು ಎಂದು ಅವನು (ಸಿಎಂ) ಹೇಳುತ್ತಾನೆ. ನಮ್ಮ ಮನೆಯಲ್ಲೂ ಕುರಿಗಳು ಇದ್ದವು, ಮಲಗುವಾಗ ಕರಿಕಂಬಳಿ ಹೊದ್ದು ಕೊಳ್ಳುತ್ತೇನೆ. ನೀನು ಯಾವತ್ತಾದರೂ ಕರಿ ಕಂಬಳಿ ಹೊದ್ದು ಮಲಗಿದ್ದೀಯೇನಪ್ಪಾ? ಕುರುಬ ಜನಾಂಗದಿಂದ ಬಂದವನು ನಾನು" ಎಂದು ಏಕ ವಚನದಲ್ಲಿ ಸಿಎಂಗೆ ತಿರುಗೇಟು ನೀಡಿದ್ದಾರೆ. ಆ ವೇಳೆ, ಕಾರ್ಯಕರ್ತರೊಬ್ಬರು ಸಿದ್ದರಾಮಯ್ಯನವರ ಹೆಗಲ ಮೇಲೆ ಕರಿ ಕಂಬಳಿ ಹಾಕಿದರು.

 ಸಿದ್ದರಾಮಯ್ಯ ವಿರುದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಸಿದ್ದರಾಮಯ್ಯ ವಿರುದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

"ಮುಖ್ಯಮಂತ್ರಿ ಬೊಮ್ಮಾಯಿ ಅವರು ಯಾವ ಕುರಿ ಕಾಯ್ದವರೇ ಎಂದು ಲಘುವಾಗಿ ಮಾತನಾಡಿದ್ದಾರೆ ಸಿದ್ದರಾಮಯ್ಯ. ಇವರೊಬ್ಬರೇನಾ ಕುರಿ ಕಾಯ್ದವರು? ಚಿಕ್ಕ ಮಕ್ಕಳಿದ್ದಾಗ ನಾವು ಕುರಿ ಮಂದೆಯಲ್ಲೇ ಊಟ ಮಾಡಿ ಅಲ್ಲೇ ಮಲಗುತ್ತಿದ್ದೆವು. ನಾವು ಕೂಡ ಕುರಿ ಸಾಕಿದ್ದೇವೆ, ಈಗಲೂ ಸಾಕುತ್ತಿದ್ದೇವೆ. ಬೇಕಾದರೆ ಬಿಡದಿ ತೋಟಕ್ಕೆ ಬಂದು ನೋಡಲಿ. ಕುರಿ ಸಾಕಣೆ ಮಾಡಿದವರು ಸಿದ್ದರಾಮಯ್ಯ ಒಬ್ಬರೇ ಅಲ್ಲ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

 ಕುಮಾರಸ್ವಾಮಿ ನೇಗಿಲು ಹಿಡಿದವ್ನಾ? ಕೃಷಿ ಮಾಡವ್ನಾ? ಕೂಲಿ ಮಾಡವ್ನಾ?

ಕುಮಾರಸ್ವಾಮಿ ನೇಗಿಲು ಹಿಡಿದವ್ನಾ? ಕೃಷಿ ಮಾಡವ್ನಾ? ಕೂಲಿ ಮಾಡವ್ನಾ?

"ಮೊನ್ನೆ ಹಾನಗಲ್‌ನಲ್ಲಿ ಭಾಷಣ ಮಾಡುತ್ತಿದ್ದರು ಇದೇ ಮಹಾನುಭಾವರು. ಕುಮಾರಸ್ವಾಮಿ ನೇಗಿಲು ಹಿಡಿದವ್ನಾ? ಕೃಷಿ ಮಾಡವ್ನಾ? ಕೂಲಿ ಮಾಡವ್ನಾ? ಅವನಿಗೇನು ಗೊತ್ತು ಕೃಷಿ? ಎಂದು ಕೇವಲವಾಗಿ ಮಾತನಾಡಿದ್ದಾರೆ. ನಾನು ಯಾವ ರೀತಿ ಕೃಷಿ ಮಾಡುತ್ತಿದ್ದೇನೆ ಎನ್ನುವುದನ್ನು ಅವರು ನನ್ನ ತೋಟಕ್ಕೆ ಬಂದು ನೋಡಲಿ. ಸಿದ್ದರಾಮಯ್ಯ ಏನು ಮಾಡಿದ್ದಾರೆ? ಅವರದ್ದು ತೋಟ ಇರಬೇಕಲ್ಲಾ? ಏನೇನು ಮಾಡಿದ್ದಾರೋ ಹೇಳಲಿ. ನಾವು ಕೂಲಿಯನ್ನೂ ಮಾಡಿದ್ದೇವೆ, ನೇಗಿಲನ್ನೂ ಹಿಡಿದಿದ್ದೇವೆ, ತಲೆಯ ಮೇಲೆ ಗೊಬ್ಬರವನ್ನೂ ಹೊತ್ತಿದ್ದೇವೆ. ಇವರೊಬ್ಬರೇ ಅಲ್ಲ" ಎಂದು ಕುಮಾರಸ್ವಾಮಿಯವರು ಮೈಸೂರಿನಲ್ಲಿ ತಿರುಗಗೇಟು ನೀಡಿದ್ದಾರೆ.

Recommended Video

ಪಾಕಿಸ್ತಾನ ಗೆದ್ದ ನಂತರ ಬಾಬರ್ ಅವರ ತಂದೆಯ ವಿಡಿಯೋ ವೈರಲ್ | Oneindia Kannada

English summary
HD Kumaraswamy slams Opposition Leader Siddaramaiah Over Sheep Fight. Read on,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X