ಆರೋಗ್ಯ ಕಾರ್ಡ್ ಇಲ್ಲದಿದ್ದರೂ ಪಡಿತರ ಚೀಟಿ ಆಧರಿಸಿ ಚಿಕಿತ್ಸೆ: ಸ್ಪಷ್ಟನೆ
ಬೆಂಗಳೂರು, ಆಗಸ್ಟ್ 2: ಮಹತ್ವಾಕಾಂಕ್ಷಿಯ ಆರೋಗ್ಯ ಕರ್ನಾಟಕ ಯೋಜನೆ ಈವರೆಗೂ ಜಾರಿಯಾಗದ ಹಿನ್ನೆಲೆಯಲ್ಲಿ ಈಗಿನಂತೆಯೇ ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಹೊಂದಿದವರೆಗೆ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸಿಗಲಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ್ ಭರವಸೆ ನೀಡಿದ್ದಾರೆ.
2019ರ ವೇಳೆಗೆ ಆರೋಗ್ಯ ಕಾರ್ಡ್‌ಗಳು ಸಂಪೂರ್ಣವಾಗಿ ವಿತರಣೆಯಾಗಲಿವೆ, ಉಚಿತ ಚಿಕಿತ್ಸೆಗೆ ಆರೋಗ್ಯ ಕನಾಟಕ ಕಾರ್ಡ್ ಕಡ್ಡಾಯವಲ್ಲ, ಆರೋಗ್ಯ ಕಾರ್ಡ್ ಇಲ್ಲದೆ 13,591 ಮಂದಿ ಚಿಕಿತ್ಸೆ ಪಡೆದಿದ್ದಾರೆ, ಆರೋಓಗ್ಯ ಕರ್ನಾಟಕ ಕಾರ್ಡ್ ವಿತರಣೆಯಾಗುವುದು ಸ್ವಲ್ಪ ವಿಳಂಬವಾಗಲಿದೆ ಹಾಗಾಗಿ ಈ ಹಿಂದಿನಂತೆಯೇ ಬಿಪಿಎಲ್ ಹಾಗೂ ಎಪಿಎಲ್ ಪಡಿತರದಾರರಿಗೆ ಚಿಕಿತ್ಸೆ ದೊರೆಯಲಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ರಾಜ್ಯದಲ್ಲಿ ಯೂನಿವರ್ಸಲ್ ಹೆಲ್ತ್ ಸ್ಕೀಮ್ ಆರೋಗ್ಯ ಯೋಜನೆ ಜಾರಿಗೊಂಡಿದ್ದು ಕರ್ನಾಟಕದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಮೂರು ಹಂತದ ಆರೋಗ್ಯ ಚಿಕಿತ್ಸೆಗಳನ್ನು ಎಲ್ಲ ವರ್ಗದ ಜನರಿಗೆ ಉಚಿತವಾಗಿ ಕೊಡಲು ಸರ್ಕಾರ ಆದೇಶ ನೀಡಿದೆ.

ಆದರೆ ಈ ಯೋಜನೆಯ ಮಾರ್ಗದರ್ಶಿ ಸೂತ್ರದ ಅನುಸಾರ ಪ್ರತಿಯೊಬ್ಬ ನಾಗರಿಕರೂ ಹೆಲ್ತ್ ಕಾರ್ಡ್‌ಗಳನ್ನು ಹೊಂದಿ ಆ ಕಾರ್ಡ್ ಮೂಲಕವೇ ಚಿಕಿತ್ಸೆ ಪಡೆಯುವುದು ಕಡ್ಡಾಯವಾಗಿದೆ.
ಆದರೆ ರಾಜ್ಯ ಸರ್ಕಾರ ಎಲ್ಲರಿಗೂ ಆರೋಗ್ಯ ಕಾರ್ಡ್‌ಗಳನ್ನು ವಿತರಿಸುವಲ್ಲಿ ವಿಫಲವಾಗಿದೆ. ರಾಜ್ಯದ ಯಾವುದೇ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ನೀಡುತ್ತಿಲ್ಲ, ಹೀಗಾಗಿ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್‌ಗಳನ್ನು ಆಧರಿಸಿಯೇ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ನೀಡಲು ಮುಂದಾಗಿದೆ.












Click it and Unblock the Notifications