ದರ್ಶನ್ ಕೇಸ್; ಪೊಲೀಸ್ ಠಾಣೆಗೆ ಶಾಮಿಯಾನ ಎಲ್ಲೂ ನೋಡಿಲ್ಲ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಜೂನ್ 15: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರ ನಟ ದರ್ಶನ್ ಕೇಸ್ ನಲ್ಲಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಕುರಿತು ಸಾಕಷ್ಟು ಟೀಕೆ ಟಿಪ್ಪಣಿಗಳು ನಡೆಯುತ್ತಿದ್ದು, ಇತಿಹಾಸದಲ್ಲಿ ಈ ರೀತಿಯ ಘಟನೆ ಎಂದೂ ನಾನು ನೋಡಿಲ್ಲ. ಈ ಸರ್ಕಾರಕ್ಕೆ ಗೌರವ ಇದ್ದರೆ ಸರಿಪಡಿಸಿಕೊಳ್ಳಲಿ ಎಂದು ಮಾಜಿ ಸಿಎಂ ಹಾಗೂ ಕೇಂದ್ರ ಸಚಿವರಾದ ಹೆಚ್ ಡಿ ಕುಮಾರಸ್ವಾಮಿ ಅವರು ಹೇಳಿದರು.
ನಾನು ಕೇಂದ್ರ ಸಚಿವನಾಗಿದ್ದು ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ನನ್ನ ವಿರುದ್ಧ ಒಳಸಂಚು ನಡೆಸುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ದೇವೆಗೌಡರ ಕುಟುಂಬದ ವರ್ಚಸ್ಸು ಹಾಳು ಮಾಡಿದ್ದು ಆಯಿತು. ಈಗ ಯಡಿಯೂರಪ್ಪ ಅವರನ್ನು ಮುಗಿಸಲು ಹೊರಟಿದ್ದಾರೆ. ಅದಾದ ಮೇಲೆ ನನ್ನನ್ನು ಗುರಿ ಮಾಡಿದ್ದಾರೆ ಎಂದು ದೂರಿದರು.

ಯಡಿಯೂರಪ್ಪ ಅವರ ವಿಚಾರದಲ್ಲಿ ರಾಜ್ಯ ಸರ್ಕಾರ ಬಹಳ ಸಂಶಯಾಸ್ಪದವಾಗಿ ನಡೆದುಕೊಳ್ಳುತ್ತಿದೆ. ನನಗೆ ಈ ಸರ್ಕಾರದ ನಾಲ್ಕು ತಿಂಗಳ ನಡುವಳಿಕೆ ಮೇಲೆ ರಾಜ್ಯವೇ ಅನುಮಾನ ಪಡುವಂತೆ ಕಾಣುತ್ತಿದೆ. ಈ ಸರ್ಕಾರದಲ್ಲಿ ಕಾನೂನು ಪಂಡಿತರು ಬಹಳ ಜನ ಇದ್ದಾರೆ. ಅವರಿಗೆ ಹೇಳಿ, ಕುಮಾರಸ್ವಾಮಿಯದ್ದು ಏನಾದರೂ ಸಿಗುತ್ತದೆಯಾ ನೋಡಿ ಎಂದು ಕೆದಕಲು ಹೇಳಿದ್ದಾರೆ. ಅಂತಹ ಸಿಎಂ ಸಿದ್ದರಾಮಯ್ಯ ಅವರು ಈಗ ನಾಲ್ಕು ತಿಂಗಳ ನಂತರ ಯಡಿಯೂರಪ್ಪ ಅವರ ಕೇಸ್ ಕೆದಕ್ಕಿದ್ದಾರೆ. ನನ್ನ ಮುಗಿಸಲು ಪ್ರಯತ್ನ ಮಾಡ್ತಿದ್ದಾರೆ ಎಂದು ಕೇಂದ್ರ ಸಚಿವರು ಆರೋಪ ಮಾಡಿದರು.
ಕೆಲವು ನಾಯಕರು ನನ್ನ ಮುಗಿಸುವ ಪ್ರಯತ್ನ ಮಾಡುತ್ತಲೇ ಇದ್ದಾರೆ. ಅವರ ಪ್ರಯತ್ನ ಅವರು ಮಾಡಲಿ. ನನ್ನ ಮೇಲೆ ಯಾವುದಾದರೂ ಕೇಸ್ ಇದೆಯಾ ಎಂದು ಹುಡುಕುತ್ತಿದ್ದಾರೆ. ಕುಮಾರಸ್ವಾಮಿಯನ್ನು ಜೈಲಿಗೆ ಹಾಕಬೇಕು ಪ್ರಯತ್ನ ನಡೆಯುತ್ತಿದೆ. ಯಾವುದೋ ಹಳೇ ಕೇಸ್ ಹುಡುಕುತ್ತಿದ್ದಾರೆ. ಅವರಿಗೆ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಇಲ್ಲ. ಕುಮಾರಸ್ವಾಮಿಯನ್ನು ಹೇಗೆ ಮುಗಿಸಿಬೇಕು ಎಂಬುದು ಪ್ಲಾನ್ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.
-
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications