ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬ್ಲ್ಯಾಕ್ ಫಂಗಸ್; ಸರ್ಕಾರಕ್ಕೆ ಮಹತ್ವದ ಸಲಹೆ ಕೊಟ್ಟ ಎಚ್‌ಡಿಕೆ

|
Google Oneindia Kannada News

ಬೆಂಗಳೂರು, ಮೇ 21; ಕರ್ನಾಟಕವೂ ಬ್ಲ್ಯಾಕ್ ಫಂಗಸ್ ಮಾರಕ ಕಾಯಿಲೆಯನ್ನು ಈ ಕೂಡಲೇ ಸಾಂಕ್ರಾಮಿಕ ಎಂದು ಘೋಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಶುಕ್ರವಾರ ಸರಣಿ ಟ್ವೀಟ್‌ಗಳನ್ನು ಮಾಡಿರುವ ಅವರು, "ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ" ಎಂದು ಹೇಳಿದ್ದಾರೆ.

ಕೋವಿಡ್ ಪರೀಕ್ಷೆ ಹೆಚ್ಚಿಸಿ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ ಕೋವಿಡ್ ಪರೀಕ್ಷೆ ಹೆಚ್ಚಿಸಿ; ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

ಆರೋಗ್ಯ ಸಚಿವ ಡಾ. ಸುಧಾಕರ್ ಗುರುವಾರ ಟ್ವೀಟ್ ಮಾಡಿದ್ದರು. "ಕಪ್ಪು ಶಿಲೀಂದ್ರ ಸೋಂಕನ್ನು ಈಗಾಗಲೇ ಸೂಚಿತ ರೋಗ ಎಂದು ಘೋಷಿಸಲಾಗಿದ್ದು, ಈ ಸೋಂಕಿಗೆ ಚಿಕಿತ್ಸೆ ನೀಡುವ ಸಾಮರ್ಥ್ಯ ಇರುವ ಯಾವುದೇ ಆಸ್ಪತ್ರೆ ಅಥವಾ ವೈದ್ಯಕೀಯ ಸಂಸ್ಥೆಗಳು ಸೋಂಕಿತರಿಗೆ ಚಿಕಿತ್ಸೆ/ ಆಸ್ಪತ್ರೆ ದಾಖಲಾತಿ ನಿರಾಕರಿಸಬಾರದು. ಈ ನಿಟ್ಟಿನಲ್ಲಿ ಅತೀ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸಲಾಗುವುದು" ಎಂದು ಹೇಳಿದ್ದರು.

ಕೊರೊನಾ ವೈರಸ್: ದೇಶದಲ್ಲಿ 5,500 ದಾಟಿದ ಬ್ಲ್ಯಾಕ್ ಫಂಗಸ್ ಪ್ರಕರಣ, 126 ಜನ ಬಲಿಕೊರೊನಾ ವೈರಸ್: ದೇಶದಲ್ಲಿ 5,500 ದಾಟಿದ ಬ್ಲ್ಯಾಕ್ ಫಂಗಸ್ ಪ್ರಕರಣ, 126 ಜನ ಬಲಿ

ಕೋವಿಡ್ ಸೋಂಕಿಗೆ ತುತ್ತಾಗಿ ಗುಣಗೊಂಡ ವ್ಯಕ್ತಿಗಳಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗುತ್ತಿದೆ. ರಾಜ್ಯದಲ್ಲಿ 100ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಈ ಬಗ್ಗೆ ಆರೋಗ್ಯ ವಲಯದಲ್ಲಿ ಈಗ ಭಾರೀ ಚರ್ಚೆ ನಡೆಯುತ್ತಿದೆ.

ಮೈಸೂರು; ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಕೋವಿಡ್ ವಾರಿಯರ್ಸ್ ಬಲಿ ಮೈಸೂರು; ಬ್ಲ್ಯಾಕ್ ಫಂಗಸ್‌ಗೆ ಇಬ್ಬರು ಕೋವಿಡ್ ವಾರಿಯರ್ಸ್ ಬಲಿ

ಕುಮಾರಸ್ವಾಮಿ ಸಲಹೆ

"ಕಪ್ಪು ಶಿಲೀಂಧ್ರ ರೋಗವನ್ನು ಸರ್ಕಾರ ಕೂಡಲೇ ಸಾಂಕ್ರಾಮಿಕ ರೋಗ ಎಂದು ಘೋಷಿಸಬೇಕು. ಈ ಕಾಯಿಲೆಯ ಚಿಕಿತ್ಸೆಗೆ ಬೇಕಿರುವ ಔಷಧಗಳನ್ನು ಸಮರ್ಪಕವಾಗಿ ಸಂಗ್ರಹಿಸಬೇಕು" ಎಂದು ಎಚ್. ಡಿ. ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಕರ್ನಾಟಕಕ್ಕೆ ಅಪಾಯ ಹೆಚ್ಚು

"ಕೋವಿಡ್‌ನಿಂದ ಗುಣವಾದವರೇ ಹೆಚ್ಚಾಗಿ ಕಪ್ಪು ಶಿಲೀಂಧ್ರ ಕಾಯಿಲೆ ತುತ್ತಾಗುತ್ತಾರೆ ಎಂದು ತಜ್ಞರು ಹೇಳಿದ್ದಾರೆ. ಹಾಗಾದರೆ, ಕಪ್ಪು ಶಿಲೀಂಧ್ರದ ಸಂಭಾವ್ಯ ಅಪಾಯ ಕರ್ನಾಟಕಕ್ಕೆ ಹೆಚ್ಚು" ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಸಾಂಕ್ರಾಮಿಕ ಎಂದು ಘೋಷಣೆ ಮಾಡಿ

"ಕಪ್ಪು ಶಿಲೀಂಧ್ರ ಸೋಂಕನ್ನು (ಮ್ಯೂಕರ್‌ ಮೈಕೊಸಿಸ್‌) ತೆಲಂಗಾಣ, ತಮಿಳುನಾಡು, ರಾಜಸ್ಥಾನ, ಒಡಿಶಾ, ಗುಜರಾತ್‌, ಚಂಡೀಗಢದಲ್ಲಿ ಸಾಂಕ್ರಾಮಿಕ ರೋಗ ಎಂದು ಘೋಷಿಸಲಾಗಿದೆ" ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Recommended Video

ಲಾಕ್ ಡೌನ್ ನನ್ನು ಮತ್ತಷ್ಟು ಕಠಿಣ ಮಾಡಿದ ಯಡಿಯೂರಪ್ಪ | Oneindia Kannada

ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು

ಆರೋಗ್ಯ ಸಚಿವ ಡಾ. ಸುಧಾಕರ್ ಈ ಬ್ಲ್ಯಾಕ್ ಫಂಗಸ್ ಬಗ್ಗೆ ಟ್ವೀಟ್ ಮಾಡಿದ್ದು, ಕಪ್ಪು ಶಿಲೀಂದ್ರ ಸೋಂಕಿನ ಚಿಕಿತ್ಸೆಗೆ ಅಗತ್ಯವಿರುವ ಈ ಎಲ್ಲ ತಜ್ಞ ವೈದ್ಯರುಗಳ ತಂಡ ಲಭ್ಯವಿರುವುದರಿಂದ ಸೋಂಕಿತರು ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬಹುದು ಎಂದು ಹೇಳಿದ್ದಾರೆ.

English summary
In a tweet former chief minister H. D. Kumaraswamy urged Karnataka government to declare black fungus an epidemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X