ರಾಜ್ಯಪಾಲರು ಹೇಳಿದ ಬಾಕಿ ಕಡತ ಎಚ್‌ಡಿಕೆದೇ, ಕ್ರಮ ಆಗಲಿ: ಜಿ. ಪರಮೇಶ್ವರ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧವಿರುವ ಪ್ರಕರಣವನ್ನು ಬಾಕಿ ಉಳಿಸಿಕೊಂಡಿದ್ದಾರೆ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದ್ದಾರೆ. ರಾಜ್ಯಪಾಲರು ಈಗಾಗಲೇ ಒಂದು ಕಡತ ಮಾತ್ರ ತಮ್ಮ ಬಳಿ ಇರುವುದಾಗಿ ಹೇಳಿದ್ದಾರೆ. ಅದು ಯಾವುದು ಎನ್ನುವುದ ಗೊತ್ತಿದೆ ಎಂದು ಪರಮೇಶ್ವರ ಅವರು ಹೇಳಿದ್ದಾರೆ. ಮುಂದುವರಿದು ಲೋಕಾಯುಕ್ತ ಪೊಲೀಸರು ರಾಜ್ಯಪಾಲರಿಗೆ ಮಾಹಿತಿ ನೀಡಲಿದ್ದಾರೆ ಎಂದು ಸಹ ಅವರು ಹೇಳಿದ್ದಾರೆ.
ಈ ವಿಷಯದ ಬಗ್ಗೆ ಮಾತನಾಡಿರುವ ಜಿ. ಪರಮೇಶ್ವರ ಅವರು ರಾಜ್ಯಪಾಲರು ತಮ್ಮ ಬಳಿ ಒಂದು ಕಡತ ಮಾತ್ರ ಇದೆ ಎಂದು ಶನಿವಾರವೇ ತಿಳಿಸಿದ್ದಾರೆ. ಎಚ್.ಡಿ.ಕುಮಾರಸ್ವಾಮಿಯವರದ್ದು ಎಂಬುದು ಗೊತ್ತಾಗಿದೆ. ಅದಕ್ಕಾದರೂ ಕ್ರಮ ತೆಗೆದುಕೊಳ್ಳಬೇಕಲ್ಲವೇ? ಕಾನೂನು ರೀತಿ ಇದೆಯೇ? ಕಾನೂನು ಬಾಹಿರವಾಗಿದೆಯೇ ಎಂಬುದನ್ನು ಲೋಕಾಯುಕ್ತದವರು ತಿಳಿಸಿದ್ದಾರೆ. ಅದನ್ನು ಆಧರಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಪರಮೇಶ್ವರ ಅವರು ಆಗ್ರಹಿಸಿದ್ದಾರೆ.

ರಾಜ್ಯಪಾಲರ ದೂರಿನ ಬಗ್ಗೆ ಸ್ಪಷ್ಟೀಕರಣ ಕೊಡುತ್ತೇವೆ
ಇನ್ನು ರಾಜ್ಯಪಾಲರ ದೂರುಗಳ ಬಗ್ಗೆಯೂ ಸ್ಪಷ್ಟೀಕರಣ ನೀಡಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಅವರು ಹೇಳಿದ್ದಾರೆ. ರಾಜ್ಯಪಾಲರು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಸೂಚಿಸಿದ್ದಾರೆ. ಕೆಲವು ದೂರುಗಳ ಬಗ್ಗೆ ಸ್ಪಷ್ಟೀಕರಣ ನೀಡುವಂತೆ ಲೋಕಾಯುಕ್ತಕ್ಕೆ ವಾಪಸ್ ಕಳುಹಿಸಿದ್ದಾರೆ. ಲೋಕಾಯುಕ್ತದವರು ಸ್ಪಷ್ಟೀಕರಣ ನೀಡಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದ್ದಾರೆ.
ಲೋಕಾಯುಕ್ತದಿಂದ ದೂರುಗಳ ಕಡತ ಈಗಾಗಲೇ ಹೋಗಿದೆ. ಇದಾದ ನಂತರ, ಕ್ಲ್ಯಾರಿಫಿಕೇಶನ್ ಕೇಳಿ ವಾಪಸ್ ಕಳುಹಿಸಿದ್ದೇವೆ ಎಂದು ರಾಜ್ಯಪಾಲರು ಹೇಳುತ್ತಿದ್ದಾರೆ. ಲೋಕಾಯುಕ್ತದಿಂದ ಸ್ಪಷ್ಟೀಕರಣ ಬರುವವರೆಗೂ ವಿಷಯ ರಿಜೆಕ್ಟ್ ಆಗುವುದಿಲ್ಲ. ರಾಜ್ಯಪಾಲರ ಬಳಿ ಇದ್ದಂತೆಯಲ್ಲವೇ? ಇದನ್ನೇ ರಾಜ್ಯಪಾಲರು ನನ್ನ ಬಳಿ ದೂರುಗಳು ಬಾಕಿ ಇಲ್ಲ ಎಂದು ಹೇಳುತ್ತಿದ್ದಾರೆ ಎಂದಿದ್ದಾರೆ.
ರಾಜ್ಯಪಾಲರ ಕಚೇರಿಯಿಂದ ಮೂರು ದೂರುಗಳ ಕುರಿತು ಕ್ಲಾರಿಫಿಕೇಶನ್ ಕೇಳಿದ್ದಾರೆ. ಈ ರೀತಿ ರಾಜ್ಯಪಾಲರು ಮಾಹಿತಿ ಅಥವಾ ಸ್ಪಷ್ಟೀಕರಣ ಕೇಳುವ ಸಂದರ್ಭದಲ್ಲಿ ಲೋಕಾಯುಕ್ತದವರು ಮಾಹಿತಿ ನೀಡಬೇಕಾಗುತ್ತದೆ. ರಾಜ್ಯಪಾಲರು ಕೇಳಿದ ಸಂದರ್ಭದಲ್ಲಿ ಸುಮ್ಮನೆ ಇರಲು ಸಾಧ್ಯವಿಲ್ಲ. ಅವರು ಕೇಳಿದ ನಿರ್ದಿಷ್ಟ ಸ್ಪಷ್ಟೀಕರಣ ನೀಡಬೇಕಾಗುತ್ತದೆ. ಲೋಕಾಯುಕ್ತರು ನೀಡುವ ಸ್ಪಷ್ಟೀಕರಣ ಹಾಗೂ ಅದರ ಆಧಾರದ ಮೇಲೆ ರಾಜ್ಯಪಾಲರು ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಎನ್ನುವುದು ರಾಜ್ಯಪಾಲರ ವಿವೇಚನೆಗೆ ಬಿಟ್ಟದ್ದು ಎಂದು ಹೇಳಿದರು.

ಇನ್ನು ರಾಜ್ಯಪಾಲರು ಒಂದು ಕಡತ ಮಾತ್ರ ಇದೆ ಎಂಬುದನ್ನು ನಿನ್ನೆ ತಿಳಿಸಿದರು. ಹೆಚ್.ಡಿ.ಕುಮಾರಸ್ವಾಮಿಯವರದ್ದು ಎಂಬುದು ಗೊತ್ತಾಗಿದೆ. ಅದಕ್ಕಾದರೂ ಕ್ರಮ ತೆಗೆದುಕೊಳ್ಳಬೇಕಲ್ಲವೇ? ಕಾನೂನು ರೀತಿ ಇದೆಯೇ? ಕಾನೂನು ಬಾಹಿರವಾಗಿದೆಯೇ ಎಂಬುದನ್ನು ಲೋಕಾಯುಕ್ತದವರು ತಿಳಿಸಿದ್ದಾರೆ. ಅದನ್ನು ಆಧರಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಸಿದ್ದಾರ್ಥ ಟ್ರಸ್ಟ್‌ಗೆ ನೀಡಿರುವ ಕೆಐಎಡಿಬಿ ನಿವೇಶನದ ಬಗ್ಗೆ ರಾಜ್ಯಪಾಲರ ಬಳಿ ಚರ್ಚೆ ಆಗಿಲ್ಲ. ವಿಶೇಷ ಅಧಿವೇಶನ ಕರೆಯುವ ಬಗ್ಗೆ ಮುಖ್ಯಮಂತ್ರಿಯವರ ಬಳಿ ಪ್ರಸ್ತಾಪ ಆಗಿಲ್ಲ. ಕೋರ್ಟ್ ತೀರ್ಪು ಆಧರಿಸಿ, ಮುಂದಿನ ಬೆಳವಣಿಗೆಗಳನ್ನು ನೋಡಿ ರಾಷ್ಟ್ರಪತಿ ಭೇಟಿಯ ಬಗ್ಗೆ ತೀರ್ಮಾನಿಸಲಾಗುವುದು ಎಂದರು.
ಮುಡಾ ವಿಚಾರದಿಂದ ಸಿಎಂ ಆತಂಕಗೊಂಡಿದ್ದಾರೆ ಎಂಬುದರ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಪರಮೇಶ್ವರ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತಂಕದಲಿಲ್ಲ. ಎಲ್ಲ ವಿಚಾರದಲ್ಲೂ ಸ್ಪಷ್ಟವಾಗಿದ್ದಾರೆ. ವಿರೋಧ ಪಕ್ಷದ ನಾಯಕನಾಗಿ, ಮುಖ್ಯಮಂತ್ರಿಯಾಗಿ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿಲ್ಲ. ಯಾವುದೇ ರೀತಿಯ ಕಾನೂನು ಬಾಹಿರ ಕೆಲಸಗಳನ್ನು ಮಾಡಿಲ್ಲ ಎಂಬುದನ್ನು ರಾಜ್ಯದ ಜನತೆಯ ಮುಂದೆ ಸ್ಪಷ್ಟಪಡಿಸಿದ್ದಾರೆ ಎಂದರು.
ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿಕುನ್ಹಾ ಅವರು ಮುಖ್ಯಮಂತ್ರಿಯವರಿಗೆ ವರದಿ ಸಲ್ಲಿಸುವಾಗ ನಾನು ಇರಲಿಲ್ಲ. ಅದನ್ನು ಪರಿಶೀಲಿಸಿ, ಏನು ಶಿಫಾರಸ್ಸು ಮಾಡಿದ್ದಾರೆ ಎಂಬುದನ್ನು ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಯಾವುದಾದರು ವಿಷಯದ ಕುರಿತು ಸತ್ಯಾಸತ್ಯತೆಗಳನ್ನು ಸರ್ಕಾರಕ್ಕೆ ತಿಳಿಸಬೇಕು ಎಂಬ ಉದ್ದೇಶ ಇಟ್ಟುಕೊಂಡು ಕೆಲವು ಆಯೋಗಗಳನ್ನು ರಚಿಸಲಾಗಿರುತ್ತದೆ. ಆಯೋಗ ವರದಿ ಬಂದಾದ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ. ಇಲ್ಲವಾದರೆ ಆಯೋಗ ಏಕೆ ರಚಿಸಬೇಕು ಎಂದು ಪ್ರಶ್ನೆ ಮಾಡಿದ ಅವರು, ಕುನ್ನಾ ವರದಿ ಕ್ಯಾಬಿನೆಟ್ ಮುಂದೆ ಬಂದರೆ ಚರ್ಚಿಸಲಾಗುವುದು ಎಂದರು.












Click it and Unblock the Notifications