ಹಾನಗಲ್ ಉಪ ಚುನಾವಣೆ: ಕಾಂಗ್ರೆಸ್ಗೆ ಶಾಕ್ ಕೊಟ್ಟ ಮಾಜಿ ಸಿಎಂ ಕುಮಾರಸ್ವಾಮಿ!
ಬೆಂಗಳೂರು, ಜೂ. 15: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಕುರಿತು ಬಿಸಿ ಬಿಸಿ ಚರ್ಚೆ ನಡೆದಿರುವಾಗಲೇ ಮತ್ತೊಂದು ಉಪ ಚುನಾವಣೆ ಎದುರಾಗಿದೆ. ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ. ಎಂ. ಉದಾಸಿ ಅವರ ನಿಧನದಿಂದ ತೆರವಾಗಿರುವ ಕ್ಷೇತ್ರಕ್ಕೆ ಶೀಘ್ರದಲ್ಲಿ ಉಪ ಚುನಾವಣೆ ನಡೆಯಲಿದೆ. ಮೇಲ್ನೋಟಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮಧ್ಯೆ ನೇರ ಹಣಾಹಣಿ ಇದ್ದರೂ ಈ ಬಾರಿ ಜೆಡಿಎಸ್ ಪಕ್ಷ ಕೂಡ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.

ಕಾಂಗ್ರೆಸ್ ಹಾಗೂ ಬಿಜೆಪಿಗಳಿಗಿಂತ ಮೊದಲು ಜೆಡಿಎಸ್ ಪಕ್ಷ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ಎರಡೂ ರಾಷ್ಟ್ರೀಯ ಪಕ್ಷಗಳಿಗೆ ತೀವ್ರ ಪೈಪೋಟಿ ಕೊಡಲು ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಾಂಗ್ರೆಸ್ ಪಕ್ಷದ ನಿಯಾಜ್ ಶೇಖ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಇಂದು (ಜೂ.15) ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಪಕ್ಷ ಸೇರ್ಪಡೆ ಬಳಿಕ, "ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ನಿಯಾಜ್ ಶೇಖ್ ಅವರು ಕಣಕ್ಕಿಳಿಯಲಿದ್ದಾರೆ" ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

Recommended Video
ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಕಳೆದ ವಾರವಷ್ಟೇ ವಯೋಸಹಜ ಅನಾರೋಗ್ಯದಿಂದ ಹಾನಗಲ್ ವಿಧಾನಸಬಾ ಕ್ಷೇತ್ರದ ಶಾಸಕರಾಗಿದ್ದ ಮಾಜಿ ಸಚಿವ ಸಿ.ಎಂ. ಉದಾಸಿ ಅವರು ನಿಧಾನರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಶ್ರೀನಿವಾಸ್ ಮಾನೆ ಅವರು ಕಣಕ್ಕಳಿಯುವ ಸಾಧ್ಯತೆಯಿದ್ದು, ಬಿಜೆಪಿ ಟಿಕೆಟ್ಗಾಗಿ ಪಕ್ಷದಲ್ಲಿ ಭಾರಿ ಪೈಪೋಟಿ ಶುರುವಾಗಿದೆ ಎಂಬ ಮಾಹಿತಿಯಿದೆ.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ












Click it and Unblock the Notifications