ಒಂದೂ ದಿನ ಬಿಡದೆ ವಿಧಾನಸಭಾ ಕಲಾಪದಲ್ಲಿ ಭಾಗವಹಿಸಲು ಎಚ್‌ಡಿ ಕುಮಾರಸ್ವಾಮಿ ನಿರ್ಧಾರ
ಬೆಂಗಳೂರು, ಜುಲೈ 1: ಬಿಜೆಪಿಯಲ್ಲಿ ವಿರೋಧ ಪಕ್ಷ ನಾಯಕ ಅನುಪಸ್ಥಿತಿ ಹಿನ್ನೆಲೆಯಲ್ಲಿ ಮತ್ತು ವಾಸ್ತವಿಕ ಪ್ರತಿಪಕ್ಷದ ನಿಜವಾದ ನಾಯಕನಾಗಿ ಹೊರಹೊಮ್ಮುವ ಅವರ ಪ್ರೀ ಪ್ಲಾನ್‌ನಂತೆ ಮುಂಬರುವ ವಿಧಾನಮಂಡಲದ ಅಧಿವೇಶನದ ಎಲ್ಲಾ ದಿನಗಳಲ್ಲೂ ಹಾಜರಾಗಲು ಜೆಡಿಎಸ್ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಕುಮಾರಸ್ವಾಮಿ ಅವರು ಹಲವು ವರ್ಷಗಳಿಂದ ವಿಧಾನಸಭೆ ಅಧಿವೇಶನಗಳಿಗೆ ವಿವಿಧ ಅಕ್ರಮಗಳನ್ನು ಬಯಲಿಗೆಳೆಯುವಲ್ಲಿ ನಿಸ್ಸೀಮರಾಗಿದ್ದರು. ಈ ನಿಟ್ಟಿನಲ್ಲಿ ಈ ಬಾರಿ ಸದನದಲ್ಲಿ ಹಲವು ಹಿರಿಯ ಬಿಜೆಪಿ ನಾಯಕರು ಸಭೆಗೆ ಬರುವ ಅವಕಾಶ ಕಳೆದುಕೊಂಡಿರುವುದನ್ನು ಲಾಭ ಮಾಡಿಕೊಳ್ಳಲು ಅವರು ನಿರ್ಧರಿಸಿದ್ದಾರೆ ಎಂದು ಡಿಎಚ್ ವರದಿ ಮಾಡಿದೆ.

ಮೂಲಗಳ ಪ್ರಕಾರ, ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಎಲ್ಲಾ ಶಾಸಕರಿಗೆ ಪ್ರತಿದಿನ ವಿಧಾನಸಭೆಯಲ್ಲಿ ಹಾಜರಿದ್ದು ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸಮಸ್ಯೆಗಳನ್ನು ನಿಭಾಯಿಸುವ ಮತ್ತು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ತಮ್ಮದೇ ಆದ ಮಾರ್ಗವನ್ನು ಹೊಂದಿರುವ ಹಿರಿಯ ನಾಯಕರಾದ ಬಿ ಎಸ್ ಯಡಿಯೂರಪ್ಪ, ಜೆ ಸಿ ಮಾಧುಸ್ವಾಮಿ, ಜಗದೀಶ್ ಶೆಟ್ಟರ್ ಮತ್ತು ಕೆ ಎಸ್ ಈಶ್ವರಪ್ಪ ಅವರ ಅನುಪಸ್ಥಿತಿಯು ಮುಂಬರುವ ಅಧಿವೇಶನದಲ್ಲಿ ಬಿಜೆಪಿಯನ್ನು ಕಾಡಲಿದೆ. ಇದು ಕುಮಾರಸ್ವಾಮಿ ಅವರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಜೆಡಿಎಸ್‌ನ ಹಿರಿಯ ಮುಖಂಡರೊಬ್ಬರು ಹೇಳಿದ್ದಾರೆ.
ಈ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ 19 ಸ್ಥಾನಗಳನ್ನು ಮಾತ್ರ ಗೆದ್ದಿದೆ. ಕುಮಾರಸ್ವಾಮಿ ನಾಯಕರಾಗಿ ಆಯ್ಕೆಯಾದ ತನ್ನ ಶಾಸಕಾಂಗ ಪಕ್ಷದ ಸಭೆಯನ್ನು ಕರೆಯಲು ಹಿಂದೇಟು ಹಾಕದೇ ಸಕ್ರೀಯವಾಗಿದೆ. ವಿಧಾನಸಭೆ ಚುನಾವಣೆಯ ಸೋಲಿನಿಂದ ಬಿಜೆಪಿ ಹತೋಟಿಗೆ ಬರುವ ಮುನ್ನವೇ ಭರವಸೆ ಯೋಜನೆಗೆ ಷರತ್ತುಗಳನ್ನು ವಿಧಿಸಿ, ಮತದಾರರಿಗೆ ಗಿಫ್ಟ್ ಕೂಪನ್ ನೀಡಿ ಚುನಾವಣೆಯಲ್ಲಿ ಗೆದ್ದು, ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.

ವಿಧಾನಸಭೆಯಲ್ಲಿ ತಮ್ಮ ಪಕ್ಷದ ಕೀಳರಿಮೆ ನನ್ನ ದಾರಿಗೆ ಬರಲು ಬಿಡುವುದಿಲ್ಲ. ನಮ್ಮಲ್ಲಿ ಎಷ್ಟು ಮಂದಿ ಸದನವನ್ನು ಪ್ರವೇಶಿಸಿದ್ದೇವೆ ಎಂಬುದರ ಬಗ್ಗೆ ನನಗೆ ಕಾಳಜಿ ಇಲ್ಲ. ನಾವೆಲ್ಲರೂ ಸಕ್ರಿಯವಾಗಿರುವುದನ್ನು ನಾನು ಖಚಿತಪಡಿಸಿಕೊಳ್ಳುತ್ತೇನೆ. ನಾನು ಯಾರನ್ನೂ ಮೆಚ್ಚಿಸುವ ಅಗತ್ಯವಿಲ್ಲ. ಸಾಮಾನ್ಯ ಜನರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಾನು ಗಂಭೀರವಾಗಿರುತ್ತೇನೆ ಮತ್ತು ನಾನು ಪ್ರತಿದಿನ ಅಧಿವೇಶನಕ್ಕೆ ಹಾಜರಾಗುತ್ತೇನೆ ಮತ್ತು ವಿಷಯಾಧಾರಿತ ಚರ್ಚೆಗಳತ್ತ ಗಮನ ಹರಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.
ಈ ಹಿಂದೆ ತಾನು ಸದನಕ್ಕೆ ಕಡ್ಡಾಯವಾಗಿ ಹಾಜರಾಗುತ್ತಿರಲಿಲ್ಲ ಎಂದು ಒಪ್ಪಿಕೊಂಡ ಕುಮಾರಸ್ವಾಮಿ, ಈ ಹಿಂದೆ ನಾನು ನಿರ್ದಿಷ್ಟ ದಿನಗಳಲ್ಲಿ ಮಾತ್ರ ಬಂದು ಒಂದು ನಿರ್ದಿಷ್ಟ ವಿಷಯದ ಬಗ್ಗೆ ಮಾತನಾಡುತ್ತಿದ್ದೆ. ಈ ಬಾರಿ ನಾನು ಪ್ರತಿದಿನ ಅಲ್ಲಿಯೇ ಇರುತ್ತೇನೆ, ಸಕ್ರಿಯವಾಗಿ ಭಾಗವಹಿಸುತ್ತೇನೆ ಮತ್ತು ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತೇನೆ. ಸರ್ಕಾರದಿಂದ ಮತದಾರರಿಗೆ ಮೋಸ ಆಗಬಾರದು ಎಂದರು.
ಇತ್ತೀಚೆಗೆ ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪದ ಬಗ್ಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಒಂದೇ ಹುದ್ದೆಗೆ ಮುಖ್ಯಮಂತ್ರಿ ಅವರೇ ನಾಲ್ಕರಿಂದ ಐದು ಬಾರಿ ಆದೇಶ ಮಾಡಿದ್ದಾರೆ. ಒಂದು ಹುದ್ದೆಗೆ ಐದು ವ್ಯಕ್ತಿಗಳು ನಿಯುಕ್ತಿಗೊಳಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ವರ್ಗಾವಣೆ ದಂಧೆ ದೊಡ್ಡಮಟ್ಟದಲ್ಲಿ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್‌ನಲ್ಲೂ ಈಗ ಪರ್ಸೆಂಟೇಜ್ ಶುರುವಾಗುತ್ತದೆ. ಅದರಲ್ಲಿ ಯಾವುದೇ ಅನುಮಾನ ಬೇಡ. ರೇಟ್ ಫಿಕ್ಸ್ ಮಾಡುವ ಸಲುವಾಗಿ ಎಲ್ಲಾ ಕೆಲಸ ನಿಲ್ಲಿಸಿದ್ದಾರೆ. ಕಳೆದ 4 ವರ್ಷದ ಬೆಂಗಳೂರು ಅಭಿವೃದ್ಧಿ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಒಬ್ಬ ಮಂತ್ರಿ ಹೇಳುತ್ತಾರೆ. ಇದು ನಗೆಪಾಟಲಿನ ವಿಚಾರ ಎಂದಿದ್ದರು.
ನಾಲ್ಕು ವರ್ಷದ ಅಭಿವೃದ್ಧಿ ಕಾರ್ಯಗಳ ತನಿಖೆ ಯಾವ ರೀತಿ, ಎಲ್ಲಿಂದ ಮಾಡಲು ಸಾಧ್ಯ. ಇವತ್ತು ಬೆಳಿಗ್ಗೆಯಾದರೆ ಯಾವ ಮಂತ್ರಿ ನೋಡಿದರೂ ತನಿಖೆ ಎನ್ನುತ್ತಿದ್ದಾರೆ. ಐದು ಗ್ಯಾರಂಟಿಗಳ ಜೊತೆಗೆ ತನಿಖಾ ಜ್ಯೋತಿ ಕೊಡಲು ಹೊರಟಿದ್ದಾರೆ. ಈ ಸರ್ಕಾರದ ಹೇಳಿಕೆ ನೋಡಿದರೆ ಇದು 6ನೇ ಗ್ಯಾರಂಟಿ. ಹಿಂದಿನ ಸರ್ಕಾರದ ತನಿಖಾ ಜ್ಯೋತಿ ಎಂದು ಸೇರಿಸಿಕೊಳ್ಳಿ. ಇವರ ಯಾವ ತನಿಖೆಗಳಿಗೂ ತಾರ್ಕಿಕ ಅಂತ್ಯ ಇಲ್ಲ ಎಂದು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದರು.












Click it and Unblock the Notifications