59ನೇ ವಸಂತಕ್ಕೆ ಕಾಲಿಟ್ಟ ಕುಮಾರಣ್ಣ, ಕುಟುಂಬದವರ ಜೊತೆ ಹುಟ್ಟುಹಬ್ಬ

ಬೆಂಗಳೂರು, ಡಿಸೆಂಬರ್ 16 : ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 59ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಹುಟ್ಟುಹಬ್ಬವನ್ನು ಕುಟುಂಬದವರ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ.

ಡಿಸೆಂಬರ್ 16ರ ಭಾನುವಾರ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟು ಹಬ್ಬ. ಡಿಸೆಂಬರ್ 16, 1959ರಲ್ಲಿ ಜನಿಸಿದ ಕುಮಾರಸ್ವಾಮಿ ಅವರು 59ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಮುಖ್ಯಮಂತ್ರಿಯಾದ ಬಳಿಕ ಮೊದಲ ಹುಟ್ಟು ಹಬ್ಬವನ್ನು ಅವರು ಆಚರಿಸಿಕೊಳ್ಳುತ್ತಿದ್ದಾರೆ. ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಳ್ಳದಿರಲು ಅವರು ನಿರ್ಧರಿಸಿದ್ದು, ಕುಟುಂಬದವರ ಜೊತೆ ಇಡೀ ದಿನ ಇರಲಿದ್ದಾರೆ.

HD Kumaraswamy turns 59, will celebrate his birthday with family members

ಹುಟ್ಟುಹಬ್ಬದ ದಿನ ಭೇಟಿ ಮಾಡಲು ಬರದಂತೆ ಜನರು, ಕಾರ್ಯಕರ್ತರು, ಅಭಿಮಾನಿಗಳಿಗೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ. ಬೆಂಗಳೂರಿನ ಜೆ.ಪಿ.ನಗರದ ನಿವಾಸದಲ್ಲಿಯೇ ಅವರು ಇಡೀ ದಿನವನ್ನು ಕಳೆಯಲಿದ್ದಾರೆ.

ಬೆಳಗಾವಿ ಅಧಿವೇಶನದ ಬಳಿಕ ಹಿತೈಷಿಗಳು, ಅಭಿಮಾನಿಗಳು, ಕಾರ್ಯಕರ್ತರು ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಶುಭಾಶಯ ಕೋರಬಹುದಾಗಿದೆ.

ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ಕೋರಿ ಫ್ಲೆಕ್ಸ್‌, ಬ್ಯಾನರ್ ಹಾಕಿ ಪರಿಸರವನ್ನು ಹಾಳುಮಾಡದಂತೆ ಎಚ್.ಡಿ.ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

ಸೋಮವಾರ ಎಚ್.ಡಿ.ಕುಮಾರಸ್ವಾಮಿ ಅವರು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದು, ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+