ಮಳೆಹಾನಿ ಪ್ರದೇಶಗಳಿಗೆ ಕೇಂದ್ರ ಸಚಿವರು ಭೇಟಿ; ಸರ್ಕಾರ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹುಬ್ಬಳ್ಳಿ, ಜುಲೈ 20: ರಾಜ್ಯ ಸರ್ಕಾರ ಆಡಳಿತವನ್ನು ಹೇಗೆ ನಡೆಸಬೇಕೆಂಬುದನ್ನೇ ಮರೆತು ಹೋಗಿದೆ. ಸರ್ಕಾರದಲ್ಲಿ ನಡೆದ ಅಕ್ರಮಗಳಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕತೆಯನ್ನು ಉಳಿಸಿಕೊಳ್ಳಲು ಆಗದೇ ಜನರ ಬಳಿ ಬರಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು‌.

ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಂದ ಅನೇಕ ಪ್ರದೇಶಗಳಲ್ಲಿ ಅನಾಹುತಗಳಾಗಿವೆ. ವಿಶೇಷವಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಹಾನಿಯಾಗಿವೆ. ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡ್ಡದ ಕಡಿತದಿಂದ ಸಾವುನೋವುಗಳಾಗಿವೆ. ಶಿರೂರು ಎಂಬಲ್ಲಿ ಗುಡ್ಡ ಕುಸಿದು ಏಳು ಸಾವಾಗಿದೆ ಎಂದು ವರದಿಯಾಗಿವೆ.‌ ಹೀಗಾಗಿ ಅಲ್ಲಿನ ಪರಿಸ್ಥಿತಿ ಅವಲೋಕನ ಮಾಡಲು, ಜನರಿಗೆ ಧೈರ್ಯ ಹೇಳಲು ತೆರಳುವುದಾಗಿ ಹೇಳಿದರು. ನಾಳೆ ಸಕಲೇಶಪುರ ಭಾಗದಲ್ಲಿನ ಅನಾಹುತಗಳ ಬಗ್ಗೆ ಜನರಿಂದ ತಿಳಿದು, ಸಾಂತ್ವನ ಹೇಳಲು ತೆರಳುವೆ ಎಂದರು‌.

HD Kumaraswamy Visited And Inspected The Rain-Affected Areas Of The State

ದೆಹಲಿಯಿಂದ ಕಳೆದ ಮೂರು ದಿನಗಳ ಹಿಂದೆಯೇ ರಾಜ್ಯಕ್ಕೆ ಬರಬೇಕಿತ್ತು. ಆದರೆ ಕೆಲವು ಕಾರ್ಯಕ್ರಮದ ನಿಮಿತ್ತವಾಗಿ ಬರಲು ಸಾಧ್ಯವಾಗಿಲ್ಲ. ಆದರೆ ಮನಸ್ಸು ಮಾತ್ರ ರಾಜ್ಯದ ಕಡೆಗೆ ಇತ್ತು. ರಾಜ್ಯದ ಅನೇಕ ಪ್ರದೇಶಗಳಲ್ಲಿ ಜನರು ನೀರಿನಲ್ಲಿ ಮುಳುಗಡೆ ಆಗಿದ್ದಾರೆ. ಮನೆ ಬಿದ್ದಿವೆ. ಹೀಗಿರುವಾಗ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಕಂದಾಯ ಸಚಿವರು ಡಿಸಿಗಳಿಗೆ ಸೂಚನೆ ಕೊಟ್ಟಿದ್ದಾರೆ. ಆದರೆ ಇಂತಹ ಸಂದರ್ಭಗಳಲ್ಲಿ ಕುದ್ದು ಸ್ಥಳಗಳಿಗೆ ಸಿಎಂ, ಸಚಿವರು ಭೇಟಿ ನೀಡಲು ಮುಂದಾಗಿಲ್ಲ. ಇದು ಸರ್ಕಾರ ಜನರ ಬಗ್ಗೆ ಎಷ್ಟರಮಟ್ಟಿಗೆ ಕಾಳಜಿ ಹೊಂದಿದೆ ಎಂಬುದನ್ನು ತಿಳಿಸುತ್ತದೆ ಎಂದು ಹರಿಹಾಯ್ದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ 21 ಪ್ರಕರಣಗಳನ್ನು ಹುಡುಕಿದೆ. ಅದರಲ್ಲಿ 2010-11 ರಲ್ಲಿ ನಡೆದ ಅಕ್ರಮಗಳ ಬಗ್ಗೆ ಉಲ್ಲೇಖಿಸಿದೆ. 2013 ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಅಧಿಕಾರದಲ್ಲಿತ್ತು. ಆಗ ಯಾಕೆ ತನಿಖೆ ಮಾಡಲಿಲ್ಲ. ಇದೀಗ ಗುಮ್ಮ ಬಿಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದು ಲೇವಡಿ ಮಾಡಿದರು.

ಇದೀಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ಕಳೆದಿದೆ. ಈ ವೇಳೆ ಹಗರಣ ನಡೆದ ಬಗ್ಗೆ ಸರ್ಕಾರವೇ ಒಪ್ಪಿಕೊಂಡಿದೆ. ಆದರೆ ಇದಕ್ಕೆ ಅಧಿಕಾರಿಗಳು ಹೊಣೆ ಎಂದು ಹೇಳಿದೆ. ಇದನ್ನು ನೋಡಿದರೇ ಸರ್ಕಾರ ಅಧಿಕಾರಿಗಳ ಮೇಲಿನ ತನ್ನ ನಿಯಂತ್ರಣ ಕಳೆದುಕೊಂಡಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದರು.

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಅವರ ಪಾತ್ರ ಇದೆ. ಈ ಬಗ್ಗೆ ಸರಿಯಾದ ತನಿಖೆಯಾಗಬೇಕು. ಮಂಗಳವಾರ ಬಜೆಟ್ ಇದೆ. ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಬರುವ ಎನ್ ಡಿಆರ್ ಎಫ್ ಹಣ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+