ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇದು exit ಪೋಲ್ exact ಪೋಲ್ ಅಲ್ಲ : ಎಚ್.ಡಿ.ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಮೇ 20 : 'ಎಕ್ಸಿಟ್ ಪೋಲ್ ಉಪಯೋಗಿಸಿಕೊಂಡು ಮೋದಿ ಅಲೆ ಇನ್ನೂ ದೇಶದಲ್ಲಿ ಇದೆ ಎಂದು ಬಿಂಬಿಸಲಾಗುತ್ತಿದೆ' ಎಂದು ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಸೋಮವಾರ ಎಕ್ಸಿಟ್ ಪೋಲ್ ಫಲಿತಾಂಶದ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಸಮೀಕ್ಷೆ ನಡೆಸಿದ ಮಾಧ್ಯಮಗಳ ಬಗ್ಗೆಯೇ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಮೀಕ್ಷೆಗಳ ಸಮೀಕ್ಷೆ : ಕರ್ನಾಟಕದಲ್ಲಿ ಯಾರಿಗೆ ಎಷ್ಟು, ಸ್ಥಾನ?ಸಮೀಕ್ಷೆಗಳ ಸಮೀಕ್ಷೆ : ಕರ್ನಾಟಕದಲ್ಲಿ ಯಾರಿಗೆ ಎಷ್ಟು, ಸ್ಥಾನ?

'ನರೇಂದ್ರ ಮೋದಿ ಅವರ ಆಡಳಿತದಲ್ಲಿ ದೇಶದ ಎಲ್ಲಾ ವಿರೋಧ ಪಕ್ಷಗಳು ಇವಿಎಂ ಯಂತ್ರದ ಕಾರ್ಯ ವೈಖರಿ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದವು' ಎಂದು ಟ್ವೀಟ್ ಮಾಡಿರುವ ಕುಮಾರಸ್ವಾಮಿ ಅವರು ಇವಿಎಂಯಂತ್ರದ ವಿಚಾರವನ್ನು ಪುನಃ ಪ್ರಸ್ತಾಪಿಸಿದ್ದಾರೆ.

ಲೋಕಸಭಾ ಚುನಾವಣೆ 2019 : ನ್ಯೂಸ್ 18 ಎಕ್ಸಿಟ್ ಪೋಲ್ ಫಲಿತಾಂಶಲೋಕಸಭಾ ಚುನಾವಣೆ 2019 : ನ್ಯೂಸ್ 18 ಎಕ್ಸಿಟ್ ಪೋಲ್ ಫಲಿತಾಂಶ

ಭಾನುವಾರ ಅಂತಿಮ ಹಂತದ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ವಿವಿಧ ರಾಷ್ಟ್ರೀಯ ವಾಹಿನಿಗಳು ಚುನಾವಣೋತ್ತರ ಸಮೀಕ್ಷೆಯನ್ನು ನಡೆಸಿದ್ದವು. ಎನ್‌ಡಿಎ ಮೈತ್ರಿಕೂಟ ಕೇಂದ್ರದಲ್ಲಿ ಪುನಃ ಅಧಿಕಾರ ಹಿಡಿಯಲಿದೆ ಎಂದು ಸಮೀಕ್ಷೆಗಳು ಹೇಳಿವೆ.

ಮೈತ್ರಿ ಸರ್ಕಾರ : ಕಾಂಗ್ರೆಸ್ ಶಾಸಕರ ಹೇಳಿಕೆಗೆ ರಾಹುಲ್ ಅಸಮಾಧಾನಮೈತ್ರಿ ಸರ್ಕಾರ : ಕಾಂಗ್ರೆಸ್ ಶಾಸಕರ ಹೇಳಿಕೆಗೆ ರಾಹುಲ್ ಅಸಮಾಧಾನ

ಪಕ್ಷ ಮತ್ತು ವ್ಯಕ್ತಿಯ ಬಗ್ಗೆ ಅಭಿಪ್ರಾಯ

ಎಕ್ಸಿಟ್ ಪೋಲ್ ಮೂಲಕ ಒಂದು ಪಕ್ಷ, ಒಬ್ಬ ವ್ಯಕ್ತಿ ಬಗ್ಗೆ ತಪ್ಪು ಗ್ರಹಿಕೆಯನ್ನು ಹುಟ್ಟು ಹಾಕಲಾಗುತ್ತಿದೆ. ಇದು ಎಕ್ಸಿಟ್ ಪೋಲ್ exact ಪೋಲ್ ಅಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮೋದಿ ಅಲೆ ಇದೆ ಎಂಬ ವಾತಾವರಣ

ಎಕ್ಸಿಟ್ ಪೋಲ್ ಮೂಲಕ ದೇಶದಲ್ಲಿ ಮೋದಿ ಅಲೆ ಇದೆ ಎಂಬ ಭ್ರಮೆ ಹುಟ್ಟಿಸಲಾಗುತ್ತಿದೆ. ಪ್ರಾದೇಶಿಕ ಪಕ್ಷಗಳನ್ನು ಮುಗಿಸಲು ಈ ರೀತಿಯ ಕೃತಕ ಅಲೆಯನ್ನು ಬಿಜೆಪಿ ಬಳಸುತ್ತಿದೆ.

ಬ್ಯಾಲೆಟ್ ಪೇಪರ್ ಪರ ಬ್ಯಾಟ್

ವಿಶ್ವದಾದ್ಯಂತ ಅಭಿವೃದ್ಧಿ ಹೊಂದಿರುವ ದೇಶಗಳು ಸಹ ಬ್ಯಾಲೆಟ್ ಪೇಪರ್ ಬಳಕೆಯನ್ನು ಒಪ್ಪಿಕೊಂಡಿವೆ. ವಿರೋಧ ಪಕ್ಷಗಳು ಇವಿಎಂ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದವು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದವು

ನರೇಂದ್ರ ಮೋದಿ ಅವರ ಆಡಳಿತದಲ್ಲಿ ಎಲ್ಲಾ ರಾಜಕೀಯ ಪಕ್ಷಗಳು ಇವಿಎಂ ಕಾರ್ಯ ನಿರ್ವಹಣೆ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದವು. ಬ್ಯಾಲೆಟ್ ಪೇಪರ್ ಬಳಕೆ ಮಾಡುವಂತೆ ಸುಪ್ರೀಂಕೋರ್ಟ್‌ಗೆ ಸಹ ಅರ್ಜಿಯನ್ನು ಸಲ್ಲಿಸಲಾಗಿತ್ತು.

English summary
Exit polls are being used to create an impression that there is still a Modi wave in the country tweeted Karnataka Chief Minister H.D.Kumaraswamy.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X