ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹೊರ ರಾಜ್ಯಕ್ಕೂ ವಿಸ್ತರಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ 'ಟೆಂಪಲ್ ರನ್'

|
Google Oneindia Kannada News

Recommended Video

ಎಚ್ ಡಿ ಕುಮಾರಸ್ವಾಮಿ ಟೆಂಪಲ್ ರನ್ ಹೊರ ರಾಜ್ಯಕ್ಕೂ ವಿಸ್ತರಿಸಿದೆ | Oneindia Kannada

ಬೆಂಗಳೂರು, ಜೂನ್ 15: ಚುನಾವಣೆ ಘೋಷಣೆಯಾದ ಸಮಯದಿಂದಲೂ ನಿರಂತರವಾಗಿ ದೇವಸ್ಥಾನ, ಮಠಗಳಿಗೆ ಭೇಟಿ ನೀಡುತ್ತಿರುವ ಎಚ್‌.ಡಿ. ಕುಮಾರಸ್ವಾಮಿ ಅವರು, ಮುಖ್ಯಮಂತ್ರಿಯಾದ ಬಳಿಕವೂ ಅದನ್ನು ಮುಂದುವರಿಸಿದ್ದಾರೆ.

ರಾಜ್ಯದ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿರುವ ಅವರು, ಶುಕ್ರವಾರ ನೆರೆಯ ತಮಿಳುನಾಡಿಗೆ ತೆರಳಲಿದ್ದಾರೆ.

ಮದುರೆಯ ಮೀನಾಕ್ಷಿ ದೇವಸ್ಥಾನದಲ್ಲಿ ಅವರು ವಿಶೇಷ ಪೂಜೆ ಸಲ್ಲಿಸಿ, ಕಾಣಿಕೆಗಳನ್ನು ಅರ್ಪಿಸಲಿದ್ದಾರೆ.

ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗಷ್ಟೇ ಉಚಿತ ಬಸ್ ಪಾಸ್!ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗಷ್ಟೇ ಉಚಿತ ಬಸ್ ಪಾಸ್!

ಮಧ್ಯಾಹ್ನ 2 ಗಂಟೆ ಸುಮಾರಿಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಿಂದ ತೆರಳಲಿರುವ ಕುಮಾರಸ್ವಾಮಿ ಅವರು, ನೇರವಾಗಿ ಮದುರೆಯ ಮೀನಾಕ್ಷಿ ದೇವಸ್ಥಾನಕ್ಕೆ ತೆರಳಲಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ರಾತ್ರಿ 9.30ರ ವೇಳೆಗೆ ಬೆಂಗಳೂರಿಗೆ ಮರಳಲಿದ್ದಾರೆ.

hd kumaraswamy to visit madurai meenakshi temple on friday

ಈ ಸಂದರ್ಭದಲ್ಲಿ ಅವರು ತಮಿಳುನಾಡಿನ ಯಾವುದೇ ಮುಖಂಡರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ. ದೇವಸ್ಥಾನ ಭೇಟಿಯ ಹೊರತು ಬೇರೆ ಕಾರ್ಯಕ್ರಮಗಳನ್ನು ಆಯೋಜಿಸಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಯಾದ ಬಳಿಕ ಕುಮಾರಸ್ವಾಮಿ ಅವರು ದೇವರಿಗೆ ಹರಕೆಗಳನ್ನು ತೀರಿಸಲು ವಿವಿಧ ದೇವಸ್ಥಾನಗಳಿಗೆ ನಿರಂತರವಾಗಿ ಭೇಟಿ ನೀಡುತ್ತಿದ್ದಾರೆ.

ಬುಧವಾರವಷ್ಟೇ ಅವರು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಸ್ಥಾನಕ್ಕೆ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದರು.

'ಇಂದಿರಾ ಕ್ಯಾಂಟೀನ್ ಮುಚ್ಚಲ್ಲ, ಅನ್ನಭಾಗ್ಯಕ್ಕೆ ಇಲ್ಲ ಕನ್ನ''ಇಂದಿರಾ ಕ್ಯಾಂಟೀನ್ ಮುಚ್ಚಲ್ಲ, ಅನ್ನಭಾಗ್ಯಕ್ಕೆ ಇಲ್ಲ ಕನ್ನ'

ನೂತನ ಸರ್ಕಾರ ಅಸ್ತಿತ್ವಕ್ಕೆ ಬರುವ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ ಅವರು ಪತ್ನಿ ಜತೆ ಧರ್ಮಸ್ಥಳದ ಮಂಜುನಾಥಸ್ವಾಮಿ ಸನ್ನಿಧಿಗೆ ತೆರಳಿದ್ದರು.

ಚುನಾವಣಾ ಫಲಿತಾಂಶದ ದಿನದಂದು ಕೂಡ ಬೆಳಿಗ್ಗೆಯೇ ನಾಗಮಂಗಲದ ಆದಿಚುಂಚನಗಿರಿಯ ಕಾಲಭೈರವೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು.

English summary
Chief Minister HD Kumaraswamy will visit Mennakshi temple in Tamilnadu on Friday. He will offer special pooja to goddess and return back to Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X