ಚನ್ನಪಟ್ಟಣ, ರಾಮನಗರದಲ್ಲಿ ಸ್ಪರ್ಧೆ : ಕುಮಾರಸ್ವಾಮಿ ಘೋಷಣೆ

ಬೆಂಗಳೂರು, ಮಾರ್ಚ್ 21 : 'ರಾಮನಗರ ಮತ್ತು ಚನ್ನಪಟ್ಟಣ ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸಲಿದ್ದೇನೆ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು. ಚನ್ನಪಟ್ಟಣ ಕ್ಷೇತ್ರದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

ರಾಮನಗರದಲ್ಲಿ ಬುಧವಾರ ರಾಮನಗರ ಮತ್ತು ಚನ್ನಪಟ್ಟಣ ತಾಲೂಕು ಜೆಡಿಎಸ್ ಕಾರ್ಯಕರ್ತರ ಸಮಾವೇಶ ನಡೆಯಿತು. ಸಮಾವೇಶದಲ್ಲಿಯೇ ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರದಿಂದಲೂ ಸ್ಪರ್ಧೆ ಮಾಡುತ್ತೇನೆ ಎಂದು ಘೋಷಣೆ ಮಾಡಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ಸ್ಪರ್ಧಿಸುತ್ತೇನೆ ಎಂದು ಘೋಷಣೆ ಮಾಡುತ್ತಿದ್ದಂತೆ ರಾಮನಗರದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಕೆಲವು ಕಾಲ ಸಭೆಯಲ್ಲಿ ಗೊಂದಲ ಉಂಟಾಯಿತು. ನಂತರ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು.

HD Kumaraswamy to contest form Channapatna and Ramanagara

ನಮ್ಮ ಕುಟುಂಬದಿಂದಿ ಇಬ್ಬರು ಮಾತ್ರ ಸ್ಪರ್ಧೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದ್ದರು. ಆದರೆ, ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದ್ದರು.

ಬುಧವಾರ ದೆಹಲಿಯಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, 'ಚನ್ನಪಟ್ಟಣದಿಂದ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದಿಲ್ಲ' ಎಂದು ಹೇಳಿದ್ದರು. ಸಂಜೆ ಕುಮಾರಸ್ವಾಮಿ ಅವರು ಚನ್ನಪಟ್ಟಣದಿಂದ ನಾನೇ ಸ್ಪರ್ಧಿಸುವೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+