ಅಜ್ಞಾನ ಹೋಗಲಾಡಿಸುತ್ತೇನೆ ಬರಲಿ; ಹೊಸ ಸಚಿವರಿಗೆ ಎಚ್‌ಡಿಕೆ ಆಹ್ವಾನ!
ಬೆಂಗಳೂರು, ಮೇ 31; 'ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ' ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರಿಗೆ ಆಹ್ವಾನ ನೀಡಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಎಚ್. ಡಿ. ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಬಗ್ಗೆ ವಿಚಾರ ಪ್ರಸ್ತಾಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಸಚಿವರ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಮೊದಲ ಟ್ವೀಟ್‌ನಲ್ಲಿ, 'ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯ ಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ' ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್‌ನಲ್ಲಿ, 'ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ' ಎಂದು ಆಹ್ವಾನ ನೀಡಿದ್ದಾರೆ.

'ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಗ್ಯಾರಂಟಿ ಯೋಜನೆಗಳು; ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ವಾಗ್ದಾಳಿ ನಡೆಸುತ್ತಲೇ ಇದ್ದಾರೆ. ಮಂಗಳವಾರ ಸಹ ಅವರು ಈ ಕುರಿತು ಟ್ವೀಟ್ ಮಾಡಿದ್ದರು. 'ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ?' ಎಂದು ಪ್ರಶ್ನೆ ಕೇಳಿದ್ದರು.
'ಕಾಂಗ್ರೆಸ್ ಗೆ 135 ಸೀಟು ಕೊಟ್ಟ ಜನತೆಯ ಗ್ಯಾರಂಟಿ ಬೇಡಿಕೆಯಲ್ಲಿ ನ್ಯಾಯವಿದೆ. 5 ಗ್ಯಾರಂಟಿ ಜಾರಿ Indian National Congress - Karnataka ಸರಕಾರದ ಜವಾಬ್ದಾರಿ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಆಗುವುದಕ್ಕೆ ಮುನ್ನ ಶ್ರೀ Siddaramaiah, ಶ್ರೀ DK Shivakumar ಅವರೇ ಸಹಿ ಮಾಡಿಕೊಟ್ಟ ಕಾರ್ಡುಗಳು ಜನರ ಬಳಿ ಇವೆ. ಆ ಗ್ಯಾರಂಟಿಗಳಿಗೆ ಗ್ಯಾರಂಟಿಯೇ ಇಲ್ಲವೇ?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದರು.
'ದಿನನಿತ್ಯವೂ ಗ್ಯಾರಂಟಿಗಳ ಬಗ್ಗೆ ಜನರಲ್ಲಿ ನಿರೀಕ್ಷೆಯೂ ಮೇರೆ ಮೀರುತ್ತದೆ, ಆಕ್ರೋಶವೂ ಹೆಚ್ಚುತ್ತಿದೆ. ಜನಾಕ್ರೋಶಕ್ಕೆ ಸಬೂಬು ಸರಿಯಲ್ಲ. ಏಕೆಂದರೆ, ನಿರೀಕ್ಷೆ ಮೂಡಿಸಿದ್ದು ಇವರೇ. ಈಗ ಷರತ್ತು ನೆಪದಲ್ಲಿ ಜನರನ್ನು ಸತಾಯಿಸುವುದು ನ್ಯಾಯವಲ್ಲ. ಗ್ಯಾರಂಟಿಗಳ ಬಗ್ಗೆ ಮಾಧ್ಯಮಗಳಲ್ಲಿ ಅಬ್ಬರಿಸಿದ ಇವರೇ, ಈಗ ಮೀನಾಮೇಷ ಎಂದರೆ ಜನ ಒಪ್ಪುವರೇ?' ಎಂದು ಕಾಂಗ್ರೆಸ್ ಸರ್ಕಾರವನ್ನು ಅವರು ಪ್ರಶ್ನೆ ಮಾಡಿದ್ದರು.
'ನನಗೂ ಫ್ರೀ, ನಿನಗೂ ಫ್ರೀ, ಸರ್ವರಿಗೂ ಫ್ರೀ ಎಂದ ಮುಖ್ಯಮಂತ್ರಿಗಳಿಗೆ ಈಗ ಗ್ಯಾರಂಟಿಗಳ ಬಗ್ಗೆ ದಿವ್ಯಮೌನವೇಕೆ? ಅವರ ಅಕ್ಕಪಕ್ಕದವರ ಹೇಳಿಕೆಗಳನ್ನು ಜನರು ನಂಬುತ್ತಿಲ್ಲ. ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಹೇಳಲಿ, ಜನರಲ್ಲಿ ವಿಶ್ವಾಸ ಮೂಡಿಸಲಿ' ಎಂದು ಕುಮಾರಸ್ವಾಮಿ ಹೇಳಿದ್ದರು.
'ಮಾಧ್ಯಮಗಳಲ್ಲಿ ಕಾಂಗ್ರೆಸ್ ಕೊಟ್ಟ 'ಗ್ಯಾರಂಟಿ ಜಾಹೀರಾತು'ಗಳೂ ಇನ್ನೂ ಜನಮಾನಸದಿಂದ ಮಾಸಿಲ್ಲ. ಅದೇ ರೀತಿ; ಸ್ವತಃ ಮುಖ್ಯಮಂತ್ರಿಗಳೇ ಜೂನ್ 1ಕ್ಕೆ ಜಾರಿ ಮಾಡುವ ಬಗ್ಗೆ ಜಾಹೀರಾತು ನೀಡಿ ಜನರಿಗೆ ಖಾತರಿ ಕೊಡಲಿ. ವಿಳಂಬದಿಂದ ಸರಕಾರದ ವಿಶ್ವಾಸಾರ್ಹತೆಗೆ ಪೆಟ್ಟು ಬೀಳುವುದೇ ಹೆಚ್ಚು. ಜನರಿಗೆ ಅಭದ್ರತೆಯ ಗ್ಯಾರಂಟಿ ಬೇಡವೇ ಬೇಡ' ಎಂದಿದ್ದರು.
'ಅದು ಬಿಟ್ಟು 'ಕೆಲ ಸಚಿವರು, ಶಾಸಕ'ರನ್ನು ನನ್ನ ಮೇಲೆ ಛೂ ಬಿಟ್ಟರೆ ಪ್ರಯೋಜನವಿಲ್ಲ. ಅಂಥ ರಾಜಕಾರಣ ಉಪಯೋಗವೂ ಇಲ್ಲ. ಗ್ಯಾರಂಟಿಗಳ ಬಗ್ಗೆ ಜನಕ್ಕೆ ಬೆಟ್ಟದಷ್ಟು ನಿರೀಕ್ಷೆ ಇದೆ. ಜಾರಿ ಮಾಡಿ, ಅದರ ಹೊರತಾಗಿ ಈ ಭರವಸೆಗಳೇ ಅಗಮ್ಯಗೋಚರವಾಗಿ ಗಮ್ಯವೇ ಇಲ್ಲದ ಆಡಳಿತ ಕೊಡುವುದು ಬೇಡ. ಇಷ್ಟೇ ನನ್ನ ಕಾಳಜಿ' ಎಂದು ಸಚಿವರ ವಿರುದ್ಧವೂ ಟೀಕಿಸಿದ್ದರು.
-
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ -
ನಿಮ್ಮ ಸಂಬಳಕ್ಕೆ ಎಷ್ಟು ಬೆಲೆಯ ಮನೆ ಖರೀದಿಸಬಹುದು? Viral ಆಗುತ್ತಿದೆ ಬೆಂಗಳೂರಿನ ಸಿಎ ತಿಳಿಸಿದ 20-30-40 ರೂಲ್ -
Bengaluru Rent House: ಬೆಂಗಳೂರಲ್ಲಿ 1 BHK ಬಾಡಿಗೆ ಮನೆ ಸ್ಕ್ಯಾಮ್; 30,000 ಕೊಟ್ಟರೂ ಒಳ್ಳೆ ಮನೆ ಸಿಗ್ತಿಲ್ಲ, ವೈರಲ್ ಪೋಸ್ಟ್












Click it and Unblock the Notifications