ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾಷೆ ಕಲಿಕೆಗೆ ವಿರೋಧ: ಸರ್ಕಾರ ಗಂಭೀರವಾಗಿ ಪರಿಗಣಿಸಲಿ-ಎಚ್.ಡಿ. ಕುಮಾರಸ್ವಾಮಿ ಟ್ವೀಟ್

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 24: ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

"ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಕಡ್ಡಾಯವಾಗಿ ಕಲಿಸುವುದನ್ನು ವಿರೋಧಿಸಿ ಕೆಲವರು ನ್ಯಾಯಾಲಯದ ಮೊರೆ ಹೋಗಿರುವುದು ನನ್ನ ಗಮನಕ್ಕೆ ಬಂದಿದೆ. ಈ ಸಂಬಂಧ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನ್ಯಾಯಾಲಯದಲ್ಲಿ ವಾದಿಸಬೇಕು" ಎಂದು ಅವರು ಶುಕ್ರವಾರ ಟ್ವೀಟ್ ಮಾಡಿದ್ದಾರೆ.

ಕನ್ನಡ ಕಲಿಕೆ ಕಡ್ಡಾಯ, ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ನೋಟಿಸ್ಕನ್ನಡ ಕಲಿಕೆ ಕಡ್ಡಾಯ, ಸ್ಪಷ್ಟನೆ ನೀಡುವಂತೆ ಸರ್ಕಾರಕ್ಕೆ ನೋಟಿಸ್

"ನಮ್ಮ ಭಾಷೆಯನ್ನು ಉಳಿಸಿಕೊಳ್ಳುವುದು ಮತ್ತು ಕರ್ನಾಟಕದಲ್ಲಿ ಶಿಕ್ಷಣ ಪಡೆಯುವಂತಹ ಮಕ್ಕಳಿಗೆ ಕನ್ನಡವನ್ನು ಒಂದು ಭಾಷೆಯಾಗಿ ಕಲಿಸುವ ಮಹತ್ವವನ್ನು ರಾಜ್ಯ ಸರ್ಕಾರ ಉಚ್ಛ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಬೇಕು. ಈ ಸಂಬಂಧ ಶಿಕ್ಷಣ ಸಚಿವರು ಸೂಕ್ತ ಕ್ರಮ ಕೈಗೊಳ್ಳಬೇಕು" ಎಂದು ಅವರು ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

HD Kumaraswamy suggestion to Karnataka Govt to fight over Compulsory Teaching Of Kannada in Schools Plea in HC

ಹೈಕೋರ್ಟ್ ಮೊರೆಹೋದ ಶಾಲಾ ಬಾಲಕ:

ಕನ್ನಡ ಭಾಷಾ ಕಲಿಕಾ ಕಾಯ್ದೆ-2015 ಪ್ರಶ್ನಿಸಿ ಬೆಂಗಳೂರಿನ ಬಿಷಪ್ ಕಾಟನ್ ಶಾಲೆಯ 4ನೇ ತರಗತಿ ವಿದ್ಯಾರ್ಥಿ ಕೀರ್ತನ್ ಸುರೇಶ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾನೆ. ಈ ಸಂಬಂಧ ವಿಚಾರಣೆ ನಡೆಸಿದ ಪೀಠ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲು ಆದೇಶಿಸಿದೆ.

"ರಾಜ್ಯ ಸರ್ಕಾರ ಜಾರಿ ಮಾಡಿರುವ ಭಾಷಾ ಕಲಿಕಾ ಕಾಯ್ದೆ ಪ್ರಕಾರ ರಾಜ್ಯದ ಎಲ್ಲಾ ಶಾಲೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುದು ಕಡ್ಡಾಯವಾಗಿದೆ. ಈ ರೀತಿ ಕಡ್ಡಾಯ ಮಾಡುವುದು ಕರ್ನಾಟಕ ಶಿಕ್ಷಣ ಕಾಯ್ದೆ 1983ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ವಿರುದ್ಧವಾಗಿದೆ" ಎಂದು ವಿದ್ಯಾರ್ಥಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಹೇಳಿದ್ದಾನೆ.

ನಿರಂತರ ವರ್ಗಾವಣೆಯಲ್ಲಿ ಇರುವಂತಹ ನೌಕರರು ತಮ್ಮ ಮಕ್ಕಳಿಗೆ ರಾಷ್ಟ್ರೀಯ ಏಕರೂಪದ ಪಠ್ಯಕ್ರಮ ಇರಬೇಕು ಎಂದು ಸಿಬಿಎಸ್ಇ, ಐಸಿಎಸ್ಇ ಶಾಲೆಗಳಿಗೆ ಸೇರಿಸಿರುತ್ತಾರೆ. ಯಾವುದೇ ರಾಜ್ಯದಲ್ಲಿ ಇವರ ವಾಸ್ತವ್ಯ ತಾತ್ಕಾಲಿಕ ಆಗಿರುತ್ತದೆ. ಕನ್ನಡವನ್ನು ದ್ವಿತೀಯ ಭಾಷೆಯಾಗಿ ಕಲಿಸುವುದರಿಂದ ಇಂತಹ ಮಕ್ಕಳಿಗೆ ತೊಂದರೆಯಾಗುತ್ತದೆ. ಬೇರೆ ರಾಜ್ಯಗಳಿಗೆ ವರ್ಗಾವಣೆಯಾದಾಗ ಮತ್ತೆ ಅಲ್ಲಿನ ಭಾಷೆ ಕಲಿಯಲು ತೊಡಕು ಉಂಟಾಗುತ್ತದೆ. ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಸರ್ಕಾರಗಳು ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ವಿದ್ಯಾರ್ಥಿ ಅರ್ಜಿಯಲ್ಲಿ ಮನವಿ ಮಾಡಿದ್ದಾನೆ. ಮಕ್ಕಳ ಹಕ್ಕುಗಳ ಹೋರಾಟಗಾರ್ತಿ ಎನ್. ಸುಜಾತಾ ವಿದ್ಯಾರ್ಥಿಯ ಪರವಾಗಿ ಹೈಕೋರ್ಟ್ ನಲ್ಲಿ ಪ್ರತಿನಿಧಿಸುತ್ತಿದ್ದಾರೆ.

HD Kumaraswamy suggestion to Karnataka Govt to fight over Compulsory Teaching Of Kannada in Schools Plea in HC

ಮೊದಲಿನಿಂದಲೂ ವಿರೋಧ:

Recommended Video

ಉಗ್ರರನ್ನು ಸಾಕ್ತಿರೋ ಟೆರರಿಸ್ತಾನಕ್ಕೆ ಕಮಾಲಾ ಹ್ಯಾರಿಸ್ ಖಡಕ್ ಎಚ್ಚರಿಕೆ | Oneindia Kannada

ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳು ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವುನ್ನು ರಾಜ್ಯ ಸರ್ಕಾರ ಕಡ್ಡಾಯ ಮಾಡಿದಾಗ ಬಹಳ ವಿರೋಧ ವ್ಯಕ್ತವಾಗಿತ್ತು. ಸರ್ಕಾರದ ಈ ನಿರ್ಧಾರಕ್ಕೆ ಇತರೆ ರಾಜ್ಯಗಳ ಪೋಷಕರು ವಿರೋಧ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸಿದ್ದರು. ಈಗ ಅದರ ಮುಂದುವರಿದ ಭಾಗವಾಗಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

English summary
HD Kumaraswamy suggestion to Karnataka Govt to fight over Compulsory Teaching Of Kannada in CBSE/ICSE Schools Plea in High Court. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X