ಪ್ರಧಾನಿ ಮೋದಿಗೆ ಸ್ವಾಗತ ಕೋರಿದ ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು, ಫೆಬ್ರವರಿ 04 : ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಟ್ವಿಟರ್ ಮೂಲಕ ಪ್ರಧಾನಿಗಳಿಗೆ ಸ್ವಾಗತ ಕೋರಿದ್ದಾರೆ.
ಭಾನುವಾರ ಸಂಜೆ 4 ಗಂಟೆಗೆ ಅರಮನೆ ಮೈದಾನದಲ್ಲಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಈ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟ್ವಿಟರ್ ಮೂಲಕ ಪ್ರಧಾನಿ ಮೋದಿಗೆ ಸ್ವಾಗತ ಕೋರಿದ್ದಾರೆ.
ದೇಶದ ಪ್ರಧಾನಮಂತ್ರಿಗಳಿಗೆ @narendramodi ಕರ್ನಾಟಕಕ್ಕೆ ಸುಸ್ವಾಗತ.ನೀವು ಗುಜರಾತಿನ ಮಗನಾದರೂ ಈ ದೇಶಕ್ಕೆ ಪ್ರಧಾನಿಗಳು,ಈ ಬಾರಿಯಾದರೂ ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಯಾದ ಮಹದಾಯಿ ನದಿ ವಿಚಾರವಾಗಿ ಮಧ್ಯಪ್ರವೇಶಿಸಿ ಕರ್ನಾಟಕದ ಹೋರಾಟಗಾರರಿಗೆ ಸಿಹಿ ಸುದ್ದಿಯನ್ನು ನೀಡುತ್ತೀರೆಂದು ಭಾವಿಸುತ್ತೇನೆ.#Mahadayi
— H D Kumaraswamy (@hd_kumaraswamy) February 4, 2018
ರಾಜ್ಯಕ್ಕೆ ಆಗಮಿಸುತ್ತಿರುವ ನೀವು ಮಹದಾಯಿ ವಿಚಾರವಾಗಿ ಮಾತನಾಡಿ, ರಾಜ್ಯಕ್ಕೆ ಸಿಹಿ ಸುದ್ದಿಯನ್ನು ನೀಡುವುರಿ ಎಂದು ಭಾವಿಸುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
'ಮೋದಿ ಮೌನ ಕನ್ನಡಿಗರು, ರೈತರಿಗೆ ಮಾಡುವ ಅವಮಾನ'
'ದೇಶದ ಪ್ರಧಾನಮಂತ್ರಿಗಳಿಗೆ ಕರ್ನಾಟಕಕ್ಕೆ ಸುಸ್ವಾಗತ.ನೀವು ಗುಜರಾತಿನ ಮಗನಾದರೂ ಈ ದೇಶಕ್ಕೆ ಪ್ರಧಾನಿಗಳು, ಈ ಬಾರಿಯಾದರೂ ಉತ್ತರ ಕರ್ನಾಟಕದ ಜನರ ಬಹುದಿನಗಳ ಬೇಡಿಕೆಯಾದ ಮಹದಾಯಿ ನದಿ ವಿಚಾರವಾಗಿ ಮಧ್ಯಪ್ರವೇಶಿಸಿ ಕರ್ನಾಟಕದ ಹೋರಾಟಗಾರರಿಗೆ ಸಿಹಿ ಸುದ್ದಿಯನ್ನು ನೀಡುತ್ತೀರೆಂದು ಭಾವಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.











Click it and Unblock the Notifications