HD Kumaraswamy: ಸಿಎಂ ಡಿಕೆ ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿಶೇಷ ಪತ್ರ, ಸಾವಿರ ಎಕರೆ ವಿಷಯ ಉಲ್ಲೇಖ!
ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ವಿಶೇಷ ಪತ್ರವೊಂದನ್ನು ಬರೆದಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ (CIE Test Centre) ಹಾಗೂ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ (EV Test Centre) ಸ್ಥಾಪಿಸಲು ಕರ್ನಾಟಕ ಸರ್ಕಾರದಿಂದ ಕಳೆದ 10 ತಿಂಗಳಿನಿಂದ ಭೂಮಿ ಮಂಜೂರಾತಿಯಲ್ಲಿ ವಿಳಂಬವಾಗಿರುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಮಂಡ್ಯದಲ್ಲಿಯೇ ಕೈಗಾರಿಕೆ ಸ್ಥಾಪಿಸಲು ಕುಮಾರಸ್ವಾಮಿ ಅವರಿಗೆ ಸಾವಿರ ಎಕರೆ ಭೂಮಿಯನ್ನು ಬೇಕಾದರೂ ಕೊಡುತ್ತೇವೆ ಎಂಬ ಮುಖ್ಯಮಂತ್ರಿಗಳ ಹೇಳಿಕೆಯನ್ನು ನೆನಪು ಮಾಡುತ್ತಾ, ಕೇಂದ್ರ ಸರಕಾರಿ ಸ್ವಾಮ್ಯದ ಈ ಕೈಗಾರಿಕೆ ಸ್ಥಾಪನೆಗೆ ಆದಷ್ಟು ಬೇಗ ಭೂಮಿ ನೀಡಬೇಕು ಎಂದು ಕೋರುತ್ತೇನೆ. ಭೂಮಿ ಮಂಜೂರಾತಿಯಿಂದ ರಾಜ್ಯದ ಕೈಗಾರಿಕಾಭಿವೃದ್ಧಿ ನೆನೆಗುದಿಗೆ ಬೀಳಬಾರದು ಎಂಬುದು ನನ್ನ ಕಳಕಳಿಯಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ ಹಾಗೂ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ ಸ್ಥಾಪಿಸಲು ಕರ್ನಾಟಕ ಸರ್ಕಾರದಿಂದ ಕಳೆದ 10 ತಿಂಗಳಿನಿಂದ ಭೂಮಿ ಮಂಜೂರಾತಿಯಲ್ಲಿ ವಿಳಂಬವಾಗಿದೆ. ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ' (ARA) ವತಿಯಿಂದ ಪ್ರಸ್ತಾಪಿಸಲಾಗಿರುವ ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ' (CIE Test Centre) ಹಾಗೂ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ (EV Test Centre) ಸ್ಥಾಪನೆಗಾಗಿ ಮಂಡ್ಯ ಜಿಲ್ಲೆಯಲ್ಲಿ ಭೂಮಿ ಮಂಜೂರು ಮಾಡುವಲ್ಲಿ ಕರ್ನಾಟಕ ಸರ್ಕಾರದಿಂದ ಕಳೆದ 10 ತಿಂಗಳಿನಿಂದ ನಿರಂತರ ವಿಳಂಬವಾಗಿದೆ.
ಕಳೆದ 10 ತಿಂಗಳುಗಳಿಂದ ನಾವು ನಿರಂತರವಾಗಿ ಈ ಬಗ್ಗೆ ರಾಜ್ಯ ಸರ್ಕಾರದ ಸಕಾರಾತ್ಮಕ ನಿರ್ಧಾರದ ನಿರೀಕ್ಷೆಯಲ್ಲಿದ್ದೇವೆ. ಸ್ಥಳ ಪರಿಶೀಲನೆ, ತಾಂತ್ರಿಕ ಮೌಲ್ಯಮಾಪನ ಹಾಗೂ ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸುವ ಮೂಲಕ ಈ ಪ್ರಕ್ರಿಯೆಯನ್ನು ಸಕ್ರಿಯವಾಗಿ ಮುಂದುವರಿಸುತ್ತಿದ್ದೇವೆ. ಇಷ್ಟೆಲ್ಲಾ ನಿರಂತರ ಪುಯತ್ನಗಳ ಹೊರತಾಗಿಯೂ, ಸೂಕ್ತ ಭೂಮಿಯನ್ನು ಮಂಜೂರು ಮಾಡುವ ವಿಷಯವು ಜಿಲ್ಲಾಡಳಿತ ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (KIADB) ಇನ್ನೂ ಭೂಮಿ ಮಂಜೂರಾತಿ ಇತ್ಯರ್ಥಗೊಂಡಿಲ್ಲ.
ಈ ಪ್ರಮುಖ ಯೋಜನೆಗಳಿಗೆ ಜಾಗ ಗುರುತಿಸುವ ನಿಟ್ಟಿನಲ್ಲಿ ARA (Automotive Research Association of India) ನಿರಂತರ ತ್ವರಿತಗತಿಯಲ್ಲಿ ಪುಯತ್ನಗಳನ್ನು ನಡೆಸುತ್ತಿದೆ. ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರೊಂದಿಗೆ ಸಭೆಯನ್ನು ನಡೆಸಿ ಜಿಲ್ಲೆಯಲ್ಲಿ ಯೋಜನೆಯ ವಿಸ್ತೃತ ವಿವರ ಹಾಗೂ ಭೂಮಿ ಅಗತ್ಯತೆಯ ಕುರಿತು ವಿವರವಾಗಿ ಚರ್ಚಿಸಲಾಗಿದೆ.
ಇನ್ನು ಪ್ರಸ್ತಾವಿತ ಸೌಲಭ್ಯಗಳು ಭಾರತದ ವಾಹನ ಮತ್ತು ವಿದ್ಯುತ್ ಚಾಲಿತ ವಾಹನ (electric mobility) ಪೂರಕ ವ್ಯವಸ್ಥೆಯನ್ನು ಬಲಪಡಿಸುತ್ತವೆ. ಸ್ಥಳೀಯ ತಂತ್ರಜ್ಞಾನ ಅಭಿವೃದ್ಧಿಗೆ ಬೆಂಬಲ ನೀಡುತ್ತವೆ ಹಾಗೂ ಈ ಪ್ರದೇಶದಲ್ಲಿ ಪೂರಕ ಕೈಗಾರಿಕೆಗಳು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಲಾಗುತ್ತದೆ. ಇವು ಕರ್ನಾಟಕದಲ್ಲಿ ಸುಧಾರಿತ ಪರೀಕ್ಷೆ, ಮೌಲ್ಯಮಾಪನ ಮತ್ತು -ಉತ್ಪಾದನೆಗೆ ಸಂಬಂಧಿಸಿದ ಸಂಶೋಧನಗಾಗಿ ಬಲವಾದ ಪರಿಸರ ವ್ಯವಸ್ಥೆಯನ್ನು ನಿರ್ಮಿಸಲು ಸಹಾಯ ಮಾಡುತ್ತವೆ.
ರಾಜ್ಯ ಸರ್ಕಾರದೊಂದಿಗೆ ಸುಮಾರು 10 ತಿಂಗಳುಗಳ ಕಾಲ ಅನೇಕ ಸಭೆಗಳನ್ನು ನಡೆಸಿ, ಚರ್ಚಿಸಿ ಹಾಗೂ ಪತ್ರ ವ್ಯವಹಾರಗಳನ್ನು ನಡೆಸಿದರೂ ಸಹ ಸಾರ್ವಜನಿಕ ಉಪಯೋಗದ ಯೋಜನೆಗಳಿಗೆ ಮೂಲಭೂತ ಅಗತ್ಯವಾದ ಭೂಮಿಯನ್ನು ಮಂಜೂರು ಮಾಡುವ ರಾಜ್ಯ ಸರ್ಕಾರದ ಹಾಗೂ ಮಂಡ್ಯ ಜಿಲ್ಲಾಡಳಿತದ ನಿರ್ಧಾರಕ್ಕಾಗಿ ಇಂತಹ ಪ್ರಮುಖ ಯೋಜನೆಯು ಕಾಯುತ್ತಿರುವುದು ದುರದೃಷ್ಟಕರ ಸಂಗತಿ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ARAI ಬೆಳವಣಿಗೆಯು ಆಟೋಮೊಬೈಲ್ ಕ್ಷೇತ್ರದ ಮೇಲೆ ಅದು ಬೀರುವ ಸಕಾರಾತ್ಮಕ ಪ್ರಭಾವ ಮತ್ತು ಭಾರತದ ವಾಹನ ವಲಯದಲ್ಲಿ ಅದರ ವಿಸ್ತರಿಸುತ್ತಿರುವ ಪಾತ್ರದ ಹಿನ್ನೆಲೆಯನ್ನು ನೋಡಿದಾಗ ಈ ಪ್ರಸ್ತಾವನೆಯ ಮಹತ್ವವು ಇನ್ನಷ್ಟು ಸ್ಪಷ್ಟವಾಗುತ್ತದೆ. 1966ರಲ್ಲಿ ಸ್ಥಾಪಿತವಾದ ARAI ಸಂಸ್ಥೆಯು ಭಾರತ ಸರ್ಕಾರದ ಬೃಹತ್ ಕೈಗಾರಿಕ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ವಾಹನ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಾಗಿದ್ದು, ಇದು ವಾಹನ ಮೌಲ್ಯಮಾಪನ, ಇಂಗಾಲ ಹೊರಸೂಸುವಿಕೆ (emissions), ವಾಹನ ಸುರಕ್ಷತೆ, ಎಂಜಿನ್ ಅಭಿವೃದ್ಧಿ, ರಚನಾತ್ಮಕ ಚಲನಶೀಲತೆ (Structural dynamics), ವಾಹನ ಎಲೆಕ್ಟ್ರಾನಿಕ್ಸ್, ಇತರ ಪ್ರಮಾಣೀಕರಣ ಮತ್ತು ವಿಶೇಷ ಕ್ಷೇತ್ರಗಳಲ್ಲಿ ವ್ಯಾಪಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸಿದ.
ರಾಷ್ಟ್ರದಲ್ಲಿ ಇಂತಹ ಕೇಂದ್ರಗಳು ಬೆರಳಣಿಕೆಯಷ್ಟು ಮಾತ್ರ ಇವ. ಮಹಾರಾಷ್ಟ್ರದ ಪುಣೆಯ ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ (ARAI), ಹರಿಯಾಣದ ಮಾನೇಸರ್'ನಲ್ಲಿರುವ ಅಂತಾರಾಷ್ಟ್ರೀಯ ಆಟೋಮೋಟಿವ್ ತಂತ್ರಜ್ಞಾನ ಕೇಂದ್ರ (ICAT), ಚೆನ್ನೈನಲ್ಲಿರುವ ಗ್ಲೋಬಲ್ ಆಟೋಮ್ಯಾಟಿವ್ ರಿಸರ್ಚ್ ಸೆಂಟರ್ (GARC), ಕಾಶ್ಮೀರದಲ್ಲಿರುವ ರಾಷ್ಟ್ರೀಯ ಆಟೋಮೋಟಿವ್ ಟೆಸ್ಟ್ ಟ್ರ್ಯಾಕ್ (NATRAX) ಸಂಸ್ಥೆಗಳು ರಾಷ್ಟ್ರದಲ್ಲಿದ್ದು, ಈ ಕೇಂದ್ರಗಳ ಕೊಡುಗೆಯಿಂದ ಹರಿಯಾಣ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳು ಆಟೋಮೊಬೈಲ್ ಕ್ಷೇತ್ರದಲ್ಲಿ ಮುಂಚೂಣಿ ರಾಜ್ಯಗಳಾಗಿ ಬೆಳೆದಿವೆ. ಹೀಗಾಗಿ ಇಂತಹ ಪ್ರತಿಷ್ಠಿತ ಕೇಂದ್ರಗಳು ನಮ್ಮ ಕರ್ನಾಟಕಕ್ಕೆ ಅಗತ್ಯವಾಗಿ ಬೇಕಾಗಿದೆ. ಯಾವುದೇ ಕಾರಣಕ್ಕೂ, ARAI ಪರೀಕ್ಷಾ ಕೇಂದ್ರವನ್ನು ಕರ್ನಾಟಕ ಕಳೆದುಕೊಳ್ಳಬಾರದು ಎಂಬುದು ನನ್ನ ಕಳಕಳಿಯಾಗಿದೆ ಎಂದೂ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಮುಂದುವರಿದು ರಾಜಕೀಯವನ್ನು ಮೀರಿ ಸಾರ್ವಜನಿಕ ಪ್ರಾಮುಖ್ಯತೆ ಹೊಂದಿದ ಕೇಂದ್ರ ಸರ್ಕಾರಿ ಸ್ವಾಮ್ಯದ ಈ ಪ್ರತಿಷ್ಠಿತ ಸಂಸ್ಥೆಯನ್ನು ರಾಜ್ಯಕ್ಕೆ ಬರಮಾಡಿಕೊಳ್ಳಬೇಕಿರುವುದು ನಮ್ಮೆಲ್ಲರ ಆದ ಕರ್ತವ್ಯವಾಗಿದೆ. ಕರ್ನಾಟಕ ಸರ್ಕಾರದ 2026-27ನೇ ಸಾಲಿನ ಆಯ-ವ್ಯಯದ ಭಾಷಣದಲ್ಲಿ ಮಂಡ್ಯದಲ್ಲಿ 'ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ' (ARAI) ಸಂಸ್ಥೆಗೆ 'ನಿರ್ಮಾಣ ಮತ್ತು ಮೂಲಸೌಕರ್ಯ ಉಪಕರಣಗಳ ಪರೀಕ್ಷಾ ಕೇಂದ್ರ' ಸ್ಥಾಪನೆಗಾಗಿ ಭೂಮಿಯನ್ನು ನೀಡಲಾಗುವುದೆಂದು ಘೋಷಣೆ ಮಾಡಿರುವುದನ್ನು ಹಾಗೂ ನೀವು (ಡಿ.ಕೆ ಶಿವಕುಮಾರ್) ಹಲವಾರು ಸಂದರ್ಭಗಳಲ್ಲಿ ಕೈಗಾರಿಕಾ ಹೂಡಿಕಗಳಿಗೆ ಅಗತ್ಯವಿರುವ ಭೂಮಿಯನ್ನು ತಕ್ಷಣವೇ ಒದಗಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದಿದ್ದೀರಿ.
ಕೈಗಾರಿಕ ಸ್ಥಾಪನೆ ಮತ್ತು ಉದ್ಯೋಗ ಸೃಷ್ಟಿಗೆ ಸಾವಿರಾರು ಎಕರೆ ಭೂಮಿ ನೀಡಲಾಗುವುದು ಎಂದು ತಾವು ಹೇಳಿರುತ್ತೀರಿ. ತಮ್ಮ ಈ ಹೇಳಿಕೆಯು ಕೈಗಾರಿಕಾ ಅಭಿವೃದ್ಧಿಗೆ ಪೂರಕವಾಗಿದೆ ಎಂದು ನಾನು ಭಾವಿಸಿದ್ದೇನೆ. ಅದಾಗ್ಯೂ, ಪ್ರಸ್ತಾಪಿತ ಯೋಜನೆಗ ಇಲ್ಲಿಯವರೆಗೆ ರಾಜ್ಯ ಸರ್ಕಾರದಿಂದ 'ಭೂ ಮಂಜೂರಾತಿಯಲ್ಲಿ ವಿಳಂಬವಾಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿಯಾಗಿದೆ.
ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿ ಹಾಗೂ ಯುವ ಸಮೂಹಕ್ಕೆ ಉದ್ಯೋಗ ಸೃಜಿಸುವ ದೃಷ್ಟಿಯಿಂದ, ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಆಶ್ವಾಸನೆ ನೀಡುವ ಬದಲು ತಾವು ರಾಜ್ಯ ಸರ್ಕಾರದಿಂದ ಮಂಡ್ಯ ಜಿಲ್ಲೆಯಲ್ಲಿ ARAI ಕೇಂದ್ರಕ್ಕೆ ಅಗತ್ಯವಿರುವ ಭೂಮಿಯನ್ನು ಕೂಡಲೇ ಮಂಜೂರು ಮಾಡಬೇಕೆಂದು ಮತ್ತೊಮ್ಮೆ ಈ ಪತ್ರದ ಮೂಲಕ ಕೋರುತ್ತೇನೆ ಎಂದೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.


Click it and Unblock the Notifications
