ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಪುಟ ರಚನೆಯಲ್ಲಿ ನನ್ನ ಪಾತ್ರವಿಲ್ಲ: ಎಚ್‌.ಡಿ. ದೇವೇಗೌಡ ಸ್ಪಷ್ಟನೆ

By Nayana
|
Google Oneindia Kannada News

ಬೆಂಗಳೂರು, ಮೇ 22: ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೆಲವು ಪತ್ರಿಕೆಗಳಲ್ಲಿ ಇಂದು ಪ್ರಕಟವಾಗಿರುವ ಸುದ್ದಿಯ ಬಗ್ಗೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ .

ಸ್ಪೀಕರ್‌ ಸ್ಥಾನ ಕಾಂಗ್ರೆಸ್‌ಗೆ ಬಿಟ್ಟುಕೊಡಲು ಒಪ್ಪಿಕೊಂಡ ಜೆಡಿಎಸ್ ಸ್ಪೀಕರ್‌ ಸ್ಥಾನ ಕಾಂಗ್ರೆಸ್‌ಗೆ ಬಿಟ್ಟುಕೊಡಲು ಒಪ್ಪಿಕೊಂಡ ಜೆಡಿಎಸ್

ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ಅವರು, ಕಾಂಗೆಸ್‌ ನಾಯಕರಲ್ಲಿ ಡಿ ಕೆ ಶಿವಕುಮಾರ್ ಹಾಗೂ ಎಂ ಬಿ ಪಾಟೀಲ್ ಅವರನ್ನು ಸಂಪುಟಕ್ಕೆ ಸೇರ್ಪಡಿಸಲು ತಮ್ಮ ವಿರೋಧವಿದೆ ಎಂಬ ಅರ್ಥದಲ್ಲಿ ಪ್ರಕಟವಾಗುವ ಸುದ್ದಿ ಕುಚೋದ್ಯದಿಂದ ಕೂಡಿದ್ದು ಜನರನ್ನು ದಾರಿತಪ್ಪಿಸುವ ಕೆಲಸವಾಗಿದೆ ಎಂದು ತಿಳಿಸಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಭವಿಷ್ಯ ಮತ್ತು ದೇವೇಗೌಡರ ಜಾಣ್ಮೆಜೆಡಿಎಸ್-ಕಾಂಗ್ರೆಸ್ ಮೈತ್ರಿಯ ಭವಿಷ್ಯ ಮತ್ತು ದೇವೇಗೌಡರ ಜಾಣ್ಮೆ

HDD clarified he has no role in cabinet formation

ಸಚಿವ ಸಂಪುಟ ರಚನೆಯನ್ನು ನಿಯೋಜಿತ ಮುಖ್ಯಮಂತ್ರಿಗಳು ಕಾಂಗ್ರೆಸ್ ನಾಯಕರೊಂದಿಗೆ ಸಮಾಲೋಚಿಸಿ ನಿರ್ಧರಿಸಲಿದ್ದಾರೆ ಇದರಲ್ಲಿ ನನ್ನ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾವುದೇ ಮಾಧ್ಯಮ ಸುದ್ದಿ ಪ್ರಕಟಣೆಗೆ ಮುನ್ನ ಅಧಿಕೃತ ಮಾಹಿತಿ ಪಡೆಯಬೇಕು .ಈ ರೀತಿಯ ಆಧಾರ ರಹಿತ ಸುದ್ದಿ ಪ್ರಕಟಣೆ ಪತ್ರಿಕೋದ್ಯಮಕ್ಕೆ ಮಾರಕ ಎಂದಿದಿದ್ದಾರೆ.

English summary
Former prime minister H.D.Devegowda has clarified that he had no role in formation of state cabinet. Section of media have reported wrongly he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X