ಧೈರ್ಯವಿಲ್ಲ ಎಂದರೆ ನಾವು ಬರುತ್ತೇವೆ; ಕುಮಾರಸ್ವಾಮಿ ಟ್ವೀಟ್

Recommended Video

      ಯಡಿಯೂರಪ್ಪಗೆ ಕುಮಾರಸ್ವಾಮಿ ಹೀಗೆ ಹೇಳಲು ಕಾರಣ ಏನು ಗೊತ್ತಾ..? | H.D.Kumaraswamy | Oneindia Kannada

      ಬೆಂಗಳೂರು, ಸೆಪ್ಟೆಂಬರ್ 27 : "ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ‌ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

      ಶುಕ್ರವಾರ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಯಡಿಯೂರಪ್ಪ ಅವರೇ ನಿಮಗೆ ಹಾಗೂ 25 ಬಿಜೆಪಿಯ ಸಂಸದರಿಗೆ ಪ್ರಧಾನಮಂತ್ರಿಗಳ‌‌ ಜೊತೆ ರಾಜ್ಯದ ನೆರೆ ಪರಿಸ್ಥಿತಿಯ ಕುರಿತು ಗಟ್ಟಿಯಾಗಿ ಮಾತನಾಡುವ ಧೈರ್ಯ ಇಲ್ಲ‌ ಎಂದಾದರೆ ನಾವೂ ನಿಮ್ಮ ಜೊತೆ ದೆಹಲಿಗೆ ಬರುತ್ತೇವೆ. ಸರ್ವ ಪಕ್ಷ ನಿಯೋಗದ ಜೊತೆ ಪ್ರಧಾನಿಗಳನ್ನು ಭೇಟಿ ಮಾಡೋಣ" ಎಂದು ಹೇಳಿದ್ದಾರೆ.

      ಉತ್ತರ ಕರ್ನಾಟಕವನ್ನು ಕಡೆಗಣಿಸಬೇಡಿ, ಪ್ರವಾಹ ಸಂತ್ರಸ್ತರ ಕಷ್ಟಕ್ಕೆ ನೆರವಾಗಿ ಎಂದು ಎಚ್. ಡಿ. ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದು, #NorthKarnatakaBelongsToIndia ಎಂಬ ಹ್ಯಾಷ್‌ ಟ್ಯಾಗ್‌ ಅನ್ನು ಬಳಸಿದ್ದಾರೆ.

      HD Kumaraswamy Tweet Against Union Government

      ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹದಿಂದಾಗಿ ಕೋಟ್ಯಾಂತರ ರೂ. ನಷ್ಟವಾಗಿದೆ. ಆದರೆ, ಕೇಂದ್ರ ಸರ್ಕಾರ ಇಲ್ಲಿಯ ತನಕ ಯಾವುದೇ ಪರಿಹಾರವನ್ನು ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಈ ವಿಚಾರ ಮುಂದಿಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸುತ್ತಿವೆ.

      ಕರ್ನಾಟಕ ಸರ್ಕಾರ ನೀಡಿರುವ ಮಾಹಿತಿಯಂತೆ 22 ಜಿಲ್ಲೆಗಳ 103 ತಾಲೂಕುಗಳಲ್ಲಿ ಪ್ರವಾಹದಿಂದ ನಷ್ಟ ಉಂಟಾಗಿದೆ. 7 ಲಕ್ಷ ಜನರನ್ನು ಸ್ಥಳಾಂತರ ಮಾಡಲಾಗಿತ್ತು, 1465 ಕೇಂದ್ರಗಳಲ್ಲಿ 4.6 ಲಕ್ಷ ಜನರು ಆಶ್ರಯ ಪಡೆದಿದ್ದರು.

      ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಿದರು. ಆದರೆ, ಇದುವರೆಗೂ ಕೇಂದ್ರ ಸರ್ಕಾರ ಪರಿಹಾರವನ್ನು ನೀಡಿಲ್ಲ. ಆದ್ದರಿಂದ, ರಾಜ್ಯದ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+