ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂನ್ 02 : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಕಾರ್ಯ ವೈಖರಿಯಲ್ಲಿ ಬದಲಾವಣೆ ಮಾಡಿಕೊಳ್ಳಲಿದ್ದಾರೆ. ತಮಗೆ ಜನಪ್ರಿಯತೆ ತಂದುಕೊಟ್ಟ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಪುನಃ ಆರಂಭಿಸಲು ಮುಂದಾಗಿದ್ದಾರೆ.

ಜೂನ್ 2ನೇ ವಾರದಿಂದ ಎಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. ಆದರೆ, ಈ ಕಾರ್ಯಕ್ರಮದಲ್ಲಿ ಅವರು ಕೆಲವೊಂದು ಬದಲಾವಣೆ ಮಾಡಿಕೊಳ್ಳಲಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಅವರು ವಾಸ್ತವ್ಯ ಹೂಡಲಿದ್ದಾರೆ.

ಗ್ರಾಮ ಪಂಚಾಯಿತಿ ಇಲ್ಲವೇ ಹೋಬಳಿ ಮಟ್ಟದಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಒಂದು ತಿಂಗಳಿನಲ್ಲಿ ಕನಿಷ್ಠ ಎರಡು ಗ್ರಾಮಗಳಲ್ಲಿ ವಾಸ್ತವ್ಯ ಹೂಡಲು ಮುಖ್ಯಮಂತ್ರಿಗಳು ತೀರ್ಮಾನಿಸಿದ್ದಾರೆ. ಮುಖ್ಯಮಂತ್ರಿಗಳ ಕಚೇರಿ ಈ ಕುರಿತು ಅಂತಿಮ ಯೋಜನೆ ತಯಾರು ಮಾಡುತ್ತಿದೆ.

HD Kumaraswamy to begins grama vastavaiya again

ಹೆಚ್ಚು ಸಮಸ್ಯೆ ಇರುವ ಗ್ರಾಮಗಳಲ್ಲಿ ಕುಮಾರಸ್ವಾಮಿ ವಾಸ್ತವ್ಯ ಹೂಡಲಿದ್ದಾರೆ. ಮಡಿಕೇರಿಯಿಂದ ಅವರು ಗ್ರಾಮ ವಾಸ್ತವ್ಯ ಆರಂಭಿಸುವ ಸಾಧ್ಯತೆ ಇದೆ. ಕಳೆದ ವರ್ಷ ಮಳೆಯಿಂದ ಮಡಿಕೇರಿಯಲ್ಲಿ ಬಾರಿ ಹಾನಿ ಉಂಟಾಗಿತ್ತು.

ಜನತಾ ದರ್ಶನ ಮತ್ತು ಗ್ರಾಮ ವಾಸ್ತವ್ಯ ಎರಡು ಎಚ್.ಡಿ.ಕುಮಾರಸ್ವಾಮಿ ಅವರಿಗೆ ಜನಪ್ರಿಯತೆ ತಂದುಕೊಟ್ಟಿದ್ದವು. 20 ತಿಂಗಳ ಮೈತ್ರಿ ಸರ್ಕಾರ ನಡೆಸುವಾಗ ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಆರಂಭಿಸಿದ್ದರು. 2018ರ ವಿಧಾನಸಭೆ ಚುನಾವಣೆ ಪ್ರಚಾರದ ಸಮಯದಲ್ಲಿಯೂ ಅವರು ಗ್ರಾಮ ವಾಸ್ತವ್ಯ ಮಾಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+