ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕುರಿತು ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದೇನು?

ಮಂಡ್ಯ, ಸೆಪ್ಟೆಂಬರ್‌ 25: ಸಿಎಂ ಪ್ರಾಸಿಕ್ಯೂಶನ್ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ, ಯಾವುದೇ ತೀರ್ಮಾನ ಆಗದೇ ಇದ್ದರೂ ನನ್ನನ್ನು ಆರೋಪಿ ಮಾಡುತ್ತಿದ್ದಾರೆ. ನನ್ನ ಮೇಲಿನ ಆರೋಪ ಎಲ್ಲಾ ಮುಗಿಯಲಿ, ಅದೆಲ್ಲಾ ಮುಗಿದ ಮೇಲೆ ಮಾತಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಹೈಕೋರ್ಟ್ ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮೈಸೂರು ಪಾದಯಾತ್ರೆಗೆ ನಾನೂ ಹೋಗಿದ್ದೆ, ಪಾದಯಾತ್ರೆಯಲ್ಲಿ ನಾನು ಜನರನ್ನು ಜಾಗೃತರನ್ನಾಗಿ ಮಾಡುವ ಕೆಲಸ ಮಾಡಿದ್ದೇನೆ. ಬಿಜೆಪಿ ನಾಯಕರ ಜತೆ ಹೆಜ್ಜೆ ಹಾಕಿದ್ದೇನೆ ಎಂದು ಹೇಳಿದರು.

HD Kumaraswamy s Reaction On Chief Minister Siddaramaiah s Resignation

ನಾನು ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯ ಮಾಡಿಲ್ಲ, ಇರುವ ಪರಿಸ್ಥಿತಿಯನ್ನು ಜನರಿಗೆ ಹೇಳಿದ್ದೇನೆ. ದೇಶದ ಕಾನೂನನಲ್ಲಿ ರಕ್ಷಣೆ ಕೊಡಲು ಸಂವಿಧಾನದಲ್ಲಿ ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ ಏನು ತೀರ್ಪು ಬೇಕು ಅದು ನ್ಯಾಯಾಲಯ ಕೊಡುತ್ತದೆ. ಕಾನೂನಿನ ಒಳಗೆ ಇದ್ದರೆ ಏನು ಬೇಕಾದರೂ ಆಗಬಹುದು ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ನಾನು ಸಿದ್ದರಾಮಯ್ಯ ಅವರಿಗೆ ಏನಾನೂ ಹೇಳಲ್ಲ. ನನ್ನ ಅಭಿಪ್ರಾಯ ನಾನು ಹೇಳಲ್ಲ. ಕುಮಾರಸ್ವಾಮಿ ಏನೋ ಮಾಡಿದ್ದಾನೆ ಎಂದು ಹೇಳಿದ್ದಾರೆ. ನನ್ನ ನೈತಿಕತೆ ಏನು ಅನ್ನೊದು ಕ್ಲಿಯರ್ ಆಗಬೇಕು. ಗ್ರೇಟ್ ಪಾಲಿಟಿಷಿಯನ್ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾರೆ, ಮಾಡಲಿ, ಉತ್ತರ ಕೊಡುತ್ತೇನೆ. ಪ್ರಾಸಿಕ್ಯೂಷನ್ ಪ್ರಕರಣ ಕ್ಲಿಯರ್ ಆದ ಬಳಿಕ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು.

ತಮ್ಮ ವಿರುದ್ಧ ಕಾಂಗ್ರೆಸ್ ನಾಯಕರ ಆರೋಪಕ್ಕೆ ಪ್ರತಿಕ್ರಿಯೆಸಿದ ಅವರು, ಸಿಎಂ ನೈತಿಕ ಹೊಣೆ ಹೊರಲಿಲ್ಲ ಅಂದರೆ, ಹೊತ್ತುಕೊಳ್ಳಿ ಎಂದು ನಾನು‌ ಹೇಳಲು ಆಗುತ್ತಾ? ನನ್ನನ್ನು ಇಕ್ಕಟ್ಟಿಗೆ ಸಿಕ್ಕಿಸಲು ಹೋಗಿದ್ದಾರೆ. ನಾನು ಹೆ,ಕಾನೂನಿನ ವ್ಯಾಪ್ತಿಯಲ್ಲಿ ಹೋರಾಟ ಮಾಡುತ್ತೇನೆ. ನಾಲ್ಕೈದು ಮಂದಿ ಬಿಡಾಡಿ ಮಂತ್ರಿಗಳು ನನ್ನ ಮೇಲೆ ಆರೋಪ ಮಾಡಿದ್ದಾರೆ, ಅವರಿಗೆ ನಾನು ಉತ್ತರ ಕೊಡುವ ಅಗತ್ಯ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ನನ್ನ ವಿರುದ್ಧ ಷಡ್ಯಂತ್ರ ನಡೆಯುತ್ತಿರುವ ಬಗ್ಗೆ ಇನ್ನೂ ಅನುಮಾನ ಇದೆ. ನಾನು ಇದನ್ನು ಷಡ್ಯಂತ್ರ ಅನ್ನವುದಿಲ್ಲ, ಕುಮಾರಸ್ವಾಮಿ ಕೇಂದ್ರ ಸಚಿವನಾಗಿರುವುದನ್ನು ಕೆಲವರಿಗೆ ಸಹಿಸಲಾಗುತ್ತಿಲ್ಲ. ಜನರ ನಡುವೆ ಕಂದಕ ಸೃಷ್ಟಿ ಮಾಡಲು ಹೀಗೆ ಮಾಡುತ್ತಿದ್ದಾರೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಅವರು ಕಿಡಿಕಾರಿದರು. ನನ್ನ ವಿರುದ್ಧ ಯಾವ ಬಿಡಾಡಿಗಳು ಏನೂ ಮಾಡಲು ಆಗಲ್ಲ. ಕಾಲಭೈರವೇಶ್ವರನ ಸನ್ನಿಧಿಯಲ್ಲಿ ಹೇಳುತ್ತಿದೇನೆ ಎಂದು ಸಚಿವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+