ಮಂಗಳೂರು ಗಲಭೆ ವಿಡಿಯೋ; ಎಚ್. ಡಿ. ಕುಮಾರಸ್ವಾಮಿ ಟ್ವೀಟ್

ಬೆಂಗಳೂರು, ಡಿಸೆಂಬರ್ 24 : "ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಮಂಗಳೂರು ಪೊಲೀಸರು ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ಡಿಸೆಂಬರ್ 19ರಂದು ನಡೆದ ಪ್ರತಿಭಟನೆಯ ಫೋಟೋ, ವಿಡಿಯೋ ಬಿಡುಗಡೆ ಮಾಡಿದ್ದಾರೆ. ಎಚ್. ಡಿ. ಕುಮಾರಸ್ವಾಮಿ ಈ ಕುರಿತು ಸರಣಿ ಟ್ವೀಟ್ ಮಾಡಿದ್ದಾರೆ.

ಮಂಗಳೂರು ಪೊಲೀಸರು ಬಿಡುಗಡೆ ಮಾಡಿರುವ ವಿಡಿಯೋ, ಫೋಟೋಗಳ ಬಗ್ಗೆ ಭಾರಿ ಚರ್ಚೆ ಆರಂಭವಾಗಿದೆ. ಪ್ರತಿಪಕ್ಷದ ನಾಯಕರು ಈ ಕುರಿತು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ ತಮ್ಮ ಟ್ವೀಟ್‌ನಲ್ಲಿ, "ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ, ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಪೊಲೀಸರೇ ಪಿತೂರಿ ನಡೆಸಿದರೆ ಸುಮ್ಮನೆ ಕೂರಲಾಗುವುದಿಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ.

ಎಚ್. ಡಿ. ಕುಮಾರಸ್ವಾಮಿ

ಎಚ್. ಡಿ. ಕುಮಾರಸ್ವಾಮಿ

ಎಚ್. ಡಿ. ಕುಮಾರಸ್ವಾಮಿ ಟ್ವೀಟ್‌ನಲ್ಲಿ, "ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಲಕ್ಷಕ್ಕೂ ಹೆಚ್ಚು ಮಂದಿ ಶಾಂತಿಯುತ ಪ್ರತಿಭಟನೆ ನಡೆಸಿದರು. ಬೆಂಗಳೂರಿನಲ್ಲಿ ಲಕ್ಷ ಜನ ಸೇರಿದರೂ ಶಾಂತಿಯುತವಾಗಿ ನಡೆದ ಪ್ರತಿಭಟನೆ ಮಂಗಳೂರಿನಲ್ಲಿ ವಿಕೋಪಕ್ಕೆ ಹೋಗಲು ಕಾರಣವೇನು?" ಎಂದು ಪ್ರಶ್ನೆ ಮಾಡಿದ್ದಾರೆ.

ಕೋಮು ಪ್ರಯೋಗ ಶಾಲೆ

ಕೋಮು ಪ್ರಯೋಗ ಶಾಲೆ

"ಮಂಗಳೂರನ್ನು ಕೋಮು ಪ್ರಯೋಗಶಾಲೆ ಮಾಡಿಕೊಂಡಿರುವ ಬಿಜೆಪಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿದ್ದು ಹೇಗೆ? ಮತ್ತು ಏಕೆ?. ದಾಂಧಲೆಕೋರರಿಗೆ ಗುಂಡಿಕ್ಕಿದ್ದೇವೆ ಎನ್ನುವ ರಾಜ್ಯಸರ್ಕಾರ ಅವರಿಗೆ ಪರಿಹಾರ ಏಕೆ ಘೋಷಿಸಿತು?" ಎಂದು ಎಚ್. ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಕಲ್ಲು ತೂರಾಟದ ವಿಡಿಯೋ

ಕಲ್ಲು ತೂರಾಟದ ವಿಡಿಯೋ

"ಮಂಗಳೂರಿನ ಪ್ರತಿಭಟನೆ ವೇಳೆ ಸೈಜುಗಲ್ಲುಗಳನ್ನು ತಂದ ವಿಡಿಯೋಗಳನ್ನು ಇಷ್ಟೊಂದು ತಡವಾಗಿ ಬಿಡುಗಡೆಗೊಳಿಸುತ್ತಿರುವ ಸರ್ಕಾರ ಅದಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿದೆ? ಎಷ್ಟು ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದೆ?. ಕಲ್ಲು ತೂರಾಟಕ್ಕೆ ತಂದ ವಾಹನಗಳ ವಿಡಿಯೋ ಮಂಗಳೂರಿನ ಗಲಭೆಯದೋ? ಅಥವಾ ಬೇರೆಡೆಯದೋ?" ಎಂದು ಎಚ್. ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಉತ್ತರ ಕೊಡುವರೇ?

ಉತ್ತರ ಕೊಡುವರೇ?

"ಹಿಂಸಾತ್ಮಕ ಪ್ರತಿಭಟನೆಗೆ ನನ್ನ ಬೆಂಬಲ ಖಂಡಿತ ಇಲ್ಲ. ಆದರೆ, ವಿರೋಧ ಪಕ್ಷದ ಸದಸ್ಯನಾಗಿ ರಾಜ್ಯದ ಕಾನೂನು-ಸುವ್ಯವಸ್ಥೆಗೆ ಭಂಗ ತರುವ ನಿಟ್ಟಿನಲ್ಲಿ ಸರ್ಕಾರ ಪೊಲೀಸರೇ ಪಿತೂರಿ ನಡೆಸಿದರೆ ಸುಮ್ಮನೆ ಕೂರಲಾಗುವುದಿಲ್ಲ. ಇದಕ್ಕೆ ಸಂಬಂಧಿಸಿದವರು ಉತ್ತರ ಕೊಡುವರೇ?" ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+