ಇನ್ನುಮುಂದೆ ಕಾಲೇಜುಗಳಲ್ಲೇ ಸಿಗುತ್ತೆ ಆಧಾರ್ ಕಾರ್ಡ್

ಬೆಂಗಳೂರು, ಸೆಪ್ಟೆಂಬರ್ 21: ವಿದ್ಯಾರ್ಥಿಗಳು ಆಧಾರ್ ಕಾರ್ಡ್ ಮಾಡಿಸಿಕೊಳ್ಳಲು ಕಾಲೇಜುಗಳಿಗೆ ಚೆಕ್ಕರ್ ಹಾಕಿ ಹೋಗಬೇಕಿಲ್ಲ, ಇನ್ನುಮುಂದೆ ಕಾಲೇಜಿನಲ್ಲಿಯೇ ಆಧಾರ್ ಅಪ್‌ಡೇಟ್ ಹಾಗೂ ನೋಂದಣಿ ಕ್ಯಾಂಪ್ ಗಳನ್ನು ನಡೆಸುವಂತೆ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಪ್ರಥಮ ದರ್ಜೆ ಹಾಗೂ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿ ಆಧಾರ್ ನೋಂದಣಿ ಕ್ಯಾಂಪ್ ಗಳನ್ನು ಆಯೋಜಿಸಲಾಗುತ್ತದೆ. ಹೊಸ ಮೊಬೈಲ್ ಸಂಪರ್ಕ, ಬ್ಯಾಂಕ್ ಖಾತೆ, ಚಾಲನಾ ಪರವಾನಗಿ, ವಿದ್ಯಾರ್ಥಿ ವೇತನ, ಫೆಲೋಶಿಪ್, ಬೋರ್ಡ್ ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು, ಪಾಸ್‌ಪೋರ್ಟ್ ಸೇರಿದಂತೆ ಅನೇಕ ಕಾರ್ಯಗಳಿಗೆ ಎಲ್ಲರಿಗೂ ಆಧಾರ್ ಕಾರ್ಡ್ ಅನಿವಾರ್ಯವಾಗಿದೆ.

ಆಧಾರ್ ಕಾರ್ಡ್ ನೋಂದಣಿ ಅಥವಾ ಅಪ್ ಡೇಟ್ ಮಾಡಿಕೊಳ್ಳಲು ಪ್ರೋತ್ಸಾಹಿಸುವಂತೆ ಸೂಚಿಸಲಾಗಿದೆ. ಆಧಾರ್ ನೋಂದಣಿ ಮಾಡಿಸದ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪ್ರವೇಶ ನಿರಾಕರಿಸುವಂತಿಲ್ಲ ಎಂದು ಇಲಾಖೆ ತಿಳಿಸಿದೆ.

HE dept to install AADHAAR centers in degree colleges

ಹತ್ತಿರದಲ್ಲಿ ಲಭ್ಯವಿರುವ ಬ್ಯಾಂಕ್ ಮತ್ತು ಅಂಚೆ ಕಚೇರಿಗಳಂತಹ ಆಧಾರ್ ನೋಂದಣಿ ಕೇಂದ್ರಗಳ ಮೂಲಕ ನೋಂದಣಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಕಾಲೇಜುಗಳಲ್ಲಿ ಆಧಾರ್ ಕ್ಯಾಂಪ್ ಏರ್ಪಡಿಸಬೇಕು ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+