ಕನ್ನಡಿಗರಿಗೆ ಉದ್ಯೋಗ ಟ್ವಿಟರ್ ಅಭಿಯಾನಕ್ಕೆ ಎಚ್‌ಡಿಕೆ ಬೆಂಬಲ
ಬೆಂಗಳೂರು, ಮೇ 05 : ಕರ್ನಾಟಕದ ಉದ್ಯೋಗ ಕನ್ನಡಿಗರಿಗೆ ಎಂಬ ಟ್ವಿಟರ್ ಅಭಿಯಾನಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡಿದ್ದಾರೆ. ಶನಿವಾರ ಈ ವಿಚಾರದ ಬಗ್ಗೆ ಹಲವಾರು ಜನರು ಟ್ವೀಟ್‌ಗಳನ್ನು ಮಾಡಿದ್ದಾರೆ.
#KarnatakaJobsForKannadigas ಎಂಬ ಹ್ಯಾಷ್ ಟ್ಯಾಗ್ ಬಳಸಿ ಟ್ವೀಟರ್‌ನಲ್ಲಿ ಶನಿವಾರ ದೊಡ್ಡ ಅಭಿಯಾನವನ್ನು ನಡೆಸಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರು ಸಹ ಈ ಕುರಿತು ಟ್ವೀಟ್ ಮಾಡಿ ತಮ್ಮ ಪ್ರತಿಕ್ರಿಯೆ ನೀಡಿದರು.
'ಸಾಮಾಜಿಕ ಜಾಲತಾಣದಲ್ಲಿ ನಮ್ಮ ರಾಜ್ಯದ ಯುವ ಜನತೆ ರಾಜ್ಯದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಕನ್ನಡಿಗರಿಗೆ ದಕ್ಕಬೇಕು ಎಂದು ಹೋರಾಟ ನೆಡೆಸುತ್ತಿರುವುದನ್ನು ಗಮನಿಸಿದ್ದೇನೆ. ಕನ್ನಡಿಗರ ಹಕ್ಕೊತ್ತಾಯವನ್ನು ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ನಾಯಕ ಸಿ.ಟಿ.ರವಿ ಸೇರಿದಂತೆ ಹಲವರು #KarnatakaJobsForKannadigas ಎಂಬ ಅಭಿಯಾನಕ್ಕೆ ತಮ್ಮ ಬೆಂಬಲವನ್ನು ನೀಡಿದ್ದಾರೆ.
|
ಶನಿವಾರ ನಡೆದ ಅಭಿಯಾನ
ಕರ್ನಾಟಕದ ಕೆಲಸ ಕನ್ನಡಿಗರಿಗೆ ಸಿಗಬೇಕು ಎಂದು ಬೃಹತ್ ಅಭಿಯಾನವನ್ನು ಶನಿವಾರ ನಡೆಸಲಾಯಿತು. ಪ್ರತಿಯೊಬ್ಬ ಕನ್ನಡಿಗನು #KarnatakaJobsForKannadigas ಹ್ಯಾಷ್ ಟ್ಯಾಗ್ ಬಳಸಿ ಟ್ವಿಟ್ ಮಾಡುವಂತೆ ಮನವಿ ಮಾಡಲಾಗಿತ್ತು.
|
ಮುಖ್ಯಮಂತ್ರಿಗಳ ಟ್ವೀಟ್
ಶನಿವಾರ ರಾತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, 'ಕನ್ನಡಿಗರ ಹಕ್ಕೊತ್ತಾಯವನ್ನು ಪರಿಗಣಿಸಿ ಕಾನೂನಿನ ಚೌಕಟ್ಟಿನಲ್ಲಿ ಹೇಗೆ ಕಾರ್ಯರೂಪಕ್ಕೆ ತರಬಹುದು ಎಂದು ಸಲಹೆ ಪಡೆಯಲಾಗುವುದು' ಎಂದು ಹೇಳಿದರು.
|
ಸಿದ್ದರಾಮಯ್ಯ ಬೆಂಬಲ
'ಖಾಸಗಿ ಕ್ಷೇತ್ರವೂ ಸೇರಿದಂತೆ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕೆಂಬುದು ನನ್ನ ನಿಲುವು. ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ನೀಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿರುವ ಅಭಿಯಾನಕ್ಕೆ ನನ್ನ ಬೆಂಬಲ ಇದೆ' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
|
ಸಿ.ಟಿ.ರವಿ ಬೆಂಬಲ
'ಕರ್ನಾಟಕದಲ್ಲಿ ಸೃಷ್ಟಿಯಾಗುವ ಉದ್ಯೋಗಗಳು ಮೊದಲಿಗೆ ಕನ್ನಡಿಗರಿಗೆ ದಕ್ಕಬೇಕು. ಈ ನಿಟ್ಟಿನಲ್ಲಿ ನಡೆದಿರುವ ಸದುದ್ದೇಶ ಪೂರಿತ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಇದು ಯಾವುದೇ ಕಾರಣಕ್ಕೂ ಹೊರ ರಾಜ್ಯದವರ ಮತ್ತು ಅನ್ಯ ಭಾಷಿಗರ ವಿರುದ್ಧದ ಹೋರಾಟವಾಗಬಾರದು' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.












Click it and Unblock the Notifications