ನಿಮ್ಮ ರಾಜಕೀಯ ಭವಿಷ್ಯ ನೋಡಿಕೊಳ್ಳಿ; ಗೌಡರಿಗೆ ಹೆಚ್‌ಡಿಕೆ ತಿರುಗೇಟು!

ಬೆಂಗಳೂರು, ಡಿಸೆಂಬರ್ 21: "ನನ್ನ ಬಗ್ಗೆ ಪದೇ-ಪದೇ ಚರ್ಚೆ ಮಾಡಬೇಡಿ. ನಿಮ್ಮ ರಾಜಕೀಯ ಭವಿಷ್ಯವನ್ನು ನೋಡಿಕೊಳ್ಳಿ" ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡರಿಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ಸೋಮವಾರ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಎಚ್. ಡಿ. ಕುಮಾರಸ್ವಾಮಿ ಪತ್ರಿಕಾಗೋಷ್ಠಿ ನಡೆಸಿದರು. "ಮೈತ್ರಿ ಸರ್ಕಾರ ಪತನಕ್ಕೆ ಕುಮಾರಸ್ವಾಮಿ, ಸಿದ್ದರಾಮಯ್ಯ ಇಬ್ಬರೂ ಕಾರಣ‌" ಎಂಬ ಜಿ. ಟಿ. ದೇವೇಗೌಡ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

HD Kumaraswamy Upset With Chamundeshwari MLA GT Deve Gowda

ಶುಕ್ರವಾರ ಮೈಸೂರಿನಲ್ಲಿ ಮಾತನಾಡಿದ್ದ ಜಿ. ಟಿ. ದೇವೇಗೌಡರು, "ಕುಮಾರಸ್ವಾಮಿ ಅವರಿಗೆ ಸರ್ಕಾರ ಬೀಳುತ್ತೇ ಅಂತ ಗೊತ್ತಿತ್ತು. ಗೊತ್ತಿದ್ದರೂ ಅಮೆರಿಕಾಕ್ಕೆ ಹೋಗಿ ಕುಳಿತುಕೊಂಡರು" ಎಂದು ಹೇಳಿದ್ದರು.

ಸೋಮವಾರ ಮಾತನಾಡಿದ ಎಚ್. ಡಿ. ಕುಮಾರಸ್ವಾಮಿ, "ಸರ್ಕಾರ ಉಳಿಸುವುದು ದೊಡ್ಡ ವಿಚಾರವಾಗಿರಲಿಲ್ಲ. ನಾನೂ ಅಡ್ಡದಾರಿಯಲ್ಲಿ ಬಿಜೆಪಿ ಶಾಸಕರನ್ನು ಸೆಳೆಯಬಹುದಿತ್ತು" ಎಂದರು.

"ಸರ್ಕಾರವನ್ನು ಉಳಿಸಿ ಏನು ಕಡಿದು ಕಟ್ಟೆ ಹಾಕಬೇಕಿತ್ತು. ನನ್ನ ಬಗ್ಗೆ ಪದೇಪದೇ ಚರ್ಚೆ ಮಾಡಬೇಡಿ. ನಿಮ್ಮ ರಾಜಕೀಯ ಭವಿಷ್ಯವನ್ನು ನೋಡಿಕೊಳ್ಳಿ" ಎಂದು ಎಚ್. ಡಿ. ಕುಮಾರಸ್ವಾಮಿ ಜಿ. ಟಿ. ದೇವೇಗೌಡರಿಗೆ ಹೇಳಿದರು.

ಜಿ. ಟಿ. ದೇವೇಗೌಡರು, "ಶಾಸಕರು ಪಕ್ಷ ಬಿಟ್ಟು ಹೋಗುತ್ತಾರೆ ಅಂತ ಸಿದ್ದರಾಮಯ್ಯ ಅವರಿಗೂ ಗೊತ್ತಿತ್ತು. ಮನಸ್ಸು ಮಾಡಿದ್ದರೆ ಅದನ್ನು ಸಿದ್ದರಾಮಯ್ಯ ತಡೆಯಬಹುದಿತ್ತು" ಎಂದು ಹೇಳಿದ್ದರು.

"ಶಾಸಕರು ಪಕ್ಷ ಬಿಡದಂತೆ ತಡೆಯುವ ಪ್ರಯತ್ನವನ್ನು ಸಿದ್ದರಾಮಯ್ಯ ಮಾಡಲಿಲ್ಲ. ಆದ್ದರಿಂದ, ಮೈತ್ರಿ ಸರ್ಕಾರ ಬೀಳುವುದಕ್ಕೆ ಇಬ್ಬರೂ ಕಾರಣಕರ್ತರು‌" ಎಂದು ಜಿ. ಟಿ. ದೇವೇಗೌಡ ಹೇಳಿಕೆ ಕೊಟ್ಟಿದ್ದರು.

ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಜಿ. ಟಿ. ದೇವೇಗೌಡರು ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರವಾಗಿದ್ದಾರೆ. ಅವರು ಬಿಜೆಪಿ ನಾಯಕರನ್ನು ಆಗಾಗ ಹೊಗಳುತ್ತಿದ್ದು, ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+