ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ?; ಎಚ್‌ಡಿಕೆ ಟ್ವೀಟ್‌ ಬಾಣ!

ಬೆಂಗಳೂರು, ಮೇ 30; ಕಾಂಗ್ರೆಸ್ ಪಕ್ಷ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿಕೊಂಡು, ಆಡಳಿತ ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನ ಎಂದು? ಎಂಬುದು ಎಲ್ಲರ ಪ್ರಶ್ನೆಯಾಗಿದೆ.

ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್‌ ಪಕ್ಷದ 5 ಗ್ಯಾರಂಟಿಗಳ ಬಗ್ಗೆ ಮಂಗಳವಾರ ಟ್ವೀಟ್ ಮಾಡಿದ್ದಾರೆ. 'ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ?' ಎಂದು ಹೇಳುವ ಮೂಲಕ ಸರ್ಕಾರವನ್ನು ಟೀಕಿಸಿದ್ದಾರೆ.

HD Kumaraswamy Tweet On Five Guarantees Promised By Congress

ಮೊದಲ ಟ್ವೀಟ್‌ನಲ್ಲಿ ಕುಮಾರಸ್ವಾಮಿ, 'ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ಗ್ಯಾರಂಟಿ ಬೇಡಿಕೆಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ @INCKarnataka ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಶ್ರೀ @siddaramaiah, ಶ್ರೀ @DKShivakumar ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ?' ಎಂದು ಕೇಳಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ ಗ್ಯಾರಂಟಿ ಜಾಹೀರಾತುಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ' ಎಂದು ಆಗ್ರಹಿಸಿದ್ದಾರೆ.

HD Kumaraswamy Tweet On Five Guarantees Promised By Congress

ಕುಮಾರಸ್ವಾಮಿ #ಗ್ಯಾರಂಟಿ_ಜಾರಿ_ಸರಕಾರದ_ಜವಾಬ್ದಾರಿ ಎಂಬ ಹ್ಯಾಷ್ ಟ್ಯಾಗ್ ಬಳಕೆ ಮಾಡಿದ್ದು, 'ಅದು ಬಿಟ್ಟು ಕೆಲ ಸಚಿವರು, ಶಾಸಕರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಜೂನ್ 1ಕ್ಕೆ ಘೋಷಣೆ; ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿಗಳ ಅನುಷ್ಠಾನದ ಬಗ್ಗೆ ಜೂನ್ 1ರಂದು ಘೋಷಣೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.

ಸೋಮವಾರ ಸಿದ್ದರಾಮಯ್ಯ ಶಕ್ತಿ ಭವನದಲ್ಲಿ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಯೋಜನೆಗಳ ಅನುಷ್ಠಾನಕ್ಕೆ ಆಗುವ ವೆಚ್ಚ, ಫಲಾನುಭವಿ ಮಾಹಿತಿ ಸಂಗ್ರಹ ಮಾಡಿದರು.

ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು, ಸಚಿವರು ಗ್ಯಾರಂಟಿ ಜಾರಿ ವಿಚಾರದಲ್ಲಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಜನರನ್ನು ಎತ್ತಿ ಕಟ್ಟುವ ಕೆಲಸ ಅವರು ಮಾಡಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ಕುಮಾರಸ್ವಾಮಿ ಟ್ವೀಟ್ ಮೂಲಕ ಸರ್ಕಾರವನ್ನು ಟೀಕಿಸಿದ್ದಾರೆ.

ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿ, "ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಊಹಾಪೋಹಗಳಿಗೆ ಕಿವಿಗೊಡಬೇಡಿ, ಗಾಬರಿಯಾಗಬೇಡಿ. ಯಾರು ಬೇಕಾದರೂ ಟೀಕೆ ಮಾಡಲಿ ಅದಕ್ಕೆ ನಾವು ಬೇಡ ಎನ್ನುವುದಿಲ್ಲ. ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ಇದೆ. ಮಾತನಾಡುವವರು ನಮ್ಮನ್ನು ತಿದ್ದಲಿ, ನಾವು ಮಾಡಿ ತೋರಿಸುತ್ತೇವೆ" ಎಂದು ಪ್ರತಿಪಕ್ಷಗಳಿಗೆ ತಿರುಗೇಟು ಕೊಟ್ಟಿದ್ದಾರೆ.

ಹಿಂದುಳಿದ ವರ್ಗ, ಕನ್ನಡ & ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಗ್ಯಾರಂಟಿಗಳ ಬಗ್ಗೆ ಮಾತನಾಡಿ, "ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಮಾಧಾನದಿಂದ ಇರಬೇಕು. 5 ಗ್ಯಾರಂಟಿ ಜಾರಿ ಮಾಡಲ್ಲ ಎಂದು ನಾವು ಹೇಳಿಲ್ಲವಲ್ಲ. ಜೂನ್ 1ರಂದು ಜಾರಿ ಮಾಡುವುದಾಗಿ ಹೇಳಿದ್ದೇವೆ. ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಬದ್ಧತೆ ಇದೆ" ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+