Hd Deve Gowda: ಮೇ 18 ರಂದು ಎಚ್‌ ಡಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ :ಎಚ್‌ ಡಿ ದೇವೇಗೌಡ ಭವಿಷ್ಯ

ಹಾಸನ, ಮೇ5: ರಾಜ್ಯ ವಿಧಾನಸಭಾ ಚುನಾವಣಾ ರಣಕಣ ರಂಗೇರಿದೆ. ಈ ಬಾರೀ ಚುನಾವಣೆಯಲ್ಲಿ ಗೆಲುವು ಸಾಧದಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್‌ ಹಾಗೂ ಬಿಜೆಪಿ ಹಲವು ತಂತ್ರಗಳನ್ನ ನಡೆಸುತ್ತಿದ್ದು, ಕಾಂಗ್ರೆಸ್‌ ಹಾಗೂ ಬಿಜೆಪಿ ಹೈಕಮಾಂಡ್‌ ನಾಯಕರ ಜೊತೆಗೆ ಸಂಪರ್ಕದಲ್ಲಿದ್ದೇವೆ ಎಂದು ದಳಪತಿಗಳು ಹೇಳಿಕೆ ನೀಡಿದ್ದು, ಇದೀಗ ಪ್ರಮಾಣ ವಚನದ ಬಗ್ಗೆಯೂ ದಿನಾಂಕ ನಿಗದಿ ಮಾಡಿದ್ದಾರೆ.

ಹೌದು, ಚುನಾವಣೆಗೆ ಕೇವಲ 5 ದಿನಗಳು ಮಾತ್ರ ಬಾಕಿ ಉಳಿದಿದ್ದು, ಚುನಾವಣಾ ಭರಾಟೆ ಹಾಗೂ ಅಂತಿಮ ಹಂತದ ಮತಬೇಟೆಗೆ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಇನ್ನೂ ಮುಂದಿನ ಮುಖ್ಯಮಂತ್ರಿ ವಿಚಾರವಾಗಿ ಮಾಜಿ ಪ್ರಧಾನಿಗಳಾದ ಹೆಚ್‌ ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ.

HD Kumaraswamy Sworn In As Karnataka Cm On May 18th Says HD Deve Gowda

ಹಾಸನ ಜಿಲ್ಲೆಯ ಸಕಲೇಶಪುರ, ಬೇಲೂರು, ಅರಸೀಕೆರೆ ಮತ್ತಿತರ ಕ್ಷೇತ್ರಗಳಲ್ಲಿ ಗುರುವಾರ ನಡೆದ ಬೃಹತ್‌ ಸಭೆಯಲ್ಲಿ ಜೆಡಿಎಸ್‌ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ ಮಾತನಾಡಿ, ಮೇ 10ರಂದು ಮತದಾನ ನಡೆಯಲಿದ್ದು,ಮೇ 13ಕ್ಕೆ ಮತ ಎಣಿಕೆನಡೆಯಲಿದೆ. ಇನ್ನೂ ಮೇ 18ರಂದು ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿ ಪ್ರಮಾಣ ಸ್ವೀಕರಿಸುವುದು ಶತಃಸಿದ್ಧ ಎಂದು ಜೆಡಿಎಸ್‌ ವರಿಷ್ಟ ಹೆಚ್‌ ಡಿ ದೇವೇಗೌಡರು ಭವಿಷ್ಯ ನುಡಿದಿದ್ದಾರೆ.

ಇನ್ನೂ ಬೇಲೂರು ತಾಲೂಕಿನ ನಿಷ್ಠಾವಂತ, ಸರಳ, ಸಜ್ಜನಿಕೆಯ ಕೆ.ಎಸ್‌.ಲಿಂಗೇಶ್‌ ಅವರನ್ನು ಮತ್ತೆ ಗೆಲ್ಲಿಸಬೇಕು. ಇನ್ನೂ ಎರಡು ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್‌ನವರಿಗೆ ರಾಜ್ಯದ ಜನರ ಹಿತ ಬೇಕಾಗಿಲ್ಲ. ಈ ಬಾರಿ ರಾಜ್ಯದ ಜನತೆ ಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನಿಶ್ಚಿತ ಎಂದು ಕಿಡಿಕಾರಿದರು.

HD Kumaraswamy Sworn In As Karnataka Cm On May 18th Says HD Deve Gowda

ರಾಜ್ಯದ ಉಳಿವಿಗಾಗಿ ಹಾಗೂ ಪ್ರಾದೇಶಿಕ ಪಕ್ಷದ ಉಳಿವಿಗಾಗಿ ನನ್ನ ಈ ಇಳಿವಯಸ್ಸಿನಲ್ಲಿ ರಾಜ್ಯಾದ್ಯಂತ ಸುತ್ತಾಟ ನಡೆಸುತ್ತಿದ್ದೇನೆ. ರಾಜ್ಯದ ನೆಲ, ಜಲ ಸಂರಕ್ಷಣೆಗಾಗಿ ಪ್ರಾದೇಶಿಕ ಪಕ್ಷದ ಅವಶ್ಯಕತೆ ಇದೆ. ರಾಜ್ಯದ ಜನರಿಗೆ ನೀರಿಲ್ಲದಿದ್ದರೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂಥ ಅನಿವಾರ್ಯತೆ ಸೃಷ್ಟಿಸಲಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+