ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆ ಎಂದ ಸಿದ್ದರಾಮಯ್ಯಗೆ ತಿರುಗೇಟು ಕೊಟ್ಟ ಹೆಚ್ ಡಿ ಕುಮಾರಸ್ವಾಮಿ
ಬೆಳಗಾವಿ, ಡಿಸೆಂಬರ್05: ದೇಶದ ಸಂಪತ್ತು ಮುಸ್ಲಿಮರಿಗೆ ಹಂಚುತ್ತೇನೆಂಬ ಸಿಎಂ ಸಿದ್ದರಾಮಯ್ಯ ನವರ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ನಾಡಿನ ಸಿಎಂ ಆಗಿ ರಾಜ್ಯದ ಸರ್ವತೋಮುಖ ಜನರ ಅಭಿವೃದ್ಧಿ ಮಾಡಬೇಕು.ಇದು ಓಲೈಕೆ ಅಲ್ಲದೇ ಬೇರೇನು. ಒಂದು ಸಮಾಜವನ್ನು ಓಲೈಕೆ ಮಾಡೋದಲ್ಲ ಎಂದು ವಿಧಾನಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ರಾಜ್ಯದ ಎಲ್ಲ ಜನರ ಬದುಕು ಕಟ್ಟಲು ಈ ಸರ್ಕಾರ ಇರಬೇಕು. ಕಳೆದ ಬಜೆಟ್ನಲ್ಲಿ ಇವರೆಷ್ಟು ಹಣ ಇಟ್ಟಿದ್ದರು ಅದನ್ನು ಮೊದಲು ಕೊಡಲಿ. ಬಳಿಕ ಮುಂದಿನ ವರ್ಷ 10 ಸಾವಿರ ಕೋಟಿ ಕೊಡಲಿ ಎಂದು ಸಿದ್ದರಾಮಯ್ಯ ವಿರುದ್ಧ ಕುಟುಕಿದ್ದಾರೆ.

ಸಿದ್ದರಾಮಯ್ಯ ಹೇಳಿದ್ದೇನು?
ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ನಿಮ್ಮನ್ನು (ಮುಸ್ಲಿಂ) ನಾನು ರಕ್ಷಣೆ ಮಾಡುತ್ತೇನೆ ಎಂದಿದ್ದರು. ಈ ಕುರಿತು ಮಂಗಳವಾರ ಬೆಳಗಾವಿಯ ಸುವರ್ಣಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಅವರು, ಈ ಬಗ್ಗೆ ಒಂದು ಪತ್ರಿಕೆ ಮಾತ್ರ ನಾನು ಹೇಳಿದ್ದನ್ನು ಸರಿಯಾಗಿ ಬರೆದಿದೆ.
ಅದನ್ನು ಬಿಟ್ಟು ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ನಾನು ಹೇಳಿದ್ದರಲ್ಲಿ ವಾಟ್ ಇಸ್ ರಾಂಗ್ ಇನ್, ಮುಸ್ಲಿಮರು ಸೇರಿ ಎಲ್ಲರನ್ನೂ ರಕ್ಷಣೆ ಮಾಡುತ್ತೇವೆಂದು ನಾನು ಹೇಳಿದ್ದು. ಬೇರೆ ರೀತಿ ಅರ್ಥ ಕಲ್ಪಿಸಿಕೊಂಡು ಹೇಳಿದರೆ ಏನು ಮಾಡುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದ 25 ಸಾವಿರ ಸ್ಮಾರಕಗಳ ರಕ್ಷಣೆ ಕ್ರಮ: ಹೆಚ್.ಕೆ.ಪಾಟೀಲ್
ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚಿನ ಸ್ಮಾರಕಗಳ ರಕ್ಷಣೆಗೆ ಸರ್ಕಾರ ಕ್ರಮ ವಹಿಸಿದೆ. ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದಲ್ಲಿನ ಪ್ರವಾಸೋದ್ಯಮವನ್ನು ಅಭಿವೃದ್ಧಿ ಮಾಡಲು ಯೋಜನೆ ರೂಪಿಸುವುದಾಗಿ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಂಗಳವಾರದ ವಿಧಾನ ಸಭಾ ಅಧಿವೇಶನದ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಸ್ಮಾರಕಗಳ ದತ್ತು ತೆಗೆದುಕೊಳ್ಳವ ಯೋಜನೆ ಜಾರಿಯಲ್ಲಿದೆ. ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಲಾಗುವುದು.

ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ಅಡಿ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಸಾಹಸ, ಕೃಷಿ, ಮನರಂಜನಾ, ಕ್ಯಾರವಾನ್, ಸಾಂಸ್ಕೃತಿಕ ಪ್ರವಾಸೋದ್ಯಮ, ಸಾಂಸ್ಕೃತಿಕ ಗ್ರಾಮ, ಪರಿಸರ, ಪಾರಂಪರಿಕ, ಹೋಂಸ್ಟೇ, ಹೋಟೆಲ್, ಹೌಸ್ ಬೋಟ್, ವಸ್ತು ಸಂಗ್ರಹಾಲಯ, ಗ್ಯಾಲರಿ, ರೋಪ್ ವೇ, ಧ್ವನಿ ಮತ್ತು ಬೆಳಕು, ಥೀಪ್ ಪಾರ್ಕ್ ಸೇರಿದಂತೆ 26 ರೀತಿಯ ಪ್ರವಾಸಿ ಉತ್ಪನ್ನಗಳನ್ನು ಅಭಿವೃದ್ಧಿ ಪಡಿಸಲು ಮುಂದೆ ಬರುವ ಖಾಸಗೀ ಬಂಡವಾಳ ಹೂಡಿಕೆದಾರರನ್ನು ಸೆಳೆಯಲು ಸಹಾಯಧನ ಪ್ರೋತ್ಸಾಹಕಗಳು ಮತ್ತು ರಿಯಾಯಿತಿಗಳನ್ನು ನೀಡಲಾಗಿದೆ ಎಂದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ, 2012-13 ರಲ್ಲಿ ಮೂಡುಬಿದರೆ ಕ್ಷೇತ್ರದ ಸಸಿಹಿತ್ಲು ಕಡಲ ತೀರದಲ್ಲಿ ಅಂತರಾಷ್ಟಿçÃಯ ಸರ್ಫಿಂಗ್ ಪಂದ್ಯಾವಳಿ ಆಯೋಜಿಸಲಾಗಿತ್ತು. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕಂಡುಬAದಿದೆ. ಸರ್ಫಿಂಗ್ ನಂತಹ ಸಾಹಸ ಕ್ರೀಡೆಯ ಉತ್ತೇಜನಕ್ಕೆ ಸರ್ಕಾರ ಮುಂದಾಗಬೇಕು. ಸಸಿಹಿತ್ಲು ಪ್ರದೇಶದಲ್ಲಿನ ಕುಡಿಯುವ ನೀರು ಹಾಗೂ ಬೀದಿ ದೀಪ ಅಳವಡಿಸುವ ಕಾಮಗಾರಿಯನ್ನು ಕೂಡಲೇ ಪ್ರಾರಂಭಿಸುವAತೆ ಒತ್ತಾಯಿಸಿದರು.
ಜೈನ ಕಾಶಿ ಮೂಡಬಿದರೆಯ ಯಾತ್ರಿ ನಿವಾಸಕ್ಕೆ 15 ಹೆಚ್ಚುವರಿ ಕೊಠಿಗಳ ನಿರ್ಮಾಣ ಕಾಮಗಾರಿಗೆ ರೂ.70 ಲಕ್ಷ ಮಂಜೂರಾಗಿದ್ದು, ಸರ್ಕಾರದಿಂದ ರೂ.52.50 ಲಕ್ಷ ಬಿಡುಗಡೆ ಮಾಡಲಾಗಿದೆ. ಕಾಮಗಾರಿಯ ಪೂರ್ಣಗೊಂಡಿದೆ. ಸಸಿಹಿತ್ಲು ಅಭಿವೃದ್ದಿ ಕಾಮಗಾರಿಗೆ ರೂ.25 ಲಕ್ಷ ಮೀಸಲಿರಿಸಿದ್ದು, ಆದ್ಯತೆಯ ಮೇರಗೆ ಶೀಘ್ರವೇ ಕೈಗೆತ್ತಿಕೊಂಡು ಕಾಮಗಾರಿ ಆರಂಭಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಉತ್ತರಿಸಿದರು.
ಮೂಡಬಿದರೆ ಕ್ಷೇತ್ರದ ಕಲಕಕೆರೆ ನಿಸರ್ಗಧಾಮ ಮತ್ತು ರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮಕ್ಕೆ ರೂ. 1 ಕೋಟಿ, ಶಿರ್ತಾಡಿ ಗ್ರಾಮದ ಪ್ರವಾಸಿ ತಾಣ ಕೊಣಜಿಕಲ್ಲು ಗುಡ್ಡವನ್ನು ಅಭಿವೃದ್ಧಿ ರೂ.50 ಲಕ್ಷ ಹಾಗೂ ಮೂಡಬಿದರೆಯ ಸಾವಿರ ಕಂಬದ ಬಸದಿ ಹಾಗೂ ಇತರೆ ಜೈನ ಮಂದಿರಗಳ ಅಭಿವೃದ್ದಿಗೆ ರೂ.50 ಲಕ್ಷ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದರು.
ಸಕಲೇಶಪುರ ಶಾಸಕ ಸಿಮೆಂಟ್ ಮಂಜು ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಕಲೇಶಪುರ ತಾಲ್ಲೂಕಿನ ಮರಗುಂದ, ಮಂಜರಾಬಾದ್ ಕೋಟೆ, ಮೂಕನಮನೆ ಜಲಪಾತ, ಅಬ್ಬಿ ಜಲಪಾತ, ಬಿಸಿಲೆ ಘಾಟ್, ಪಾಂಡವರ ಬೆಟ್ಟ, ಮೂರ್ಕಣ್ ಬೆಟ್ಟ, ಜೇನುಕಲ್ಲು ಬೆಟ್ಟ, ಗುಡ್ಡ ಬಸವಣ್ಣ, ಪಾಟ್ಲೆಬೆಟ್ಟ ಪ್ರದೇಶಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿ ಗುರಿತಿಸಲಾಗಿದೆ ಎಂದು ತಿಳಿಸಿದರು.
-
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್












Click it and Unblock the Notifications