ಕುಮಾರಸ್ವಾಮಿ ಸಿಎಂ ಆಗಿದ್ದಾಗ ವ್ಯಾಪಾರ ಮಾಡಿಕೊಂಡಿದ್ದ ಗಿರಾಕಿ ಅವರು: ಹೆಚ್‌ ಡಿ ರೇವಣ್ಣ ಹೇಳಿದ್ದು ಯಾರಿಗೆ?

ಹಾಸನ, ಡಿಸೆಂಬರ್‌ 01: ಮಧು ಬಂಗಾರಪ್ಪ ನಮ್ಮ ಪಕ್ಷದ ಬಗ್ಗೆ ಮಾತನಾಡುವ ಮೊದಲು ಅವರು ಎಲ್ಲಿಂದ ಬಂದಿದ್ದರು ಎಂಬುದನ್ನ ಕಲಿತುಕೊಳ್ಳಬೇಕು. ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಗಿರಾಕಿ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ಹೆಚ್‌ ಡಿ ರೇವಣ್ಣ ಕಿಡಿಕಾರಿದ್ದಾರೆ.

ಈ ಕುರಿತು ಹಾಸನದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ ಆದರೆ ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಸರ್ಕಾರದ ವಿರುದ್ದ ರೇವಣ್ಣ ವಾಗ್ದಾಳಿ ನಡೆಸಿದರು.

HD Revanna Attack Against Madhu Bangarappa

ಬರಗಾಲದ ನಿರ್ವಹಣೆಗಾಗಿ ಸರ್ಕಾರ 12 ಕೋಟಿ ರೂ.ಅನುದಾನವನ್ನು ಜಿಲ್ಲಾಧಿಕಾರಿಗಳ ಖಾತೆಗೆ ಹಾಕಲಾಗಿದೆ. ಅದರಲ್ಲಿ ಪ್ರತಿ ತಾಲೂಕಿಗೆ 50 ಲಕ್ಷ ಅನುದಾನವನ್ನ ಹಂಚಿಕೆ ಮಾಡಿದ್ದಾರೆ. ಇನ್ನ ಉಳಿದ ಎಂಟು ಕೋಟಿ ಅವರ ಖಾತೆಯಲ್ಲಿ ಇದೆ. ಆದರೆ ಹಂಚಿಕೆ ಮಾಡಿರುವ ಅನುದಾನವನ್ನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಎನ್.ಡಿಆರ್‌ಎಫ್ ಮತ್ತು ಎಸ್‌ಟಿಆರ್ ಎಫ್ ಗೈಡ್ ಲೈನ್ ಪ್ರಕಾರ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಸಾಕಷ್ಟು ಸಮಸ್ಯೆಗಳು ಉಂಟಾಗುತ್ತಿವೆ. ಆದ್ದರಿಂದ ಸರ್ಕಾರ ಇದರ ಬಗ್ಗೆ ಗಮನಹರಿಸಬೇಕು. ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮತ್ತು ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದ್ದು ಹೇಮಾವತಿ ಜಲಾಶಯದಿಂದ ನಾಲೆಗಳ ಮೂಲಕ ನೀರು ಹರಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬರಗಾಲದಿಂದ ಜನರು ಸಾಕಷ್ಟು ಸಂಕಷ್ಟದಲ್ಲಿದ್ದಾರೆ ಆದರೆ ಸರ್ಕಾರ ರಾಜ್ಯವನ್ನ ಮರೆತು ತೆಲಂಗಾಣದಲ್ಲಿ ಚುನಾವಣೆ ಮಾಡಲು ಹೋಗಿದ್ದಾರೆ ಇದರಿಂದ ರಾಜ್ಯವನ್ನ ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಜಿಲ್ಲೆಯಲ್ಲಿ ತೆಂಗು ಬೆಳೆ ಸಂಪೂರ್ಣವಾಗಿ ನಾಶವಾಗುತ್ತಿದೆ ಅಲ್ಲದೆ ಕೊಬ್ಬರಿ ಮತ್ತು ತೆಂಗಿಗೆ ಬೆಂಬಲ ಬೆಲೆ ನಿಗದಿಪಡಿಸುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿರುವುದರಿಂದ ಡಿ.2ರಂದು ನಗರದ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿಗಳ ಕಚೇರಿ ವರೆಗೂ ತೆಂಗಿನಕಾಯಿ ಮತ್ತು ಕೊಬ್ಬರಿಯನ್ನ ಒಡೆಯುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎಚ್ಚರಿಸಿದರು

ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜು ಕಾಲೇಜುಗಳಲ್ಲಿ ಸಿಬ್ಬಂದಿಗಳ ಕೊರತೆಯಿಂದಾಗಿ ಶಿಕ್ಷಕರು ಮತ್ತು ಉಪನ್ಯಾಸಕರುಗಳೇ ಶೌಚಾಲಯ ತೊಳೆಯುವಂತಹ ಕೆಲಸ ಮಾಡುತ್ತಿದ್ದಾರೆ. ಆದರೆ ಶಿಕ್ಷಣ ಸಚಿವರು ಜಿಲ್ಲೆಗೆ ಆಗಮಿಸಿ, ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಜಿಲ್ಲಾ ಪಂಚಾಯಿತಿಯಲ್ಲಿ ಉಪ್ಪಿಟ್ಟು ಕಾಫಿ ಕುಡಿದುಕೊಂಡು ಹೋಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಶಿಕ್ಷಣ ಇಲಾಖೆ ಇಂಥ ಪರಿಸ್ಥಿತಿಗೆ ಬಂದಿರುವುದು ನಾಚಿಕೆಗೇಡಿನ ಸಂಗತಿ. ಕೇವಲ ಸರ್ಕಾರಿ ಊಟಕ್ಕಾಗಿ ಗೂಡದ ಕಾರು ಇಟ್ಟುಕೊಂಡು ತಿರುಗಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಇದನ್ನ ಬಗೆಹರಿಸುವಲ್ಲಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ. ಇಂಥವರನ್ನ ಶಿಕ್ಷಣ ಸಚಿವರನ್ನಾಗಿ ಮಾಡಿರುವುದು ನಮ್ಮ ದುರ್ದೈವ ಎಂದು ಅಸಮಧಾನ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ 3ಸಾವಿರ ಕೋಟಿ ರೈತರ ಬೆಳೆ ನಷ್ಟವಾಗಿದೆ. ಆದರೆ ಕೇವಲ ನಮಗೆ 121 ಕೋಟಿ ರೂ ಪರಿಹಾರ ಹಣ ಬರುತ್ತದೆ. ರಾಜ್ಯ ಸರ್ಕಾರ ಕೇಂದ್ರದ ಹಣವನ್ನು ಕಾಯುತ್ತಿದ್ದು, ರೈತರ ಹಿತ ಕಾಯುವಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೊಳೆನರಸೀಪುರದಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ಸಭೆ ಕರೆದು ಮುಂದಿನ ಪಕ್ಷ ಸಂಘಟನೆ ಮತ್ತು ಚುನಾವಣೆ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್ ಪಕ್ಷ ಹಿಂದಿನ ನೆಹರು ಮತ್ತು ಗಾಂಧಿಜಿಯವರ ಕಾಂಗ್ರೆಸ್ ಪಕ್ಷವಾಗಿ ಉಳಿದಿಲ್ಲ. ಈಗಿನ ನಾಯಕರಿಂದಲೇ ಕಾಂಗ್ರೆಸ್ ಧೂಳಿ ಪಟವಾಗಲಿದೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಭವಿಷ್ಯ ನುಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+