ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಇಎಸ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಕುಮಾರಸ್ವಾಮಿ ಆಗ್ರಹ

|
Google Oneindia Kannada News

ಬೆಳಗಾವಿಯಲ್ಲಿ ಕನ್ನಡಕ್ಕೆ ಅಪಮಾನ ಆಗುತ್ತಿದ್ದು, ಸರಕಾರವನ್ನು ನಾಲಾಯಕ್‌ ಎಂದ ಎಂಇಎಸ್‌ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ. ಕುಂದಾ ನಗರಿಯ ಪ್ರತಿಷ್ಠೆಗೆ ಧಕ್ಕೆ ತಂದು ಅಲ್ಲಿನ ಸೌಹಾರ್ದ ವಾತಾವರಣವನ್ನು ಹಾಳು ಮಾಡುತ್ತಿರುವ ಎಂಇಎಸ್ ವಿರುದ್ಧ ತೀವ್ರ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

HD Kumaraswamy urges Karnataka Govt to Take Action on MES for Disgracing Kannada

ವಿನಾಕಾರಣ ಬೆಳಗಾವಿಯಲ್ಲಿ ಕನ್ನಡಿಗರನ್ನು ಕೆಣಕುತ್ತಾ ಕನ್ನಡಕ್ಕೆ ಅಪಮಾನ ಮಾಡುತ್ತಿರುವ ಎಂಇಎಸ್‌ಗೆ ತಕ್ಕ ಶಾಸ್ತಿ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದ್ದಾರೆ. ಈ ಸಂಬಂಧ ಅವರು ಬುಧವಾರ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಅದರ ಪೂರ್ಣ ವಿವರ ಇಲ್ಲಿದೆ

HD Kumaraswamy urges Karnataka Govt to Take Action on MES for Disgracing Kannada

ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ. ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ.

ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ.

ಅಲ್ಲಿನ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ.

ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್ , ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರಿಗಿದೆ.

ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ನಾನು ಸರಕಾರವನ್ನು ಒತ್ತಾಯ ಮಾಡುತ್ತೇನೆ.

Recommended Video

ಒಂದು ವೇಳೆ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಸೋತ್ರೆ ಅಷ್ಟೆ ಕಥೆ!! | Oneindia Kannada

English summary
HD Kumaraswamy urges Karnataka Govt to Take Action on MES in Belagavi for Disgracing Kannada and Kannada people. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X