ಕರ್ನಾಟಕದ ಬರಕ್ಕೆ ಸ್ಪಂದಿಸಿದ ಮಹಾ ಸರ್ಕಾರಕ್ಕೆ ಥ್ಯಾಂಕ್ಸ್ : ಎಚ್ಡಿಕೆ

ಬೆಂಗಳೂರು, ಮೇ 05: ಉತ್ತರ ಕರ್ನಾಟಕ ಭಾಗದ ಬರ ಪರಿಸ್ಥಿತಿಗೆ ಸ್ಪಂದಿಸಿ, ಕೋಯ್ನಾ ಅಣೆಕಟ್ಟಿನಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಒಪ್ಪಿಕೊಂಡಿದೆ, ರಾಜ್ಯದ ಜನರ ಕಷ್ಟಕ್ಕೆ ಸ್ಪಂದಿಸಿದ ಮಹಾರಾಷ್ಟ್ರ ಸರ್ಕಾರಕ್ಕೆ ಕರ್ನಾಟಕದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಧನ್ಯವಾದ ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ 2019ರ ಸಂದರ್ಭದಲ್ಲಿ ರಾಜ್ಯ ಸರ್ಕಾರಗಳ ಖರ್ಚು ವೆಚ್ಚದ ಮೇಲೆ ಚುನಾವಣಾ ಆಯೋಗ ತೀವ್ರ ನಿಗಾ ವಹಿಸಿರುವುದರಿಂದ ದಕ್ಷಿಣ ಭಾರತದ ರಾಜ್ಯಗಳು ಒಂದು ತಿಂಗಳುಗಳ ಕಾಲ ನೀತಿ ಸಂಹಿತೆ ಬೇಲಿಯಲ್ಲೇ ಕಾರ್ಯನಿರ್ವಹಿಸಬೇಕಾದ ಅನಿವಾರ್ಯ ಪರಿಸ್ಥಿತಿ ಎದುರಿಸುತ್ತಿವೆ. ಇತ್ತೀಚೆಗೆ ಚುನಾವಣಾ ಆಯೋಗ ಈ ಬಗ್ಗೆ ಸ್ಪಂದಿಸಿ, ನೀತಿ ಸಂಹಿತೆಯಲ್ಲಿ ಸ್ವಲ್ಪ ರಿಯಾಯಿತಿ ನೀಡಿದೆ.

ಮಳೆಯ ಅಭಾವದಿಂದಾಗಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳು ಬರದಿಂದ ತೀವ್ರವಾಗಿ ತತ್ತರಿಸಿದ್ದು, ಜಾನುವಾರುಗಳಿಗೆ ಕುಡಿಯುವ ನೀರಿಗೂ ಆಹಾಕಾರ ಎದ್ದಿದೆ ಎಂದು ಅವರು ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌ಗೆ ಬಿಜೆಪಿ ಮುಖಂಡರು ಹಾಗೂ ಕರ್ನಾಟಕ ಸರ್ಕಾರದಿಂದ ಪತ್ರ ಬರೆಯಲಾಗಿತ್ತು.

ಕೋಯ್ನಾ ಡ್ಯಾಂ ನಿಂದ ನಾಲ್ಕು ಟಿಎಂಸಿ ನೀರು ಕೃಷ್ಣಾ ನದಿಗೆ ಹರಿಸಿದರೆ ನಾಲ್ಕು ಜಿಲ್ಲೆಯ ನದಿ ಪಾತ್ರದ ಜನರಿಗೆ ಸಹಾಯವಾಗುತ್ತದೆ ಎಂದು ಬಿಜೆಪಿ ಮುಖಂಡ ಪ್ರಭಾಕರ್ ಕೋರೆ ಅವರು ಮನವಿ ಮಾಡಿದ್ದರು. ಪ್ರಭಾಕರ್ ಕೋರೆ ಅವರು ಬರೆದಿರುವ ಪತ್ರಕ್ಕೆ ಕುಡಚಿ ಶಾಸಕ ಸೇರಿದಂತೆ ಹಲವು ಉತ್ತರ ಕರ್ನಾಟಕ ಭಾಗದ ಶಾಸಕರು ಸಹಿ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು

ತೀವ್ರ ಬರಗಾಲದಿಂದ ಕುಡಿಯುವ ನೀರಿನ ಅಭಾವ ಉಂಟಾಗಿರುವ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದ ಮನವಿಗೆ ಸ್ಪಂದಿಸಿರುವ ಮಹಾರಾಷ್ಟ್ರ ಸರ್ಕಾರ ನೀರು ಹರಿಸಲು ಕ್ರಮ ಕೈಗೊಂಡಿದೆ

ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿ

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸರ್ಕಾರ ಸಮ್ಮತಿಸಿದ್ದು ಇನ್ನೆರಡು ದಿನಗಳಲ್ಲಿ ನೀರು ಬರುವ ಸಾಧ್ಯತೆ ಇದೆ ಎಂದು ಮಹಾರಾಷ್ಟ್ರ ಸರ್ಕಾರ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಬರಗಾಲ

ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಬರಗಾಲದಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರಗಳನ್ನು ಬರೆದು ನೀರು ಹರಿಸಲು ಮನವಿ ಮಾಡಿತ್ತು.

ಅಭಿನಂದನೆ ಸಲ್ಲಿಸಿದ ಎಚ್ಡಿ ಕುಮಾರಸ್ವಾಮಿ

ರಾಜ್ಯ ಸರ್ಕಾರ ಪತ್ರ ಬರೆದು ಮಾಡಿರುವ ಮನವಿಗೆ ಸ್ಪಂದಿಸಿ ನೀರು ಹರಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ನಡೆಯನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+