ವಿಧಾನಸೌಧದ ಮುಂದೆ ಬುಧವಾರ ಕುಮಾರಸ್ವಾಮಿ ಪ್ರಮಾಣ ವಚನ
ಬೆಂಗಳೂರು, ಮೇ 20: ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಬುಧವಾರದಂದು ವಿಧಾನಸೌಧದ ಮುಂಭಾಗ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಮುಂಚೆ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ ಎನ್ನಲಾಗಿತ್ತು ಆ ನಂತರ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎನ್ನಲಾಗಿತ್ತು ಆದರೆ ಕೊನೆಗೆ ವಿಧಾನಸೌಧದ ಮುಂಭಾಗವೇ ಪ್ರಮಾಣ ವಚನ ಕಾರ್ಯಕ್ರಮ ಆಯೋಜಿಸಲಾಗಿದೆ.
ವಿಧಾನಸೌಧದ ಮುಂದೆ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶಂಪೂರ ಸ್ಪಷ್ಟಪಡಿಸಿದ್ದು. ಈ ಮೊದಲು ಹೇಳಿದಂತೆ ಕಂಠೀರವ ಸ್ಟೇಡಿಯಂನಲ್ಲಿ ನಡೆಸಲು ಉದ್ದೇಶಿಸಿದ್ದ ಸಮಾರಂಭವನ್ನು ಈಗ ವಿಧಾನಸೌಧಕ್ಕೆ ಬದಲಾಯಿಸಲಾಗಿದೆ' ಎಂದರು.

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಪ್ರಾದೇಶಿಕ ಪಕ್ಷಗಳ ಮುಖಂಡರಾದ ಚಂದ್ರಬಾಬು ನಾಯ್ಡು, ಕೆಸಿಆರ್, ಮಾಯಾವತಿ, ಮಮತಾ ಬ್ಯಾನರ್ಜಿ, ಅಖಿಲೇಶ್ ಯಾದವ್ ಇನ್ನೂ ಹಲವು ಮುಖಂಡರನ್ನು ಆಹ್ವಾನಿಸಲಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರೂ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.












Click it and Unblock the Notifications