ಡಿ.ಸಿ.ತಮ್ಮಣ್ಣ ಅವರಿಗೆ ಟ್ವಿಟರ್‌ನಲ್ಲಿ ಕುಮಾರಸ್ವಾಮಿ ಕಿವಿಮಾತು
Recommended Video
ಬೆಂಗಳೂರು, ಜೂನ್ 09 : ಸಮಸ್ಯೆ ಹೇಳಿಕೊಳ್ಳಲು ಬಂದ ಸಾರ್ವಜನಿಕರ ವಿರುದ್ಧ ಸಚಿವ ಡಿ.ಸಿ.ತಮ್ಮಣ್ಣ ಹರಿಹಾಯ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವರಿಗೆ ಬುದ್ಧಿವಾದ ಹೇಳಿದ್ದಾರೆ.
ಭಾನುವಾರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. 'ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ' ಎಂದು ಕರೆ ನೀಡಿದ್ದಾರೆ.

'ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ ಸಾರ!' ಎಂದು ಟ್ವೀಟ್ ಮಾಡಿದ್ದಾರೆ.
ಮದ್ದೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಡಿ.ಸಿ.ತಮ್ಮಣ್ಣ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಬಳಿಕ ಜನರು ಅವರನ್ನು ಭೇಟಿ ಮಾಡಲು ಬಂದಿದ್ದರು. ಆಗ ಅವರ ವಿರುದ್ಧ ಸಚಿವರು ಆಕ್ರೋಶ ವ್ಯಕ್ತಪಡಿಸಿದರು.
'ಜೋಡೆತ್ತುಗಳು ಬರುತ್ತವೆ. ಕರೆದು ಹತ್ತಿಸಿಕೊಳ್ಳಿ. ಈಗ ಮಡೆಗಾರಿಕೆ ಮಾಡಲು ಹತ್ತಿರ ಬರುತ್ತೀರಾ?. ಚುನಾವಣೆ ಸಂದರ್ಭದಲ್ಲಿ ನಾನು ಮಾಡಿರುವ ಅಭಿವೃದ್ದಿ ಕೆಲಸಗಳನ್ನು ನೆನಪಿಸಿಕೊಂಡಿರಾ? ಈಗ ಬಂದು ಮಾತನಾಡುತ್ತೀರಾ?' ಎಂದು ಹರಿಹಾಯ್ದಿದ್ದರು.
ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೆ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ - ಸಾರ!
— H D Kumaraswamy (@hd_kumaraswamy) June 9, 2019
ಡಿ.ಸಿ.ತಮ್ಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು, 'ಕ್ಷೇತ್ರದ ಜನರ ಕೆಲಸ ಮಾಡಿಕೊಡಲು ಆಗದೇ ಇದ್ದರೆ ಡಿ.ಸಿ.ತಮ್ಮಣ್ಣ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಡೆಯಲಿ' ಎಂದು ಹೇಳಿದ್ದರು.












Click it and Unblock the Notifications