HD Kumaraswamy: ಕಾಶ್ಮೀರದಲ್ಲಿ ಸಿಲುಕಿದ್ದ ಕರ್ನಾಕದ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ವಾಪಾಸ್ ಕರೆತರಲು ಎಚ್‌ಡಿಕೆ ನೆರವು
HD Kumaraswamy Help: ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಹೆಚ್ಚಾಗುತ್ತಿದ್ದಂತೆ ಅಮೆರಿಕ ಅಧ್ಯಕ್ರ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆ ವಹಿಸಿದ್ದರು. ಈ ವೇಳೆ ಎರಡು ದೇಶಗಳು ಸಹ ಕದನ ವಿರಾಮ ಒಪ್ಪಂದಕ್ಕೆ ಸಹಿ ಹಾಕಿದ್ದವು. ಆದರೂ, ಪಾಕಿಸ್ತಾನ ಮತ್ತೆ ಮತ್ತೆ ಖ್ಯಾತೆ ತೆಗೆಯುತ್ತಿದ್ದು, ಇದಕ್ಕೆ ಪ್ರತ್ಯುತ್ತರ ಕೊಡುವ ಕೆಲಸವನ್ನು ಭಾರತೀಯ ಸೇನೆ ಮಾಡುತ್ತಿದೆ. ಪರಿಸ್ಥಿತಿ ಗಮನಿಸಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಶ್ಮೀರದಲ್ಲಿ ಸಿಲುಕಿರುವ ಕರ್ನಾಟಕದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ವಾಪಸ್ ಕರೆತರಲು ನೆರವಾಗಿದ್ದಾರೆ.
ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದ ಹಿನ್ನೆಲೆ ಕಾಶ್ಮೀರದಲ್ಲಿ ಸಿಲುಕಿರುವ ಕರ್ನಾಟಕದ 13 ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ವಾಪಸ್ ಕರೆತರಲು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಅವರು ನೆರವಾಗಿದ್ದಾರೆ ಎಂದು ತಿಳಿದುಬಂದಿದೆ.

ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ರಾಜ್ಯದ 13 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಪಾಕಿಸ್ತಾನ ಡ್ರೋನ್ ದಾಳಿ ಭೀತಿಯಲ್ಲಿದ್ದರು. ಈ ಹಿನ್ನೆಲೆ ತಗಚಗೆರೆ ಗ್ರಾಮದ ಜೆಡಿಎಸ್ ಮುಖಂಡರೊಬ್ಬರು ತಮ್ಮ ಪುತ್ರ ಹರ್ಷಿತ್ ಕಾಶ್ಮೀರದಲ್ಲಿ ಓದುತ್ತಿದ್ದು, ಯುದ್ಧ ಭೀತಿಯಿರುವ ಕಾರಣ ಅವರನ್ನು ಕರ್ನಾಟಕಕ್ಕೆ ಹಿಂತಿರುಗಿಸಲು ಸಹಾಯ ಮಾಡಿ ಎಂದು ಎಚ್‌ಡಿ ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು.
ಈ ವೇಳೆ ರಾಜ್ಯದ ಹಲವು ವಿದ್ಯಾರ್ಥಿಗಳು ಕಾಶ್ಮೀರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಾಹಿತಿ ಲಭ್ಯವಾಗಿದೆ. ತಕ್ಷಣ ಇದಕ್ಕೆ ಸ್ಪಂದಿಸಿದ ಎಚ್‌ಡಿ ಕುಮಾರಸ್ವಾಮಿ ಅವರು, ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ವಿದ್ಯಾರ್ಥಿಗಳ ರಕ್ಷಣೆಗಾಗಿ ತಮ್ಮ ಸಚಿವಾಲಯದ ಅಧಿಕಾರಿಗಳನ್ನು ನಿಯೋಜನೆ ಮಾಡಿದ್ದರು. ಸದ್ಯ ವಿದ್ಯಾರ್ಥಿಗಳನ್ನು ದೆಹಲಿಯ ಕರ್ನಾಟಕ ಭವನಕ್ಕೆ ಕರೆತರಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ಧಾರೆ ಎಂದು ತಿಳಿದುಬಂದಿದೆ.
ಇಂದು ಅಂದರೆ ಸೋಮವಾರ ಬೆಳಗ್ಗೆ 8 ಗಂಟೆಗೆ ಅವರೆಲ್ಲರೂ ದೆಹಲಿಯಿಂದ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದು, ಇದೇ ಮೇ 14ರಂದು ಬೆಳಗ್ಗೆ 8 ಗಂಟೆಗೆ ಬೆಂಗಳೂರು ತಲುಪಲಿದ್ದಾರೆ ಎಂದು ತಿಳಿದುಬಂದಿದೆ. ತಮ್ಮ ಮಕ್ಕಳ ಸಹಾಯಕ್ಕೆ ಬಂದ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಪೋಷಕರು ಧನ್ಯವಾದ ತಿಳಿಸಿದ್ದಾರೆ.
ಜಮೀರ್ ಹೇಳಿದ್ದೇನು?: ಪೆಹಲ್ಗಾಮ್‌ನಲ್ಲಿ ದಾಳಿ ನಡೆಸಿದ ಉಗ್ರರು ಅಮಾಯಕರನ್ನು ಬಲಿ ಪಡೆದಿದ್ದರು. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರವಾಗಿ ಪಾಕ್‌ಗೆ ನುಗ್ಗಿ ಅಲ್ಲಿನ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತ್ತು. ಆದರೂ ಬುದ್ಧಿ ಕಲಿಯದ ನರಿ ಬುದ್ಧಿ ಪಾಪಿಸ್ತಾನಕ್ಕೆ 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಅಡಿಯಲ್ಲಿ ತಿರುಗೇಟು ಕೊಡುವ ಕೆಲಸವನ್ನು ಮಾಡುತ್ತಿದ್ದು, ಇದಕ್ಕೆ ಬರೀ ದೇಶದ ಜನರಷ್ಟೇ ಅಲ್ಲದೆ, ವಿದೇಶಿಗರು ಸಹ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಸಚಿವ ಜಮೀರ್ ಅಹ್ಮದ್ ಅವರು ಕೂಡ ಪ್ರತಿಕ್ರಿಯಿಸಿದ್ದಾರೆ.
ಭಾರತ-ಪಾಕಿಸ್ತಾನದ ನಡುವೆ ಕ್ಷಣ ಕ್ಷಣಕ್ಕೂ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಲಿದೆ. ಪಾಕಿಸ್ತಾನ ತನ್ನ ನರಿ ಬುದ್ಧಿ ಮುಂದುವರೆಸಿದ್ದು, ಇದಕ್ಕೆ ಭಾರತೀಯ ಸೇನೆಯು 'ಆಪರೇಷನ್ ಸಿಂಧೂರ್' ಕಾರ್ಯಾಚರಣೆ ಅಡಿಯಲ್ಲಿ ತಕ್ಕ ಪ್ರತ್ಯುತ್ತರ ಕೊಡುತ್ತಿದೆ. ಈ ಕಾರ್ಯಾಚರಣೆ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರು ಪ್ರತಿಕ್ರಿಯಿಸಿ ತಮಗೆ ಅವಕಾಶ ಸಿಕ್ಕರೆ ಏನು ಮಾಡುತ್ತೇನೆ ಎಂದು ಹೇಳಿದ್ದಾರೆ.
ಕಲಬುರಗಿಯಲ್ಲಿ ಇಂದು (ಮೇ 10) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಮನಸು ಮಾಡಿದರೆ ಎರಡೇ ದಿನದಲ್ಲಿ ಪಾಕಿಸ್ತಾನವನ್ನು ಸರ್ವನಾಶ ಮಾಡಬಹುದು. ಪಾಕಿಸ್ತಾನದವರ ಬಳಿ ಏನು ಇಲ್ಲ, ಅದು ಠುಸ್ ಪಟಾಕಿ ಇದ್ದಂತೆ ಎಮದು ಹೇಳಿದ್ದಾರೆ.












Click it and Unblock the Notifications