ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಜೆಡಿಎಸ್ ಕಿಂಗ್, ಕಿಂಗ್ ಮೇಕರ್ ಅಲ್ಲ: ಎಚ್ಡಿಕೆ ವಿಶ್ವಾಸ

|
Google Oneindia Kannada News

ಕೋಲಾರ, ಫೆಬ್ರವರಿ 3 : ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕಿಂಗ್ ಆಗಲಿದೆ ವಿನಃ ಕಿಂಗ್ ಮೇಕರ್ ಆಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕೋಲಾರ ಜಿಲ್ಲೆಯ ಬಂಗಾರ ಪೇಟೆಯಲ್ಲಿ ಶನಿವಾರ ಕುಮಾರ ಚೈತನ್ಯ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಚ ಈ ಬಾರಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯ ನಾಡ ವಿರೋಧಿ ನಿರ್ಧಾರಗಳಿಂದ ರಾಜ್ಯದ ಜನತೆ ಬೇಸತ್ತಿದ್ದಾರೆ.

ಸಿದ್ದರಾಮಯ್ಯ ಬಿಜೆಪಿ ಜತೆ ಸೇರಿದರೂ ಅಚ್ಚರಿ ಇಲ್ಲ: ಕುಮಾರಸ್ವಾಮಿಸಿದ್ದರಾಮಯ್ಯ ಬಿಜೆಪಿ ಜತೆ ಸೇರಿದರೂ ಅಚ್ಚರಿ ಇಲ್ಲ: ಕುಮಾರಸ್ವಾಮಿ

ಒಂದೆಡೆ ಕಾವೇರಿ ನದಿ ನೀರಿನ ಸಮಸ್ಯೆ ಮತ್ತೊಂದೆಡೆ ಮಹಾದಾಯಿ ನದಿ ನೀರಿನ ಸಮಸ್ಯೆಯನ್ನು ಇತ್ಯರ್ಥಪಡಿಸುವಲ್ಲಿ ಎರಡೂ ರಾಜಕೀಯ ಪಕ್ಷಗಳು ವಿಫಲವಾಗಿದ್ದು, ಕೇವಲ ರಾಜಕೀಯ ಕಾರಣಕ್ಕಾಗಿ ನದಿ ವಿವಾದವನ್ನು ಬಳಕೆ ಮಾಡಿಕೊಳ್ಳುತ್ತಿದೆ. ಹೀಗಾಗಿ ರಾಜ್ಯದ ನೆಲ, ಜಲ, ಭಾಷೆ ರಕ್ಷಣೆಗೆ ಜೆಡಿಎಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕೆಂಬುವ ಆಸೆಯನ್ನು ರಾಜ್ಯದ ಜನತೆ ಹೊಂದಿರುವುದಾಗಿ ವಿಶ್ಲೇಷಿಸಿದರು.

HDK claims that he is king, not kingmaker

ಕೋಲಾರ ಜಿಲ್ಲೆಗೆ ಎತ್ತಿನಹೊಳೆ ಯೋಜನೆ ಮೂಲಕ ಕುಡಿಯುವ ನೀರು ಹಾಗೂ ಸಮಗ್ರ ನೀರಾವರಿ ಯೋಜನೆಗೆ ನೀರು ಕೊಡುವುದಾಗಿ ಹೇಳುತ್ತಾ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಬೆಂಗಳೂರಿನ ತ್ಯಾಜ್ಯ ನೀರನ್ನು ಸಂಸ್ಕರಿಸಿ ಕೋಲಾರ ಜಿಲ್ಲೆಗೆ ಪೂರೈಸುವ ಮೂಲಕ ಜಿಲ್ಲೆಯ ಜನತೆಗೆ ಬಳಕೆ ಗೆ ನೀರನ್ನು ಪೂರೈಸುವ ಪ್ರಯತ್ನವನ್ನು ಮಾಡುತ್ತಿದ್ದಾರೆ.

ಕೇವಲ ಅಧಿಕಾರಕ್ಕಾಗಿ ಜನರ ಕಣ್ಣೊರೆಸುವ ತಂತ್ರದ ಯೋಜನೆಯನ್ನು ರೂಪಿಸುವಲ್ಲಿ ಸಿದ್ದರಾಮಯ್ಯ ನಿಸ್ಸೀಮರು ಸರ್ಕಾರದ ಹಿಂದಿನ ಈ ಕುತಂತ್ರವನ್ನು ಜಿಲ್ಲೆಯ ಜನತೆ ಅರ್ಥಮಾಡಿಕೊಂಡು ಜೆಡಿಎಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.

English summary
Former chief minister HD Kumaraswamy claimed that the jds party will be king after assembly poll in the stare rather king maker as people will support regional party to protect interest of the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X