ಮೇ 28ರಂದು ನರೇಂದ್ರ ಮೋದಿ ಭೇಟಿ ಮಾಡಲಿದ್ದಾರೆ ಕುಮಾರಸ್ವಾಮಿ

ಬೆಂಗಳೂರು, ಮೇ 27 : ಕರ್ನಾಟಕದ ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕುಮಾರಸ್ವಾಮಿ ಮೋದಿಯನ್ನು ಭೇಟಿ ಮಾಡುತ್ತಿದ್ದಾರೆ.

ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಮಂತ್ರಿಗಳ ಭೇಟಿಗೆ ಶುಕ್ರವಾರ ಸಮಯಾವಕಾಶ ಕೇಳಿದ್ದರು. ಪ್ರಧಾನಮಂತ್ರಿಗಳ ಕಚೇರಿ ಸೋಮವಾರ ಬೆಳಗ್ಗೆ 11 ಗಂಟೆಗೆ ಸಮಯಾವಕಾಶವನ್ನು ನೀಡಿದೆ.

ಸೋಮವಾರ ಬೆಳಗ್ಗೆ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿಗಳನ್ನು ಭೇಟಿ ಮಾಡಲಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಸಹ ಈ ಸಮಯದಲ್ಲಿ ಮೋದಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.

HD Kumaraswamy

ಮೇ 23ರಂದು ಎಚ್.ಡಿ.ಕುಮಾರಸ್ವಾಮಿ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇ 25ರಂದು ಅವರು ಸದನದಲ್ಲಿ ವಿಶ್ವಾಸಮತ ಸಾಬೀತು ಮಾಡಿದ್ದಾರೆ.

ಕುಮಾರಸ್ವಾಮಿ ದೆಹಲಿಗೆ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಜೊತೆ ಕುಮಾರಸ್ವಾಮಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ದೆಹಲಿಗೆ ತೆರಳಲಿದ್ದಾರೆ. ರಾಹುಲ್ ಗಾಂಧಿ ನಿವಾಸದಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಶನಿವಾರ ರಾತ್ರಿ ನಡೆದ ಸಭೆ ಅಪೂರ್ಣವಾಗಿದೆ.

ಮೊದಲ ಹಂತದಲ್ಲಿ ಕಾಂಗ್ರೆಸ್‌ನಿಂದ 16 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ರಾಹುಲ್ ಗಾಂಧಿ ಅವರು ಈ ಕುರಿತು ಕುಮಾರಸ್ವಾಮಿ ಜೊತೆ ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್‌ 22, ಜೆಡಿಎಸ್‌ 12 ಸಚಿವ ಸ್ಥಾನಗಳನ್ನು ಹಂಚಿಕೊಂಡಿವೆ.

ಸೋಮವಾರ ನರೇಂದ್ರ ಮೋದಿ ಭೇಟಿಗೆ ಅವಕಾಶ ಸಿಕ್ಕಿರುವ ಹಿನ್ನಲೆಯಲ್ಲಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿಯೇ ವಾಸ್ತವ್ಯ ಹೂಡುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+