Family Politics: ಹೆಚ್ಡಿಕೆ VS ಭವಾನಿ ರೇವಣ್ಣ: ಟಿಕೆಟ್ ಗಾಗಿ ದೇವೇಗೌಡ ಕುಟುಂಬದಲ್ಲಿ ಮತ್ತೆ ಶುರುವಾಗುತ್ತಾ ಸಮರ?
ಬೆಂಗಳೂರು, ಆಗಸ್ಟ್ 12: 2023 ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಪ್ರದಾನಿ ಹೆಚ್ ಡಿ ದೇವೇಗೌಡರ ಕುಟುಂಬದಲ್ಲಿ ಟಿಕೆಟ್ ಗಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗೂ ಭವಾನಿ ರೇವಣ್ಣ ನಡುವೆ ಟಿಕೆಟ್ ಗಾಗಿ ಭಾರೀ ಪೈಪೋಟಿ ಏರ್ಪಟ್ಟಿದ್ದು, ಇದೀಗ 2024 ರ ಲೋಕಸಭಾ ಚುನಾವಣೆಯಲ್ಲಿಯೂ ಟಿಕೆಟ್ ವಿಚಾರದಲ್ಲಿ ಮತ್ತೆ ದೇವೇಗೌಡರ ಕುಟುಂಬದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ.
ಹೌದು, ಲೋಕಸಭಾ ಚುನಾವಣೆಗೆ ಕೆಲ ತಿಂಗಳುಗಳು ಮಾತ್ರ ಬಾಕಿ ಉಳಿದಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರಿಗೂ ಟಿಕೆಟ್ ನೀಡುವುದಿಲ್ಲ ಎಂದು ಮಾಜಿ ಕುಮಾರಸ್ವಾಮಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದು, ಮತ್ತೆ ಟಿಕೆಟ್ ವಿಚಾರವಾಗಿ ಬೀರುಗಾಳಿ ಏಳುವ ಸಾಧ್ಯತೆ ಇದೆ.

ಹಾಸನ ಕ್ಷೇತ್ರದ ಹಾಲಿ ಸಂಸದರಾಗಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ಬಗ್ಗೆಯೂ ಚರ್ಚೆ ಹುಟ್ಟಿಕೊಂಡಿದ್ದು, ಈ ವಿಚಾರವಾಗಿಯೇ ಮತ್ತೆ ದೇವೇಗೌಡರ ಕುಟುಂಬದಲ್ಲಿ ಶೀತಲ ಸಮರ ನಡೆಯುವ ಸಾಧ್ಯತೆ ಹೆಚ್ಚಾಗಿದೆ.
ಕುಟುಂಬ ರಾಜಕೀಯ ಎಂಬ ಕಳಂಕದಿಂದ ಹೊರ ಬರಲು ಕುಮಾರಸ್ವಾಮಿ ಈ ನಿರ್ಧಾರಕ್ಕೆ ಮುಂದಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ತಮ್ಮ ಕುಟುಂಬಸ್ಥರು ಸ್ಪರ್ಧಿಸುವುದು ನನಗೆ ಇಷ್ಟ ಇಲ್ಲ ಎಂದು ಹೇಳಿದ್ದರು. ಅಲ್ಲದೇ ಹಾಸಕ ಕ್ಷೇತ್ರದ ಅಲ್ಲಿನ ಸಂಸದರಿಗೆ ವಿವೇಚನೆಗೆ ಬಿಟ್ಟ ವಿಚಾರ ಎಂದು ಹೇಳಿದರು.
ಇನ್ನೂ ಹಾಸನ ಕ್ಷೇತ್ರದ ಹಾಲಿ ಶಾಸಕರಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಈ ಬಾರೀ ಟಿಕೆಟ್ ನಿರಾಕರಿಸಿದರೆ ಅವರ ರಾಜಕೀಯ ಭವಿಷ್ಯವೇನು? ರಾಷ್ಟ್ರ ರಾಜಕೀಯವನ್ನ ಬಿಟ್ಟು ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುತ್ತಾರಾ ಎಂಬ ಹಲವು ಪ್ರಶ್ನೆಗಳು ಇದೀಗ ಹುಟ್ಟಿಕೊಂಡಿವೆ.

ಈಗಾಗಲೇ ಪ್ರಜ್ವಲ್ ರೇವಣ್ಣಗೆ ಟಿಕೆಟ್ ನೀಡುವಂತೆ ಸ್ಥಳೀಯ ಕಾರ್ಯಕರ್ತರಲ್ಲಿ ಒತ್ತಡಗಳು ಕೇಳಿ ಬಂದಿದ್ದು, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಹಾಸಕ ಕ್ಷೇತ್ರದ ವಿಚಾರವಾಗಿಯೂ ದೇವೇಗೌಡರ ಕುಟುಂಬದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರ ನಡುವೆ ಪೈಫೋಟಿ ಏರ್ಪಟ್ಟಿದ್ದು, ಕೊನೆ ಕ್ಷಣದ ವರೆಗೂ ಟಿಕೆಟ್ ಗಾಗಿ ಭವಾನಿ ರೇವಣ್ಣ ಸಾಕಷ್ಟು ಪ್ರಯತ್ನ ಪಟ್ಟಿದ್ರು, ಭವಾನಿ ರೇವಣ್ಣ ಅವರಿಗೆ ಟಿಕೆಟ್ ಸಿಗಲಿಲ್ಲ. ಇನ್ನೂ ಈ ಬಾರೀಯೂ ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಲೋಕಸಭಾ ಚುನಾವಣೆಗಾಗಿ ಭವಾನಿ ರೇವಣ್ಣ ಹಾಗೂ ಕುಮಾರಸ್ವಾಮಿ ನಡುವೆ ಶೀತಲ ಸಮರ ಏರ್ಪಡುವ ಸಾಧ್ಯತೆ ಇದೆ.
ಇನ್ನೂ ಹಾಸನದಲ್ಲಿ ಈ ಬಾರೀಯೂ ಸುಲಭವಾಗಿ ಸಂಸದ ಪ್ರಜ್ವಲ್ ರೇವಣ್ಣ ಗೆಲ್ಲುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದು, ಈ ಬಗ್ಗೆ ಪಕ್ಷದ ವರಿಷ್ಠರಾದ ಹೆಚ್ ಡಿ ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ನಿರ್ಧಾರಿಸುತ್ತಾರೆ ಎಂದು ಮಾಜಿ ಸಚಿವರಾದ ಎಚ್ ಡಿ ರೇವಣ್ಣ ಹೇಳಿದ್ದಾರೆ.
ಇನ್ನೂ 2019ರ ಲೋಕಸಭಾ ಚುನಾವಣೆಯಲ್ಲಿ ಸಂದರ್ಭದಲ್ಲಿ ಜೆಡಿಎಸ್ ವರಿಷ್ಠರು ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಉತ್ತರಾಧಿಕಾರಿಯಾಗಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಿ ಗೆಲುವು ಸಾಧಿಸಿದರು. ಆದರೆ, ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದ ನಿಖಿಲ್ ಕುಮಾರಸ್ವಾಮಿಸೋಲು ಅನುಭವಿಸಿದರು. ಇನ್ನೂ 2023 ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಲ್ಲಿ ಸ್ಪರ್ಧಿಸಿದ ನಿಖಿಲ್ ಕುಮಾರಸ್ವಾಮಿ ಸೋಲು ಅನುಭವಿಸಿದರು. ಆದರೆ, ಈ ಬಾರಿ ಹಾಸನದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಿದರೇ ಗೆಲುವ ಸಾಧಿಸುತ್ತಾರೆ ಎಂಬ ಮಾತುಗಳು ಪಕ್ಷದಲ್ಲಿ ಕೇಳಿ ಬಂದಿದ್ದು, ಟಿಕೆಟ್ ಗಾಗಿ ದೊಡ್ಡ ಗೌಡರ ಕುಟುಂಬದಲ್ಲಿ ಮತ್ತೊಮ್ಮೆ ಶೀತಲ ಸಮರ ನಡೆಯಲಿದೆ ಎಂದು ಹೇಳಲಾಗಿದೆ.












Click it and Unblock the Notifications