ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನಿಷ್ಠ ಒಂದು ವರ್ಷದವರೆಗೆ ವಿದ್ಯುತ್ ದರ ಏರಿಕೆ ಬೇಡ: ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ನವೆಂಬರ್ 05: ಕನಿಷ್ಠ ಒಂದು ವರ್ಷದವರೆಗೆ ವಿದ್ಯುತ್ ದರ ಏರಿಕೆ ಬೇಡ ಎಂದು ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಕೊರೊನಾ ಸೋಂಕು, ನೆರೆ ಹಾವಳಿ, ಆರ್ಥಿಕ ಕುಸಿತದಿಂದ ತತ್ತರಿಸಿ ಹೋಗಿರುವ ರಾಜ್ಯದ ಜನತೆಗೆ ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಸರ್ಕಾರ ಗಾಯದ ಮೇಲೆ ಬರೆ ಎಳೆದಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ.

ತಿ.ನರಸೀಪುರ; ವಿದ್ಯುತ್ ಕಂಬದಿಂದ ಬಿದ್ದು ಮೂವರು ಚೆಸ್ಕಾಂ ನೌಕರರಿಗೆ ಗಂಭೀರ ಗಾಯತಿ.ನರಸೀಪುರ; ವಿದ್ಯುತ್ ಕಂಬದಿಂದ ಬಿದ್ದು ಮೂವರು ಚೆಸ್ಕಾಂ ನೌಕರರಿಗೆ ಗಂಭೀರ ಗಾಯ

ಪ್ರತಿ ಯೂನಿಟ್ ಗೆ ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಆರ್ಥಿಕ ಹೊರೆಯಾಗುತ್ತದೆ. ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

HDK Demands Not To Increases Electricity Bill For One Year

ಕೊರೊನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ.

ಇಂತಹ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡುವುದು ಸರಿಯಲ್ಲ. ಇನ್ನು ಕನಿಷ್ಠ ಒಂದು ವರ್ಷದವರೆಗೆ ವಿದ್ಯುತ್ ದರ ಏರಿಕೆ ಪ್ರಸ್ತಾಪವನ್ನು ಮುಂದೂಡಿ ಎಂದು ಸರ್ಕಾರವನ್ನು ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.

English summary
Former Chief Minister HD Kumaraswamy Demands Not to change Electricity Bill For One Year in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X