• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಜಿಂದಾಲ್ ವಿವಾದ : ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್

|
   ಜಿಂದಾಲ್ ವಿಚಾರವಾಗಿ ಟ್ವೀಟ್ ಮಾಡಿದ ಸಿಎಂ

   ಬೆಂಗಳೂರು, ಜೂನ್ 11 : ಕರ್ನಾಟಕದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ಜಿಂದಾಲ್ ವಿವಾದದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಪ್ರತಿಪಕ್ಷ ಬಿಜೆಪಿ ಮಾತ್ರವಲ್ಲದೇ ಕಾಂಗ್ರೆಸ್ ಪಕ್ಷದೊಳಗೆ ಜಿಂದಾಲ್ ಕುರಿತು ಬಿಸಿ-ಬಿಸಿ ಚರ್ಚೆ ನಡೆದಿದೆ.

   ಮಂಗಳವಾರ ಈ ಕುರಿತು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 'ಈ ವಿಷಯವನ್ನು ಮರುಪರಿಶೀಲನೆ ಮಾಡಿ ಸಂಪುಟ ಸಭೆಯಲ್ಲಿ ಚರ್ಚೆಗಾಗಿ ಪುನಃ ಮಂಡಿಸುವಂತೆ ಸೂಚಿಸಿದ್ದೇನೆ' ಎಂದ ಹೇಳಿದ್ದಾರೆ.

   ಜಿಂದಾಲ್ ವಿವಾದ : ಕರ್ನಾಟಕ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆಗಳು

   'ಜಿಂದಾಲ್ ಗೆ ಭೂಮಿ ಮಾರಾಟ ಮಾಡುವ ವಿಷಯದ ಕುರಿತು ಇಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರೊಂದಿಗೆ ಚರ್ಚಿಸಿದ್ದೇನೆ. ಈ ವಿಷಯವನ್ನು ಮರುಪರಿಶೀಲನೆ ಮಾಡಿ ಸಂಪುಟ ಸಭೆಯಲ್ಲಿ ಚರ್ಚೆಗಾಗಿ ಪುನಃ ಮಂಡಿಸುವಂತೆ ಸೂಚಿಸಿದ್ದೇನೆ' ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

   ಜಿಂದಾಲ್ ವಿವಾದ : ಜೂ.14ರಿಂದ ಬಿಜೆಪಿ ಅಹೋರಾತ್ರಿ ಧರಣಿ

   ವಿವಾದವೇನು? : ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಮತ್ತು ಕರೆಕುಪ್ಪ ಗ್ರಾಮಗಳಲ್ಲಿ 2001 ಎಕರೆ, ಸಂಡೂರು ತಾಲೂಕಿನ ಮುಸೇ ನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿ 1666 ಎಕರೆ ಭೂಮಿ ಸೇರಿ ಜಿಂದಾಲ್‌ಗೆ 3667 ಎಕರೆ ಭೂಮಿಯನ್ನು ನೀಡಲು ಸರ್ಕಾರ ತೀರ್ಮಾನಿಸಿದೆ.

   ಸರ್ಕಾರಿ ಜಮೀನು ಕ್ರಯ ವಿವಾದ: ಜಿಂದಾಲ್‌ ಸ್ಪಷ್ಟನೆ

   ಆದರೆ, ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಕ್ರಮ ಪತ್ರ ಮಾಡಿಕೊಡಲು ಸರ್ಕಾರ ಮುಂದಾಗಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ನಲ್ಲಿ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಮತ್ತು ಮಾಜಿ ಸಚಿವ ಎಚ್.ಕೆ.ಪಾಟೀಲ್ ನಡುವೆ ಈ ವಿಚಾರಕ್ಕೆ ಜಟಾಪಟಿ ನಡೆಯುತ್ತಿದೆ.

   ಪ್ರತಿಪಕ್ಷ ಬಿಜೆಪಿ ಈ ವಿಚಾರವನ್ನು ಹೋರಾಟಕ್ಕಾಗಿ ತೆಗೆದುಕೊಂಡಿದ್ದು, ಜೂನ್ 14 ರಿಂದ 16ರ ತನಕ ಬೆಂಗಳೂರಿನಲ್ಲಿ ಆಹೋರಾತ್ರಿ ಧರಣಿ ನಡೆಸಲಿದೆ. ಸರ್ಕಾರ ತನ್ನ ನಿರ್ಧಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಲಿದೆ.

   English summary
   Karnataka Chief Minister H.D.Kumaraswamy directed to re consider government decision to handover 3,667 acres land to the JSW Steel in Ballari. Govt decision sparked controversy.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X