ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದ 25ನೇ ಮುಖ್ಯಮಂತ್ರಿಯಾದ ಎಚ್ ಡಿ ಕುಮಾರಸ್ವಾಮಿ

By Mahesh
|
Google Oneindia Kannada News

Recommended Video

ಮೇ 23ರಂದು ಕರ್ನಾಟಕದ 25ನೇ ಮುಖ್ಯಮಂತ್ರಿಯಾದ ಎಚ್ ಡಿ ಕುಮಾರಸ್ವಾಮಿ | Oneindia Kannada

ಬೆಂಗಳೂರು, ಮೇ 23: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ, ಎಚ್ ಡಿ ಕುಮಾರಸ್ವಾಮಿ (58) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು 4.32 ನಿಮಿಷದ ಸುಮಾರಿಗೆ ದೇವರು ಹಾಗೂ ಕನ್ನಡ ನಾಡಿನ ಜನರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜಿ ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಈ ಮೂಲಕ ವಿಧಾನಸೌಧದ ಮುಂಭಾಗದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯ ನೂತನ ಸರ್ಕಾರದ ಪದಗ್ರಹಣವಾಗಿದೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಾಳಯದಲ್ಲಿ ಸಂಭ್ರಮಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಕಂಡು ಬಂದಿತ್ತು. ಮಳೆಯ ಕಣ್ಣಾಮುಚ್ಚಾಲೆಯ ನಡುವೆ ಕಿವಿಗಡಕಿಚ್ಚಿನ ಶಬ್ದ, ಜಯಘೋಷಗಳ ನಡುವೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.

HD Kumaraswamy takes oath as 25th Chief Minister of Karnataka

LIVE: ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರLIVE: ಮುಖ್ಯಮಂತ್ರಿಯಾಗಿ ಎಚ್ ಡಿ ಕುಮಾರಸ್ವಾಮಿ ಪ್ರಮಾಣವಚನ ಸ್ವೀಕಾರ

ರಾಜ್ಯಪಾಲ ವಜುಭಾಯಿವಾಲ ಅವರು ಕುಮಾರಸ್ವಾಮಿ ಹಾಗೂ ಜಿ ಪರಮೇಶ್ವರ ಅವರಿಗೆ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಸಮಾರಂಭದಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಧಿ, ಮಾಯಾವತಿ, ಶರದ್​ ಪವಾರ್​, ಅಖಿಲೇಶ್​ ಯಾದವ್, ​ಕೇರಳ ಸಿಎಂ ಪಿಣರಾಯಿ, ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

English summary
HD Kumaraswamy today(May 23) took oath as 25th Chief Minister of Karnataka and G Parameshwar as his deputy with this Congress-JDS coalition government formed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X