ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾಸಗಿ ಶಾಲಾ ಶಿಕ್ಷಕರು, ಅತಿಥಿ ಉಪನ್ಯಾಸಕರ ನೆರವಿಗೆ ಎಚ್‌ಡಿಕೆ ಒತ್ತಾಯ

|
Google Oneindia Kannada News

ಬೆಂಗಳೂರು, ಆಗಸ್ಟ್ 08: ಖಾಸಗಿ ಶಾಲಾ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದಾರೆ. ಅವರ ನೆರವಿಗೆ ಧಾವಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

Recommended Video

Kerala Rains : ವರುಣನ ಅಬ್ಬರಕೆ ಬೆಚ್ಚಿಬಿದ್ದ ದೇವರ ನಾಡು | Oneindia Kannada

ಈ ಕೊರೊನಾ ಭೀತಿ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣವನ್ನು ಮುಂದಿಟ್ಟುಕೊಂಡು ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿದೆ.

ಇದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಅತಿವೃಷ್ಟಿ ಪರಿಸ್ಥಿತಿ ನಿರ್ವಹಿಸಲು ಸರ್ಕಾರಕ್ಕೆ ಸಲಹೆ ನೀಡಿದ ಎಚ್‌ಡಿಕೆಅತಿವೃಷ್ಟಿ ಪರಿಸ್ಥಿತಿ ನಿರ್ವಹಿಸಲು ಸರ್ಕಾರಕ್ಕೆ ಸಲಹೆ ನೀಡಿದ ಎಚ್‌ಡಿಕೆ

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ.

ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಕೊರೊನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಆತಂಕದಲ್ಲಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸರ್ಕಾರ ಶಿಕ್ಷಕರ ನೆರವಿಗೆ ಧಾವಿಸಬೇಕು

ಸರ್ಕಾರ ಶಿಕ್ಷಕರ ನೆರವಿಗೆ ಧಾವಿಸಬೇಕು

ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು.

ಶಿಕ್ಷಕರಿಗೆ ಆರ್ಥಿಕ ನೆರವು ನೀಡಬೇಕು

ಶಿಕ್ಷಕರಿಗೆ ಆರ್ಥಿಕ ನೆರವು ನೀಡಬೇಕು

ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು.

ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರಿದ್ದಾರೆ

ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರಿದ್ದಾರೆ

ಕೊರೋನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು.

ಶಿಕ್ಷಕರನ್ನು ಕೆಲಸದಿಂದ ತೆಗೆಯಬೇಡಿ

ಶಿಕ್ಷಕರನ್ನು ಕೆಲಸದಿಂದ ತೆಗೆಯಬೇಡಿ

ಈ ಕೊರೊನಾ ಭೀತಿ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಒಂದೇ ಒಂದು ಕಾರಣವನ್ನಿಟ್ಟುಕೊಂಡು ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿದೆ.

English summary
Former Chief Minister HD Kumaraswamy Urged State Government To Help Private schools Teachers And Guest Lecturers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X