ಬಜೆಟ್ ಕುರಿತ ಆರೋಪಕ್ಕೆ ಸದನದಲ್ಲಿ ಉತ್ತರ ಕೊಟ್ಟ ಕುಮಾರಸ್ವಾಮಿ
Recommended Video

ಬೆಂಗಳೂರು, ಜುಲೈ 09 : ಕರ್ನಾಟಕ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕರ್ನಾಟಕ ಬಜೆಟ್ ಅಣ್ಣ-ತಮ್ಮಂದಿರ ಬಜೆಟ್, ಹಾಸನ-ರಾಮನಗರ-ಮಂಡ್ಯ ಬಜೆಟ್ ಮುಂತಾದ ಆರೋಪಗಳಿಗೆ ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪ್ರತ್ಯುತ್ತರ ನೀಡಿದರು.
ಸೋಮವಾರ ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಎಚ್.ಡಿ.ಕುಮಾರಸ್ವಾಮಿ ಸದನವನ್ನು ಉದ್ದೇಶಿಸಿ ಮಾತನಾಡಿದರು. ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗಿದೆ. ಅಣ್ಣ-ತಮ್ಮಂದಿರ ಬಜೆಟ್ ಎಂದೆಲ್ಲಾ ಟೀಕೆಗಳು ಬಂದಿದ್ದವು. ಎಲ್ಲದಕ್ಕೂ ಕುಮಾರಸ್ವಾಮಿ ಇಂದು ಉತ್ತರ ನೀಡಿದರು.

ಕುಮಾರಸ್ವಾಮಿ ಅವರ ತಿಳಿ ಹಾಸ್ಯ ಮಿಶ್ರಿತ ಮಾತುಗಳು ಸದಸನದಲ್ಲಿ ನಗುವಿನ ಅಲೆ ಎಬ್ಬಿಸಿತು. ಪ್ರತಿಪಕ್ಷ ಮಾಡಿದ ಆರೋಪಕ್ಕೆ ಕುಮಾರಸ್ವಾಮಿ ಪ್ರತ್ಯುತ್ತರ ನೀಡಿದರು. ಕಾಂಗ್ರೆಸ್-ಜೆಡಿಎಸ್‌ನದ್ದು ಅಪವಿತ್ರ ಮೈತ್ರಿ ಎಂದು ಆರೋಪಿಸುವ ಯಡಿಯೂರಪ್ಪ ಅವರಿಗೆ ತಿರುಗೇಟು ಕೊಟ್ಟರು.
ಕುಮಾರಸ್ವಾಮಿ ಸದನದಲ್ಲಿ ಮಾತನಾಡಿದ ಭಾಷಣದ ಮುಖ್ಯಾಂಶಗಳು
* ನಾನು ಮೊದಲನೇ ಹಂತದಲ್ಲಿ ರೈತರ 34 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದೇನೆ. ಸಾಲಮನ್ನಾ ಬಗ್ಗೆ ಜನರಲ್ಲಿ ಅಪಾರ್ಥಗಳನ್ನು ಬಿತ್ತಬೇಡಿ ಎಂದು ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟರು.
* ಬಜೆಟ್‌ನಲ್ಲಿ ವಿದ್ಯುತ್ ದರ ಏರಿಕೆ ಮಾಡಲಾಗಿದೆ ಎಂದು ಆರೋಪಿಸಲಾಗುತ್ತಿದೆ. ಯಾವ ಸರ್ಕಾರದ ಕೈಯಲ್ಲಿಯೂ ಸಹ ಉಚಿತವಾಗಿ ವಿದ್ಯುತ್ ನೀಡಲು ಸಾಧ್ಯವಿಲ್ಲ.
* ಅಪ್ಪ-ಮಕ್ಕಳ ಬಜೆಟ್, ಅಣ್ಣ-ತಮ್ಮಂದಿರ ಬಜೆಟ್ ಎಂದು ಆರೋಪಗಳನ್ನು ಮಾಡುವುದು ಸರಿಯಲ್ಲ. ಯಾರಿಗೂ ಕೂಡಾ ಅಧಿಕಾರ ಶಾಶ್ವತವಲ್ಲ ಎಂಬುದನ್ನು ತಿಳಿಯಿರಿ.
* ನಾನು ಯಾವುದೇ ಜಾತಿಯೊಂದರ ಮುಖ್ಯಮಂತ್ರಿಯಲ್ಲ. ವಿಭೂತಿ ಬಳಿದುಕೊಂಡು ಬಂದವರನ್ನೂ ದೂರ ತಳ್ಳಿಲ್ಲ. ಅವರಿಗೂ ಕೆಲಸ ನೀಡಿದ್ದೇನೆ. ಒಕ್ಕಲಿಗರಿಗೆ ಶೇ 34ರಷ್ಟು ಅನುದಾನ ನೀಡಲಾಗಿದೆ ಎಂಬ ಆರೋಪವನ್ನು ಅವರು ತಳ್ಳಿ ಹಾಕಿದರು.
* ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಯಾದ ದಿನದಿಂದ ಅಪವಿತ್ರ ಮೈತ್ರಿ ಎಂದು ಆರೋಪಗಳನ್ನು ಮಾಡುತ್ತಿದ್ದೀರಿ. ಅಂದು ಬಿಜೆಪಿ ಮತ್ತು ಜೆಡಿಎಸ್ ಸೇರಿ ಸರ್ಕಾರ ರಚನೆ ಮಾಡಿದಾಗ ಅದು ಅಪವಿತ್ರ ಮೈತ್ರಿ ಎಂದು ಅನ್ನಿಸಲಿಲ್ಲವೇ?
* ಸಾಂದರ್ಭಿಕ ಶಿಶು ಎಂಬ ಮಾತನ್ನು ಕುಮಾರಸ್ವಾಮಿ ಸದನದಲ್ಲಿ ಮತ್ತೊಮ್ಮೆ ಹೇಳಿದರು. ನಾನೊಂದು ಸಾಂದರ್ಭಿಕ ಶಿಶುವಾಗಿದ್ದು, ಕಾಂಗ್ರೆಸ್-ಜೆಡಿಎಸ್ ಶಾಸಕರೇ ನನ್ನ ಅಪ್ಪ-ಅಮ್ಮ ಎಂದರು.
* ರಾಜಕಾರಣದಲ್ಲಿ ಟೀಕೆ, ಜಗಳ ಸಾಮಾನ್ಯ. ಹಿಂದೆ ಯಡಿಯೂರಪ್ಪ ಅವರ ಜೊತೆಗೂ ಜಗಳವಾಗಿತ್ತು. ಆದರೂ ಮೈತ್ರಿ ಸರ್ಕಾರ ರಚನೆ ಮಾಡಲಿಲ್ಲವೇ?. ಮೈತ್ರಿ ಸರ್ಕಾರ ಪತನವಾದಾಗ ಸಹ ಜಗಳ ನಡೆದಿತ್ತು.
* ಹಾಸನಕ್ಕೆ ಹೆಚ್ಚಿನ ಅನುದಾನ ನೀಡಿರುವ ಬಗ್ಗೆ ಮಾತನಾಡಿದ ಕುಮಾರಸ್ವಾಮಿ ಅವರು, ಹಾಸನದ ಶಾಸಕರು ಯಾವ ಪಕ್ಷದವರು ಎಂದು ಪ್ರಶ್ನಿಸಿದರು. ಹಾಸನದ ಬಿಜೆಪಿ ಶಾಸಕರು ಒಪ್ಪದಿದ್ದರೆ ಆ ಅನುದಾನವನ್ನು ಉತ್ತರ ಕರ್ನಾಟಕ ಭಾಗಕ್ಕೆ ನೀಡಲು ಸಿದ್ಧ ಎಂದರು.
* ನಾನು ಭಯಗ್ರಸ್ತ ಮುಖ್ಯಮಂತ್ರಿಯಲ್ಲ. ರಾಜ್ಯಕ್ಕೆ ಉತ್ತಮವಾದ ಆಡಳಿತ ನೀಡಬೇಕು ಎಂಬ ಉದ್ದೇಶ ನಮ್ಮ ಸರ್ಕಾರಕ್ಕಿದೆ. 104 ಶಾಸಕರ ಬಲವಿದ್ದ ನಿಮಗೆ 113ಕ್ಕೆ ಏರಲು ಬಲವೆಲ್ಲಿತ್ತು? ಎಂದು ಪ್ರಶ್ನಿಸಿದರು.
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್












Click it and Unblock the Notifications