Get Updates
Get notified of breaking news, exclusive insights, and must-see stories!

ಮಕ್ಕಳ ಕಳ್ಳರ ವದಂತಿ ನಿಗ್ರಹಕ್ಕೆ ಸಿಎಂ ಎಚ್ಡಿಕೆ ಸೂಚನೆ

ಬೆಂಗಳೂರು, ಮೇ 26: ರಾಜ್ಯದಲ್ಲಿ ಇತ್ತೀಚಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ಕಳ್ಳರ ಬಗ್ಗೆ ಹರಿದಾಡುತ್ತಿರುವ ವದಂತಿಗಳಿಂದ ಜನರಲ್ಲಿ ಮೂಡಿರುವ ಆತಂಕವನ್ನು ದೂರ ಮಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಕುರಿತು ಆತಂಕದಲ್ಲಿರುವ ಸಾರ್ವಜನಿಕರು ಅಪರಿಚಿತರನ್ನು ಮಕ್ಕಳ ಕಳ್ಳರೆಂದು ಭಾವಿಸಿ ಮಾರಣಾಂತಿಕ ಹಲ್ಲೆಗಳನ್ನು ನಡೆಸಿರುವ ಹಲವು ಘಟನೆಗಳು ಈಗಾಗಲೇ ದಾಖಲಾಗಿರುವುದರಿಂದ ಇತರೆ ಕಡೆಗಳಲ್ಲಿ ಸಹ ಇವು ಮರುಕಳಿಸುವ ಅವಕಾಶವಿದೆ. ಹಾಗಾಗಿ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

HDK instructs curb rumors about child theft

ನಿಪಾಹ್ ವೈರಸ್: ಕೇರಳದಲ್ಲಿ ಕಾಣಿಸಿಕೊಂಡಿರುವ ನಿಪಾಹ್ ವೈರಸ್ ಹಾಗೂ ಆ ರೋಗದ ಗುಣಲಕ್ಷಣಗಳ ಬಗ್ಗೆ ಎಚ್ಚರಿಕೆ ವಹಿಸಲು ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಕುರಿತು ರಾಜ್ಯದ ಜನತೆಗೆ ಅರಿವು ಮೂಡಿಸುವತೆ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸಹ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+