ಚಿಕ್ಕಬಳ್ಳಾಪುರದಲ್ಲಿ ಎಚ್ಡಿಕೆ ಪುತ್ರ ನಿಖಿಲ್ ಕುಮಾರ್ ಸಂಚಲನ

ಚಿಕ್ಕಬಳ್ಳಾಪುರ, ಏ 19: ನಟ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ಅವರು ಗುರುವಾರ (ಏ 19) ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು.

ರೈತರ ಸಾಲಮನ್ನಾ ಉದ್ದೇಶಕ್ಕಾಗಿ ಈ ಬಾರಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಬೆಂಬಲಿಸುವಂತೆ ನಿಖಿಲ್ ಕೋರಿದರು. ಜೆಡಿಎಸ್ ಪರ ಪ್ರಚಾರಕ್ಕೆ ಧುಮುಕಿದ್ದ ನಿಖಿಲ್ ಕುಮಾರ್ ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಪಕ್ಷದ ಮುಖಂಡರು ಸಾಥ್ ನೀಡಿದರು.

ಪ್ರಚಾರದ ವೇಳೆ ಹಿರಿಯ ನಾಗರಿಕರಿಂದ ಆಶೀರ್ವಾದ ಪಡೆದ ನಿಖಿಲ್, ಮಕ್ಕಳೊಂದಿಗೆ ಬೆರೆತು, ಹಸಗೂಸುಗಳನ್ನು ಎತ್ತಿ ಮುದ್ದಿಸಿ. ದೀನ, ದುರ್ಬಲರ ಮನೆಗಳಿಗೆ ಭೇಟಿ ನೀಡಿ ರೋಗಿಗಳಿಗೆ ಧೈರ್ಯ ತುಂಬಿದರು.

HD Kumaraswamy son Nikhil Kumar campaign for party in Chikkaballapura

ಮುಂದಿನ ಎಚ್ಡಿಕೆ ಸರ್ಕಾರ ರೈತ, ಬಡವ ಬಲ್ಲಿದರಾದ್ದಾಗಲಿದೆ ಎಂದು ಹೇಳುವ ಮೂಲಕ ನಿಖಿಲ್ ಭರವಸೆ ಮೂಡಿಸಿದರು. ನಂತರ ಜಿಲ್ಲೆಯ ಮುಖಂಡರು, ಕಾರ್ಯಕರ್ತರ ಸಭೆ ನಡೆಸಿ, ಚುನಾವಣೆಯ ತಯಾರಿ, ರೂಪಿಸಬೇಕಾದ ರಣತಂತ್ರಗಳ ಬಗ್ಗೆ ಚರ್ಚೆ ನಡೆಸಿದರು. ಮುಖಂಡರಿಗೆ ಕೆಲ ಸಲಹೆ ಸೂಚನೆಗಳನ್ನೂ ನೀಡಿದರು.

ಈ ವೇಳೆ ಮಾತನಾಡಿದ ಚಿಕ್ಕಬಳ್ಳಾಪುರ ಜೆಡಿಎಸ್ ಅಭ್ಯರ್ಥಿ ಬಚ್ಚೇಗೌಡ, ಕುಮಾರಸ್ವಾಮಿ ಅವರು ಇಷ್ಟ ಆಗುವುದು ಅವರ ಸರಳತೆ ಕಾರಣಕ್ಕೆ. ಯಾರೇ ಹೋದರು ಅವರನ್ನು ನೇರವಾಗಿ ಭೇಟಿ ಮಾಡುವ ಅವಕಾಶವನ್ನು ಎಚ್ಡಿಕೆ ಕಲ್ಪಿಸಿದ್ದಾರೆ ಎಂದು ಹೊಗಳಿದ್ದಾರೆ.

HD Kumaraswamy son Nikhil Kumar campaign for party in Chikkaballapura

ನಿಖಿಲ್ ಕುಮಾರ್ ಇಂದು ನಮ್ಮೊಂದಿಗೆ ಕಲೆಯುವ ಮೂಲಕ ತಂದೆಗೆ ತಕ್ಕ ಮಗ ಎಂದು ನಿರೂಪಿಸಿದ್ದಾರೆ. ಇಂತಹ ವಿಚಾರಗಳಲ್ಲಿ ಮಕ್ಕಳಿಗೆ ತಂದೆ ತಾಯಿಯೇ ಪ್ರೇರಣೆ ಎಂದು ಬಚ್ಚೇಗೌಡ ಅಭಿಪ್ರಾಯಪಟ್ಟರು‌.

ಶುಕ್ರವಾರ ಬೆಳಗ್ಗೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿರುವ ನಿಖಿಲ್ ಕುಮಾರ್ ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ. ನಂತರ ಕೊರಟಗೆರೆ, ಶಿರಾದಲ್ಲಿ ಪಕ್ಷದ ಪ್ರಚಾರ ನಡೆಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+