'Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ಏನಂತೀರಿ?'
ಬೆಂಗಳೂರು, ಸೆಪ್ಟೆಂಬರ್ 27: ಶ್ರೀಮಾನ್ ಸಿದ್ದರಾಮಯ್ಯನವರೇ.. ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು. ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ! ಇಂದು: ಮೂಡಾ ಹಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇ ಗತಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, Karma Hit back ಎಂದರೇ ಇದೇ ಅಲ್ಲವೇ ಸಿದ್ದರಾಮಯ್ಯನವರೇ? ನಿಮ್ಮ ಗ್ರಹಚಾರಕ್ಕೆ ಎಸಿಬಿಯನ್ನೂ ಹೈಕೋರ್ಟ್ ಬರ್ಖಾಸ್ತು ಮಾಡಿಬಿಟ್ಟಿತು. ಈಗ ಲೋಕಾಯುಕ್ತವನ್ನೇ ಗುರಾಣಿ ಮಾಡಿಕೊಂಡು ಸಿಬಿಐ ರಾಜ್ಯ ಪ್ರವೇಶಕ್ಕೆ ಸಂಪುಟದಿಂದ ಬಾಗಿಲು ಬಂದ್ ಮಾಡಿಸಿದ್ದೀರಿ. ಅಲ್ಲಿಗೆ ಆರೋಪಿ ಅಪರಾಧಿಯಾದ ಎಂದೇ ಲೆಕ್ಕ. ' ಸಿದ್ದಾಪರಾದ' ಸಾಬೀತಿಗೆ ಇನ್ನೊಂದೇ ಹೆಜ್ಜೆ ಬಾಕಿ ಎಂಔದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನಾನು ಭಾವಿಸಿದಷ್ಟು ಧೈರ್ಯವಂತರಲ್ಲ ನೀವು..ನಿಮಗೂ ಭಯವಿದೆ. ಅದೇ ಈ ನೆಲದ ಕಾನೂನಿನ ಶಕ್ತಿ. ಏನಂತೀರಿ? ಮುಖ್ಯಮಂತ್ರಿ ಸಿದ್ದರಾಮಯ್ಯ ನವರೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಇನ್ನೂ ಮುಡಾ ಹಗರಣದ ಕುರಿತು ಜೆಡಿಎಸ್ ರಾಜ್ಯ ಘಟಕ ಕಿಡಿಕಾರಿದ್ದು,ಊಸರವಳ್ಳಿ ಕಾಂಗ್ರೆಸ್ ಸರ್ಕಾರ"ದ ಭ್ರಷ್ಟಾಚಾರ ಮುಚ್ಚಿಕೊಳ್ಳುವ "ಕಳ್ಳಾಟ" ಶುರುವಾಗಿದೆ. ನಾನು ತಪ್ಪೇ ಮಾಡಿಲ್ಲ, ಯಾರಿಗೂ ಹೆದರಲ್ಲ ಎಂದು ಬಡಾಯಿ ಕೊಚ್ಚಿಕೊಳ್ಳುವ ನಿಮಗೆ "ಸಿಬಿಐ" ಭಯವೇಕೆ..? ಎಂದು ಪ್ರಶ್ನಿಸಿದೆ.
ಶ್ರೀಮಾನ್ ಸಿದ್ದರಾಮಯ್ಯನವರೇ..
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 27, 2024
ನಿಮ್ಮ 'ಸಿದ್ವಿಲಾಸ'ಕ್ಕೆ ಉಘೇಉಘೇ ಎನ್ನಲೇಬೇಕು.
ಅಂದು: ಹಗರಣಗಳಿಂದ ಪಾರಾಗಲು ಲೋಕಾಯುಕ್ತಕ್ಕೇ ಸಮಾಧಿ ಕಟ್ಟಿ ಎಸಿಬಿ ರಚನೆ ಮಾಡಿಕೊಂಡಿರಿ!
ಇಂದು: ಮೂಡಾಗರಣದಿಂದ ಬಚಾವಾಗಲು ನಿಮಗೀಗ ಅದೇ ಲೋಕಾಯುಕ್ತವೇsss ಗತಿ!!
Karma Hit back ಎಂದರೇ ಇದೇ ಅಲ್ಲವೇ @siddaramaiah ನವರೇ?
ನಿಮ್ಮ ಗ್ರಹಚಾರಕ್ಕೆ…
ಕಾಂಗ್ರೆಸ್ಸಿಗರೇ..., ಬಾಯಿ ಬಿಟ್ಟರೇ ಸಂವಿಧಾನ ಉಳಿಸುತ್ತೇವೆ, ರಕ್ಷಿಸುತ್ತೇವೆ ಎನ್ನುವುದು ಬರೀ ಬೊಗಳೆಯೇ..? ಭ್ರಷ್ಟಾಚಾರಿ ಸಿದ್ದರಾಮಯ್ಯ ಅವರೇ ನಿಮ್ಮ ಭ್ರಷ್ಟಾಚಾರಗಳನ್ನು ಮುಚ್ಚಿಕೊಳ್ಳಲು ಹಿಂದೆ ಲೋಕಾಯುಕ್ತ ಸಂಸ್ಥೆಯ ಅಧಿಕಾರವನ್ನೇ ಕಿತ್ತುಕೊಂಡಿರಿ.. ಮುಡಾ ಪ್ರಕರಣದಲ್ಲಿ, ಮುಕ್ಕಿ ತಿಂದಿರುವ "ವೈಟ್ನರ್"ರಾಮಯ್ಯ ಹಾಗೂ ಕುಟುಂಬದ ವಿರುದ್ಧ ಸಿಬಿಐ ವಿಚಾರಣೆ ನಡೆದರೆ, ಎಲ್ಲಿ ತಮ್ಮ "ಮುಡಾ" ನಿಗೂಢ "ರಹಸ್ಯ" ಬಯಲಾಗುತ್ತೋ ಎಂಬ ಆತಂಕ ಕಾಡುತ್ತಿದೆ. ಸಿಬಿಐ ಅನ್ನು ಕಟ್ಟಿಹಾಕಲು ಹೊರಟಿರುವ ಕಾಂಗ್ರೆಸ್ ಸರ್ಕಾರದ ನಿಜಬಣ್ಣ ಬಯಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಘಟಕ ಹೇಳಿದೆ.












Click it and Unblock the Notifications