ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಕಷ್ಟದಲ್ಲಿ ಸಿಲುಕಿದ್ದ ಸಿ.ಟಿ.ರವಿಯನ್ನು ಪಾರು ಮಾಡಿದ್ದ ಕುಮಾರಸ್ವಾಮಿ

|
Google Oneindia Kannada News

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆಡಿದ ಮಾತಿಗೆ, ಬಿಜೆಪಿ ನಾಯಕರು ಮುಗಿಬಿದ್ದದ್ದು ಗೊತ್ತೇ ಇದೆ. ಬಿಜೆಪಿ ನಾಯಕರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿರುವ ಕುಮಾರಸ್ವಾಮಿ ಈಗ ಸಿ.ಟಿ.ರವಿ ಟ್ವೀಟಿಗೂ ಖಡಕ್ ಪ್ರತ್ಯುತ್ತರ ನೀಡಿದ್ದಾರೆ.

"ಮಾಜಿ ಪ್ರಧಾನಿ ಶ್ರೀಯುತ ದೇವೇಗೌಡ ಅವರು ಆರ್‌ಎಸ್‌ಎಸ್‌ ಸಿದ್ದಾಂತಗಳನ್ನು ಒಪ್ಪಿಕೊಂಡಿದ್ದಾರೆ. ಆದರೆ ಅವರ ಪುತ್ರರಾದ ಮಾಜಿ ಸಿಎಂ ಕುಮಾರಸ್ವಾಮಿ ಅವರು ಮಾತ್ರ ಸಂಘದ ಸಿದ್ದಾಂತಗಳ ಬಗ್ಗೆ ಹಗುರವಾಗಿ ಮಾತನಾಡಿರುವುದು ಅವರ ಅಪ್ರಬುದ್ಧತೆಗೆ ಸಾಕ್ಷಿ" ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದರು.

Who is that ಸಿದ್ದರಾಮಯ್ಯ, ಅವರೇನು ದೊಣ್ಣೆನಾಯಕನಾ? ಎಚ್ಡಿಕೆ ಆಕ್ರೋಶWho is that ಸಿದ್ದರಾಮಯ್ಯ, ಅವರೇನು ದೊಣ್ಣೆನಾಯಕನಾ? ಎಚ್ಡಿಕೆ ಆಕ್ರೋಶ

ಇದಕ್ಕೆ ಉತ್ತರ ನೀಡಿರುವ ಕುಮಾರಸ್ವಾಮಿ, "2006ಕ್ಕಿಂತ ಮೊದಲು ರಾಜ್ಯದಲ್ಲಿದ್ದ ಬಿಜೆಪಿ ನಾಯಕರ ಚರಿತ್ರೆ ಗಮನಿಸಿ. ಜನರ ಬಾಯಿಯಲ್ಲಿ ಅವರ ಹಗರಣಗಳ ಕಥೆಗಳಿವೆ. RSSನಿಂದ ಅವರೆಲ್ಲ ತರಬೇತಿ ಪಡೆದು ರಾಷ್ಟ್ರ ನಿರ್ಮಾಣ ಮಾಡಿದರೋ, ಜನರ ಹಣ ಲೂಟಿ ಹೊಡೆದು ತಮ್ಮ ಸಾಮ್ರಾಜ್ಯಗಳನ್ನು ನಿರ್ಮಾಣ ಮಾಡಿಕೊಂಡರೋ ಎನ್ನುವುದನ್ನು ತಿಳಿದುಕೊಳ್ಳಿ" ಎಂದು ತಿರುಗೇಟು ನೀಡಿದ್ದಾರೆ.

ಹದಿನಾರು ಸರಣಿ ಟ್ವೀಟ್ ಅನ್ನು ಮಾಡಿರುವ ಕುಮಾರಸ್ವಾಮಿಯವರು, ಸಂಘದ ಮೇಲಿನ ನಿಷ್ಠೆ ನಿಮ್ಮನ್ನು ರಕ್ಷಣೆ ಮಾಡಿಲ್ಲ, ನಿಮ್ಮನ್ನು ರಕ್ಷಣೆ ಮಾಡಿದ್ದು ನಾನು, ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಿ ಎಂದು ಎಚ್ಡಿಕೆ ಹೇಳಿರುವುದು, ಸಿ.ಟಿ.ರವಿಯವರನ್ನು ಯಾವ ಸಂದರ್ಭದಲ್ಲಿ ಎಚ್ಡಿಕೆ ರಕ್ಷಿಸಿದರು ಎನ್ನುವ ಪ್ರಶ್ನೆ, ಪ್ರಶ್ನೆಯಾಗಿಯೇ ಉಳಿದಿದೆ. ಎಚ್ಡಿಕೆ ಮಾಡಿರುವ ಕೆಲವೊಂದು ಟ್ವೀಟ್ ಹೀಗಿದೆ.

ಆರ್‌ಎಸ್‌ಎಸ್ ವಿಚಾರ; ಸಿ. ಟಿ. ರವಿಗೆ ಟ್ವೀಟ್ ಬಾಣ ಬಿಟ್ಟ ಎಚ್‌ಡಿಕೆ!ಆರ್‌ಎಸ್‌ಎಸ್ ವಿಚಾರ; ಸಿ. ಟಿ. ರವಿಗೆ ಟ್ವೀಟ್ ಬಾಣ ಬಿಟ್ಟ ಎಚ್‌ಡಿಕೆ!

 ಅಟಲ್, ಅಡ್ವಾಣಿ ಅವರಂತೆ ಗೌಡರೂ ತುರ್ತುಪರಿಸ್ಥಿತಿ ವಿರುದ್ಧ ದನಿಯೆತ್ತಿ ಜೈಲಿಗೆ ಹೋಗಿದ್ದರು

ಅಟಲ್, ಅಡ್ವಾಣಿ ಅವರಂತೆ ಗೌಡರೂ ತುರ್ತುಪರಿಸ್ಥಿತಿ ವಿರುದ್ಧ ದನಿಯೆತ್ತಿ ಜೈಲಿಗೆ ಹೋಗಿದ್ದರು

"ರಾಜ್ಯದಲ್ಲಿ ಭ್ರಷ್ಟಾಚಾರವನ್ನು ಕಂಡರಿಯದ ಮಟ್ಟಕ್ಕೆ ತೆಗೆದುಕೊಂಡು ಹೋಗಿದ್ದೇ ಬಿಜೆಪಿ ಸರಕಾರ. ಒಮ್ಮೆ ಹಳೆಯದನ್ನೆಲ್ಲ ನೆನಪು ಮಾಡಿಕೊಳ್ಳಿ. ಅಧಿಕಾರದಲ್ಲಿದ್ದಾಗ ದೇಶದ ಸಂಪತ್ತು, ಜನರ ತೆರಿಗೆ ಹಣ ಲೂಟಿ ಹೊಡೆಯುವ ಕೆಲಸ ಮಾಡಿಲ್ಲ ನಾವು. ನಮ್ಮ ಕುಟುಂಬ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಆಸರೆಯಾಗಿ ಅವರ ಮನೆಗಳ ಬೆಳಕಾಗಿದೆ".

"1975ರಲ್ಲಿ ಜನಸಂಘವೂ ಜನತಾ ಪಕ್ಷದ ಮೈತ್ರಿ ಭಾಗವಾಗಿತ್ತು. ಆಗ ಜನಸಂಘದ ನಾಯಕರ ಜತೆ ದೇವೇಗೌಡರೂ ವೇದಿಕೆ ಹಂಚಿಕೊಂಡಿದ್ದರು. ಅಟಲ್, ಅಡ್ವಾಣಿ ಅವರಂತೆ ಗೌಡರೂ ತುರ್ತುಪರಿಸ್ಥಿತಿ ವಿರುದ್ಧ ದನಿಯೆತ್ತಿ ಜೈಲಿಗೆ ಹೋಗಿದ್ದರು. ಆದರೆ, 1975ರ RSSʼಗೂ ಈಗಿನ RSSʼಗೂ ಅಜಗಜಾಂತರ ವ್ಯತ್ಯಾಸವಿದೆ. ಇದು ನಿಮಗಿಂತ ಗೌಡರಿಗೇ ಚೆನ್ನಾಗಿ ಗೊತ್ತು" - ಎಚ್.ಡಿ.ಕುಮಾರಸ್ವಾಮಿ ಟ್ವೀಟ್.

ಎಚ್.ಡಿ.ಕುಮಾರಸ್ವಾಮಿಯ ನಿಸ್ವಾರ್ಥತೆಯ ಫಲಾನುಭವಿ ನೀವು

"ನನ್ನ ಸೇವಾ ಗುಣ, ನಿಸ್ವಾರ್ಥತೆ ಏನೆಂಬುದು ಜನರಿಗಿಂತ ಒಮ್ಮೆ ಸಂಕಷ್ಟಕ್ಕೆ ಸಿಲುಕಿದ್ದ ನಿಮಗೇ ಚನ್ನಾಗಿ ಗೊತ್ತಿದೆ ಎಂಬುದು ನನ್ನ ಭಾವನೆ. ಅಂದು ಆರೆಸ್ಸೆಸ್ ಮೇಲಿನ ನಿಷ್ಠೆ ನಿಮ್ಮನ್ನು ರಕ್ಷಣೆ ಮಾಡಲಿಲ್ಲ. ಎಚ್.ಡಿ.ಕುಮಾರಸ್ವಾಮಿಯ ನಿಸ್ವಾರ್ಥತೆಯ ಫಲಾನುಭವಿ ನೀವು. ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಿ ಸಿ.ಟಿ.ರವಿಯವರೇ".

"ಎಮರ್ಜೆನ್ಸಿ ವೇಳೆ ಜನಸಂಘವಷ್ಟೇ ಅಲ್ಲ, ಅನೇಕ ನಾಯಕರು ಜೈಲಿಗೆ ಹೋಗಿದ್ದರು. ಅಡ್ವಾಣಿ ಅವರು ಬೆಂಗಳೂರು ಜೈಲಿನಲ್ಲೇ ಇದ್ದರು. ಅಲ್ಲಿ ಅಡ್ವಾಣಿ ಅವರೊಂದಿಗಿನ ಒಡನಾಟದಿಂದ ಗೌಡರು ಹಾಗೆ ಹೇಳಿರಬಹುದು. ಎಮರ್ಜೆನ್ಸಿ ಬಳಿಕ RSS ಹೇಗೆ ಬದಲಾಯಿತೆಂಬುದು ಅವರಿಗೆ ತಿಳಿದಿದೆ. ಮೈಸೂರಿನಲ್ಲಿ ಗೌಡರು ಹೇಳಿದ್ದನ್ನೇ ಇವತ್ತು ತಿರುಚಿ ಹೇಳಬೇಡಿ" ಎಚ್.ಡಿ.ಕುಮಾರಸ್ವಾಮಿ ಟ್ವೀಟ್.

 ಬಿಜೆಪಿ ಜತೆ ನಾನು ಸರಕಾರ ರಚಿಸಿದ ಕಾರಣಕ್ಕೆ ಅವರ ಆರೋಗ್ಯ ಹಾಳಾಯಿತು

ಬಿಜೆಪಿ ಜತೆ ನಾನು ಸರಕಾರ ರಚಿಸಿದ ಕಾರಣಕ್ಕೆ ಅವರ ಆರೋಗ್ಯ ಹಾಳಾಯಿತು

"ಗೌಡರು ಎಂದೂ RSS ಒಪ್ಪಿಲ್ಲ. ಹಾಗಿದ್ದಿದ್ದರೆ, ಪ್ರಧಾನಿ ಆಗಿದ್ದ ಅವರಿಗೆ ಕಾಂಗ್ರೆಸ್ ʼಕೈʼಕೊಟ್ಟಾಗ ಬೆಂಬಲಕ್ಕೆ ಬಂದ ವಾಜಪೇಯಿ ಅವರ ಆಫರ್ ಒಪ್ಪುತ್ತಿದ್ದರು. ಅಷ್ಟೇ ಏಕೆ, ಬಿಜೆಪಿ ಜತೆ ನಾನು ಸರಕಾರ ರಚಿಸಿದ ಕಾರಣಕ್ಕೆ ಅವರ ಆರೋಗ್ಯ ಹಾಳಾಯಿತು. ಇದು RSS ಬಗ್ಗೆ ಗೌಡರು ಕಾಯ್ದುಕೊಂಡಿರುವ ಅಂತರ. ಅಪ್ರಬುದ್ಧತೆ ಇರುವುದು ಯಾರಿಗೆ?"

"ಸೇವೆ, ಸಂಸ್ಕಾರ RSS ನೀಡುತ್ತಿದೆ ಎನ್ನುತ್ತೀರಿ. ಆದರೆ ಸಮಾಜಕ್ಕೆ ಬೇಕಿರುವುದು ನೆಮ್ಮದಿ, ಶಾಂತಿ, ಮಾಡುವ ಕೈಗಳಿಗೆ ಉದ್ಯೋಗ, ಹಸಿದ ಹೊಟ್ಟೆಗೆ ಅನ್ನ. ಈ ವಿಷಯದಲ್ಲಿ RSS ಏನು ಮಾಡಿದೆ ಎಂಬುದನ್ನು ಜನರ ಮುಂದಿಡಿ. ಬದುಕಿಗೆ ಶಿಕ್ಷಣ ಕೊಡುವುದು ಬಿಟ್ಟು ರಾಷ್ಟ್ರವನ್ನು ಒಡೆಯುವ ರೀತಿ ಮುಗ್ಧ ಮಕ್ಕಳ ಮಿದುಳು ಹಾಳು ಮಾಡುತ್ತಿದ್ದೀರಿ" - ಎಚ್.ಡಿ.ಕುಮಾರಸ್ವಾಮಿ ಟ್ವೀಟ್.

 ಇಂದಿರಾಗಾಂಧಿ, ರಾಜೀವ್ ಗಾಂಧಿ ರಾಷ್ಟ್ರಕ್ಕಾಗಿ ಜೀವತ್ಯಾಗ ಮಾಡಿದರು

ಇಂದಿರಾಗಾಂಧಿ, ರಾಜೀವ್ ಗಾಂಧಿ ರಾಷ್ಟ್ರಕ್ಕಾಗಿ ಜೀವತ್ಯಾಗ ಮಾಡಿದರು

"ಸೇವೆ, ಸಂಸ್ಕಾರ RSS ಗುತ್ತಿಗೆಯಲ್ಲ. ದೇಶಕ್ಕಾಗಿ ನಿಮ್ಮ ಕೊಡಗೆ, ತ್ಯಾಗ ಏನು? ಇಂದಿರಾಗಾಂಧಿ, ರಾಜೀವ್ ಗಾಂಧಿ ರಾಷ್ಟ್ರಕ್ಕಾಗಿ ಜೀವತ್ಯಾಗ ಮಾಡಿದರು. ನಿಮ್ಮಲ್ಲಿ ಅಂಥವರು ಒಬ್ಬರಿದ್ದಾರಾ? ಸ್ವಾತಂತ್ರ್ಯ ತಂದುಕೊಟ್ಟ ಗಾಂಧೀಜಿಗೇ ಗುಂಡಿಕ್ಕಿದವರು ನೀವು. ನೀವು ಸಮಾಜದ ಉದ್ಧಾರ ಮಾಡುತ್ತೀರಾ? ಇದಕ್ಕೇ RSS ʼವಿಶ್ವಕುಖ್ಯಾತಿʼ ಆಗಿದ್ದು" ಎಂದು ಎಚ್.ಡಿ. ಕುಮಾರಸ್ವಾಮಿಯವರು ಸಾಲುಸಾಲು ಟ್ವೀಟ್ ಮೂಲಕ ಸಿ.ಟಿ.ರವಿಯವರಿಗೆ ತಿರುಗೇಟು ನೀಡಿದ್ದಾರೆ.

Recommended Video

ಇವತ್ತು RCB ಮೇಲಿರೋ ಜವಾಬ್ದಾರಿಯ ಕಂಪ್ಲೀಟ್ ಡೀಟೇಲ್ಸ್ | Oneindia Kannada

English summary
HDK vs RSS: HD Kumaraswamy Reaction to CT Ravi statement on him and RSS. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X